Homeಮುಖಪುಟದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ದ್ವೇಷ ಭಾಷಣ ಪ್ರಕರಣಗಳು ಹೆಚ್ಚಾಗುತ್ತಿವೆ. ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಧರ್ಮದ ಆಧಾರದ ಮೇಲೆ ದ್ವೇಷದ ಅಪರಾಧಗಳಿಗೆ ಯಾವುದೇ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿತು.

“ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ” ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ದ್ವೇಷ ಭಾಷಣದ ಸಮಸ್ಯೆಯನ್ನು ರಾಜ್ಯಗಳು ಒಪ್ಪಿಕೊಂಡರೆ ಮಾತ್ರ ಪರಿಹಾರವನ್ನು ಕಂಡುಕೊಳ್ಳಬಹುದು. ಅಂತಹ ಯಾವುದೇ ದ್ವೇಷ ಅಪರಾಧಗಳಿಂದ ತನ್ನ ನಾಗರಿಕರನ್ನು ರಕ್ಷಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠವು, ”ದ್ವೇಷ ಭಾಷಣದ ಪ್ರಕರಣಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದಾಗ ಅತ್ಯಂತ ಅಪಾಯಕಾರಿ ವಾತಾವರಣ ಬೆಳೆಯುತ್ತದೆ ಹಾಗಾಗಿ ದ್ವೇಷ ಭಾಷಣದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಅಭಿಪ್ರಯಪಟ್ಟಿದೆ.

ಮುಸ್ಲಿಂ ವ್ಯಕ್ತಿಯೊಬ್ಬರು, ಜುಲೈ 4, 2021 ಅಲಿಘರ್‌ಗೆ ಹೋಗಲು ಕಾರನ್ನು ಹತ್ತಿದಾಗ ಅಪರಾಧಿಗಳ “ಸ್ಕ್ರೂಡ್ರೈವರ್” ನಿಂದ ಧರ್ಮದ ಹೆಸರಿನಲ್ಲಿ ಹಲ್ಲೆ ಮತ್ತು ನಿಂದನೆ ಮಾಡಲಾಗಿದೆ ಎಂದು ಆರೋಪಿಸಿದ್ದರು. ಆ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಆದರೆ ಈ ಬಗ್ಗೆ ನೋಯ್ಡಾದ ಪೊಲೀಸರು ಈ ಬಗ್ಗೆ ಯಾವುದೇ ದೂರು ದಾಖಲಿಸಿಕೊಂಡಿಲ್ಲ.

ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಕೆ.ಎಂ.ನಟರಾಜ್ ಅವರಿಗೆ ನ್ಯಾಯಪೀಠವು, ”ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣದ ಪ್ರಕರಣಗಳು ಬೆಳೆಯುತ್ತಿದೆ. ಭಾರತದಂತಹ ಜಾತ್ಯತೀತ ದೇಶದಲ್ಲಿ ಧರ್ಮದ ಹೆಸರಿನಲ್ಲಿ ದ್ವೇಷದ ಅಪರಾಧಗಳಿಗೆ ಅವಕಾಶವಿಲ್ಲ. ಇದನ್ನು ಬೇರುಸಹಿತ ಕಿತ್ತೊಗೆಯಬೇಕು ಮತ್ತು ಅಂತಹ ಯಾವುದೇ ಅಪರಾಧಗಳಿಂದ ತನ್ನ ನಾಗರಿಕರನ್ನು ರಕ್ಷಿಸುವುದು ರಾಜ್ಯದ ಪ್ರಾಥಮಿಕ ಕರ್ತವ್ಯವಾಗಿದೆ” ಎಂದು ಹೇಳಿತು.

”ಒಬ್ಬ ವ್ಯಕ್ತಿ ಪೊಲೀಸರ ಬಳಿ ಬಂದು, ನಾನು ಕ್ಯಾಪ್ ಧರಿಸಿದ್ದನ್ನು ಕಂಡು ನನ್ನ ಗಡ್ಡವನ್ನು ಎಳೆದು ಧರ್ಮದ ಹೆಸರಿನಲ್ಲಿ ನಿಂದಿಸಲಾಗಿದೆ ಮತ್ತು ಇನ್ನೂ ಯಾವುದೇ ದೂರು ದಾಖಲಾಗಿಲ್ಲ ಎಂದು ಹೇಳಿದರೆ ಅದು ಸಮಸ್ಯೆ” ಎಂದು ಪೀಠ ಹೇಳಿದೆ.

ಇದನ್ನೂ ಓದಿ: ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ಅಂತಹ ಅಪರಾಧಿಗಳ ವಿರುದ್ಧ ಅಧಿಕಾರಿಗಳು ಕ್ರಮ ತಗೆದುಕೊಂಡರೆ ಕಾನೂನಿನ ಗೌರವ ಹೆಚ್ಚುತ್ತದೆ. ಇಲ್ಲದಿದ್ದರೆ ಎಲ್ಲರೂ ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಾರೆ ಎಂದು ನ್ಯಾಯಮೂರ್ತಿ ಜೋಸೆಫ್ ಹೇಳಿದರು.

ಸಂಜೆ 6 ಗಂಟೆಯವರೆಗೆ ವಿಚಾರಣೆ ನಡೆಸಿದ ಪೀಠ, ”ದ್ವೇಷದ ಅಪರಾಧವಿದೆ ಎಂದು ನೀವು ಒಪ್ಪಿಕೊಳ್ಳುವುದಿಲ್ಲ ಮತ್ತು ಅಂತಹ ಪ್ರಕರಣವನ್ನು ನಿರ್ಲಕ್ಷ ಮಾಡುತ್ತೀರಿ ಅಲ್ವೇ? ನಾವು ಅದಕ್ಕೆ ಏನನ್ನೂ ಹೇಳುವುದಿಲ್ಲ… ನಾವು ನಮ್ಮ ವೇದನೆಯನ್ನು ಮಾತ್ರ ವ್ಯಕ್ತಪಡಿಸುತ್ತಿದ್ದೇವೆ ಅಷ್ಟೆ” ಎಂದು ಹೇಳಿತು.

ಅರ್ಜಿದಾರ ಕಾಜೀಂ ಅಹ್ಮದ್ ಶೇರ್ವಾನಿ ಪರ ವಾದ ಮಂಡಿಸಿದ ಹಿರಿಯ ವಕೀಲ ಹುಝೆಫಾ ಅಹ್ಮದಿ ಅವರು, ”ಎರಡು ವರ್ಷಗಳ ನಂತರ ಪೊಲೀಸರು ಎಫ್‌ಐಆರ್ ದಾಖಲಿಸಿರುವ ಪ್ರಕರಣದ ಡೈರಿಯನ್ನು ಹಾಜರುಪಡಿಸುವಂತೆ ಜನವರಿ 13 ರಂದು ಈ ನ್ಯಾಯಾಲಯವು ರಾಜ್ಯ ಸರ್ಕಾರವನ್ನು ಕೇಳಿತ್ತು ಮತ್ತು ಒಂದನ್ನು ಹೊರತುಪಡಿಸಿ ಉಳಿದೆಲ್ಲವೂ ಜಾಮೀನು ನೀಡಬಹುದಾದ ಅಪರಾಧ ಎನ್ನುವಂತೆ ಪ್ರಕರಣ ದಾಖಲಿಸಿಕೊಂಡಿದೆ” ಎಂದು ಹೇಳಿದರು.

ಪೊಲೀಸ್ ಅಧಿಕಾರಿಗಳ ಎಡವಟ್ಟುಗಳನ್ನು ಒಪ್ಪಿಕೊಂಡಿರುವ ಉತ್ತರ ಪ್ರದೇಶ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಎಸಿಪಿ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಪೀಠವು, “ನೀವು ಒಂದು ಬಾರಿ ಕಠಿಣ ಕ್ರಮ ಕೈಗೊಂಡು ನೋಡಿ ಆಗ ಅಂತಹ ಜನರು ಕರ್ತವ್ಯ ಲೋಪ ಎಸಗುವುದಿಲ್ಲ. ಆಗ ಮಾತ್ರ ನಾವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸರಿಸಮಾನರಾಗುತ್ತೇವೆ. ಹೌದು, ಇಲ್ಲಿ ತಪ್ಪಾಗಿದೆ ಅದನ್ನು ಒಪ್ಪಿಕೊಳ್ಳುವುದರಲ್ಲಿ ತಪ್ಪೇನಿಲ್ಲ” ಎಂದು ಹೇಳಿತು.

ಜುಲೈ 4, 2021 ರಂದು ಘಟನೆ ನಡೆದಾಗ, ಸಂತ್ರಸ್ತರು ನೋಯ್ಡಾದ ಸೆಕ್ಟರ್ 37 ರ ಪೊಲೀಸ್ ಔಟ್‌ಪೋಸ್ಟ್‌ಗೆ ಹೋಗಿದ್ದರು, ಅಲ್ಲಿ ಯಾವುದೇ ಹಿರಿಯ ಪೊಲೀಸ್ ಅಧಿಕಾರಿಗಳಿರಲಿಲ್ಲ ಆದರೆ ಕಾನ್‌ಸ್ಟೆಬಲ್‌ಗಳು ಮಾತ್ರ ಇದ್ದರು. ಹಾಗಾಗಿ ಯಾವುದೇ ದೂರು ದಾಖಲಾಗಿಲ್ಲ ಎಂದು ಕೆಎಂ ನಟರಾಜ್ ಹೇಳಿದರು.

”ನಂತರ ಅವರು ಜಾಮಿಯಾ ನಗರದ ಆಸ್ಪತ್ರೆಗೆ ಹೋಗಿದ್ದಾರೆ. ಅಲ್ಲಿ ದೆಹಲಿ ಪೊಲೀಸರು ವಿಚಾರಿಸಿದಾಗ ದರೋಡೆ, ಹಲ್ಲೆ ಮತ್ತು ಗಾಯಗಳಾಗಿವೆ ಎಂದು ಹೇಳಿಕೆ ನೀಡಿದರು. ಅವರು ದ್ವೇಷದ ಅಪರಾಧ ಅಥವಾ ಮುಸ್ಲಿಂ ಎಂಬ ಕಾರಣಕ್ಕಾಗಿ ಹಲ್ಲೆ ನಡೆಸಲಾಗಿದೆ ಎಂದು ಎಲ್ಲಿಯೂ ಹೇಳಿಲ್ಲ” ಎಂದು ಕೆ.ಎಂ. ನಟರಾಜ್ ಹೇಳಿದರು.

ನ್ಯಾಯಮೂರ್ತಿ ನಾಗರತ್ನ ಅವರು, ”ನೀವು ಒಂದು ಕುಟುಂಬದಲ್ಲಿ ಹುಟ್ಟಿ ಒಂದರಲ್ಲಿ ಬೆಳೆದಿದ್ದೀರಿ. ಯಾವ ಧರ್ಮದಲ್ಲಿ ಹುಟ್ಟಬೇಕು ಎನ್ನುದರ ಬಗ್ಗೆ ನಮಗೆ ಆಯ್ಕೆಗಳಿರಲ್ಲ, ಯಾವುದೇ ಧರ್ಮದಲ್ಲಿ ಹುಟ್ಟಿಬೆಳೆದರೂ ನಾವು ರಾಷ್ಟ್ರವಾಗಿ ನಿಲ್ಲುತ್ತೇವೆ. ಅದು ನಮ್ಮ ರಾಷ್ಟ್ರದ ಸೌಂದರ್ಯ, ಶ್ರೇಷ್ಠತೆ. ಇದನ್ನು ನಾವು ಅರ್ಥಮಾಡಿಕೊಳ್ಳಬೇಕು” ಎಂದು ಕೆ.ಎಂ.ನಟರಾಜ್ ಅವರಿಗೆ ಹೇಳಿದರು.

ಗ್ಯಾಂಗ್ ಸದಸ್ಯರ ವಿರುದ್ಧ ಎಂಟು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಎಎಸ್‌ಜಿ ಹೇಳಿದರು.

ಗ್ಯಾಂಗ್ ಸದಸ್ಯರ ವಿರುದ್ಧ ಮೊದಲ ಎಫ್‌ಐಆರ್ ಯಾವಾಗ ದಾಖಲಾಗಿದೆ? ಎಷ್ಟು ಜನರನ್ನು ಬಂಧಿಸಲಾಗಿದೆ? ಸಂತ್ರಸ್ತರ ಮೇಲೆ ದಾಳಿ ಮಾಡಿದವರು ಅದೇ ವ್ಯಕ್ತಿಗಳಾ? ಮತ್ತು ಅವರಿಗೆ ಯಾವಾಗ ಜಾಮೀನು ನೀಡಲಾಯಿತು ಎಂದು ಪೀಠವು ಕೇಳಿತು.

ಕೆಎಂ ನಟರಾಜ್ ಅವರು ಎಲ್ಲಾ ಎಫ್‌ಐಆರ್‌ಗಳ ವಿವರಗಳನ್ನು ನೀಡುವ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದರು ಆದರೆ ಜೂನ್ 2021 ರಲ್ಲಿ “ಸ್ಕ್ರೂಡ್ರೈವರ್ ಗ್ಯಾಂಗ್” ಸದಸ್ಯರ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅವರು ಮುಸ್ಲಿಮರು ಅಥವಾ ಹಿಂದೂಗಳ ಮೇಲೆ ದಾಳಿ ಮಾಡುವಲ್ಲಿ ತಾರತಮ್ಯ ಮಾಡಿಲ್ಲ ಎಂದು ಹೇಳಿದರು.

ಕ್ರಿಮಿನಲ್ ಘಟನೆ ನಡೆದಿರುವುದನ್ನು ಒಪ್ಪಿಕೊಳ್ಳಲು ಎರಡು ವರ್ಷಗಳು ಬೇಕಾಯಿತು ಎಂದು ವಕೀಲ ಅಹ್ಮದಿ ಹೇಳಿದರು ಮತ್ತು ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿದ ಎರಡು ಅಫಿಡವಿಟ್‌ಗಳಲ್ಲಿ ಯಾವುದೇ ದ್ವೇಷದ ಅಪರಾಧ ನಡೆದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ಜುಲೈ 5, 2021 ರಂದು, ಪೋಲೀಸ್ ಗಸ್ತು ನನ್ನ ಮನೆಗೆ ಬಂದಿತ್ತು ಧರ್ಮದ ದೃಷ್ಟಿಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಬೇಡ” ಎಂದು ಅವರು ಹೇಳಿದರು, ಸಂತ್ರಸ್ತನ ಗಡ್ಡವನ್ನು ಎಳೆದು ಅಪಹಾಸ್ಯ ಮಾಡಿದರು. ಸುನ್ನತಿ ಮಾಡಿದ್ದಕ್ಕಾಗಿ ಕಾರಿನಲ್ಲಿ ಕುಳಿತು ಗೇಲಿ ಮಾಡಿದರು” ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ.

ಕ್ರಿಮಿನಲ್ ಘಟನೆ ನಡೆದಿಲ್ಲ ಎಂದು ಪೊಲೀಸರು ಹೇಳಿಲ್ಲ. ಆದರೆ ಇದು ದ್ವೇಷದ ಅಪರಾಧ ಎಂದು ಅವರು ಎಲ್ಲಿಯೂ ಕಂಡುಬಂದಿಲ್ಲ ಎಂದಿದ್ದಾರೆ. ಈ ಸಂತ್ರಸ್ತರು ಮಾಧ್ಯಮ ಪ್ರಚಾರದ ಲಾಭ ಪಡೆಯಲು ಪ್ರಯತ್ನಿಸಿದ್ದಾರೆ ಮತ್ತು ಹೇಳಿಕೆಗಳನ್ನು ಬದಲಾಯಿಸಿದ್ದಾರೆ ಎಂದು ಕೆಎಂ ನಟರಾಜ್ ಹೇಳಿದರು.

ಪೀಠವು, ಉತ್ತರ ಪ್ರದೇಶ ಸರ್ಕಾರಕ್ಕೆ ವಿವರವಾದ ಅಫಿಡವಿಟ್ ಸಲ್ಲಿಸಲು ಹೇಳಿತು ಮತ್ತು ಮಾರ್ಚ್ 3 ರಂದು ಹೆಚ್ಚಿನ ವಿಚಾರಣೆ ನಡೆಸುವುದಾಗಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...