Homeಮುಖಪುಟಪ್ರಧಾನಿಯನ್ನು ಲೋಕಸಭೆಗೆ ಎಳೆದು ತರಲು ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು: ಟಿಎಂಸಿ ನಾಯಕ ಒ'ಬ್ರಿಯಾನ್

ಪ್ರಧಾನಿಯನ್ನು ಲೋಕಸಭೆಗೆ ಎಳೆದು ತರಲು ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು: ಟಿಎಂಸಿ ನಾಯಕ ಒ’ಬ್ರಿಯಾನ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೋಕಸಭೆಗೆ ಎಳೆದು ತರಲು ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸಂಸದ ಡೆರೆಕ್ ಒ’ಬ್ರಿಯಾನ್ ಹೇಳಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ”ಪುಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ನಾಪತ್ತೆಯಾಗಿದ್ದಾರೆ. ಅವರನ್ನು ಲೋಕಸಭೆಗೆ ಎಳೆದು ತರಲು ಅಂತಿಮವಾಗಿ ಅವಿಶ್ವಾಸ ನಿರ್ಣಯವನ್ನು ಪರಿಗಣಿಸಲಾಗಿದೆ ಎಂದಿದ್ದಾರೆ.

ಮುಂದುವರಿದು, ”ಇಂದು ರಾಜ್ಯ ಸಭೆಯಲ್ಲಿ ಮಣಿಪುರ ಹಿಂಸಾಚಾರದ ಕುರಿತು ಚರ್ಚೆ ಆರಂಭಿಸಲು ಈ ಹೃದಯಹೀನ ಸರ್ಕಾರಕ್ಕೆ ಏನು ಅಡ್ಡಿಯಾಗಿದೆ? ಶುರು ಮಾಡೋಣ” ಎಂದು ಹೇಳಿದ್ದಾರೆ.

ಇಂದು (ಮಂಗಳವಾರ) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ವಿಸ್ತುತ ಬಿಸಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಲೋಕಸಭಾ ಸದಸ್ಯತ್ವ ಅನರ್ಹತೆ ತೆರವುಗೊಂಡ ಬಳಿಕ ಸಂಸತ್‌ಗೆ ಆಗಮಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು, ಪ್ರತಿಪಕ್ಷಗಳ ಪರವಾಗಿ ಅವಿಶ್ವಾಸ ನಿರ್ಣಯದ ಚರ್ಚೆಯನ್ನು ಮುನ್ನಡೆಸಬಹುದು. ಈ ಚರ್ಚೆಗೆ ಕಲಾಪ ಸಲಹಾ ಸಮಿತಿಯು 12 ಗಂಟೆಗಳಷ್ಟು ಕಾಲಾವಕಾಶ ನಿಗದಿ ಮಾಡಿದ್ದು, ಪ್ರಧಾನಿ ಮೋದಿ ಅವರು ಗುರುವಾರ ಉತ್ತರ ನೀಡುವ ನಿರೀಕ್ಷೆ ಇದೆ.

ಮಣಿಪುರ ಪರಿಸ್ಥಿತಿ ಕುರಿತು ಸಂಸತ್‌ನಲ್ಲಿ ಪ್ರಧಾನಿ ಮೋದಿ ಹೇಳಿಕೆ ನೀಡಬೇಕು ಎಂಬ ವಿರೋಧ ಪಕ್ಷಗಳ ಬೇಡಿಕೆಯನ್ನ ಸರ್ಕಾರ ತಿರಸ್ಕರಿಸಿತ್ತು. ಹೀಗಾಗಿ, ಮೋದಿ ಅವರು ಈ ವಿಷಯವಾಗಿ ಸಂಸನಲ್ಲಿ ಮಾತನಾಡುವುದನ್ನು ಖಾತರಿಪಡಿಸಲು ವಿಪಕ್ಷಗಳು ಅವಿಶ್ವಾಸ ನಿರ್ಣಯದ ತಂತ್ರಗಾರಿಕೆ ಮೊರೆ ಹೋಗಿವೆ.

ಮಾನ್ಸೂನ್ ಅಧಿವೇಶನದ ಉಳಿದ ಅವಧಿಗೆ ಡೆರೆಕ್ ಒ’ಬ್ರಿಯಾನ್ ಅಮಾನತು

ರಾಜ್ಯಸಭೆಯಲ್ಲಿ ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ರಾಜ್ಯಸಭಾ ಸದಸ್ಯರಿಗೆ ಅಶಿಸ್ತಿನ ವರ್ತನೆಗಾಗಿ ಸಂಸತ್ತಿನ ಪ್ರಸಕ್ತ ಮಾನ್ಸೂನ್ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.

ಸಭಾನಾಯಕ ಪಿಯೂಷ್ ಗೋಯಲ್ ಅವರು “ಸದನದ ಕಲಾಪಗಳಿಗೆ ನಿರಂತರವಾಗಿ ತೊಂದರೆ ನೀಡಿದ್ದಕ್ಕಾಗಿ, ಸಭಾಪತಿಗೆ ಅವಿಧೇಯತೆ ಮತ್ತು ಸದನದಲ್ಲಿ ನಿರಂತರವಾಗಿ ಗದ್ದಲ ಸೃಷ್ಟಿಸಿದ್ದಾರೆ ಎಂದು ಅವರನ್ನು ಅಮಾನತುಗೊಳಿಸುವಂತೆ ಮನವಿ ಮಾಡಿದರು.

ಅಮಾನತು ಆದೇಶದ ನಂತರ ಭಾರೀ ಗದ್ದಲದ ನಡುವೆ ರಾಜ್ಯಸಭೆಯನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.

ಇದನ್ನೂ ಓದಿ: ದೇಶದ ಜನರು ಈ 10 ಪ್ರಶ್ನೆಗಳಿಗೆ ಉತ್ತರ ಬಯಸಿದ್ದಾರೆ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಸವಾಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...