Homeಮುಖಪುಟವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಇಲ್ಲ: ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ಮಾಜಿ ಮುಖ್ಯಮಂತ್ರಿ, ಹಾಲಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ ವಿರುದ್ಧ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂಬ ವದಂತಿಗಳಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ವಿಜಯೇಂದ್ರ ಶಿಕಾರಿಪುರದಲ್ಲಿ ಮಾತ್ರ ಸ್ಪರ್ಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನ್ನ ಪುತ್ರ ಬಿ.ವೈ. ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುತ್ತಾನೆ. ವರುಣ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಬೇಕೆಂದು ಒತ್ತಡ ಇದೆ. ಆದರೆ ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ. ನನ್ನ ಕ್ಷೇತ್ರ ಶಿಕಾರಿಪುರದಲ್ಲೇ ಸ್ಪರ್ಧಿಸಬೇಕು ಎಂದು ಸೂಚಿಸಿದ್ದೇನೆ. ವರುಣ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯನವರ ಹೆಸರನ್ನು ಘೋಷಿಸಲಾಗಿದೆ. ಆ ನಂತರ ಅವರ ಎದುರು ಪ್ರಬಲ ಅಭ್ಯರ್ಥಿ ಹಾಕಲು ವಿಜಯೇಂದ್ರ ಹೆಸರು ಕ್ಷೇತ್ರದಲ್ಲಿ ತೇಲಿಬಂದಿತ್ತು. ಸಿದ್ದರಾಮಯ್ಯನವರು ವರುಣದಲ್ಲಿಯೇ ಹೆಚ್ಚಿನ ಸಮಯ ಕಳೆದು ರಾಜ್ಯದ ಇತರೆಡೆ ಪ್ರಚಾರದಲ್ಲಿ ಭಾಗವಹಿಸದಂತೆ ತಡೆಯಲು ಅಮಿತ್ ಶಾ ಹೆಣೆದ ಪ್ಲಾನ್ ಇದು ಎನ್ನಲಾಗಿತ್ತು.

ಇದುವರೆಗೂ ವಿಜಯೇಂದ್ರರನ್ನು ಎಂಎಲ್‌ಸಿ ಮಾಡಲು ಬಿಜೆಪಿ ಹೈಕಮಾಂಡ್ ಒಪ್ಪಿಲ್ಲ. ಇನ್ನು ಶಿಕಾರಿಪುರದ ಟಿಕೆಟ್ ಸಹ ಫೈನಲ್ ಮಾಡಿಲ್ಲ. ಇದು ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎನ್ನುವ ವಾದಕ್ಕೆ ಪುಷ್ಟಿ ಕೊಡುವಂತಿದೆ. ಇದೇ ಸಂದರ್ಭದಲ್ಲಿ ವಿಜಯೇಂದ್ರರಿಗೆ ಶಿಕಾರಿಪುರದಲ್ಲಿ ಟಿಕೆಟ್ ತಪ್ಪಿಸಿ, ವರುಣದಲ್ಲಿ ತಂದು ನಿಲ್ಲಿಸುವ ಆಲೋಚನೆಯನ್ನು ಅಮಿತ್ ಶಾ ಮಾಡಿದ್ದಾರೆ ಎನ್ನಲಾಗುತ್ತಿತ್ತು. ಒಂದು ವೇಳೆ ವಿಜಯೇಂದ್ರ ಅವರು ಗೆದ್ದರೆ, ಸಿದ್ದರಾಮಯ್ಯನವರನ್ನು ಸೋಲಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ; ಸೋತರೆ ಇತ್ತ ಶಿಕಾರಿಪುರವೂ ಇಲ್ಲವಾಗುತ್ತದೆ. ಅವರು ಪಕ್ಷದಲ್ಲಿ ಬೆಳೆಯುವುದು ಇಲ್ಲ ಎನ್ನಲಾಗುತ್ತಿತ್ತು. ಅದಕ್ಕೆ ಬಿ.ಎಸ್ ಯಡಿಯೂರಪ್ಪನವರು ಆಸ್ಪದ ನೀಡಿಲ್ಲ.

ಸಿದ್ದರಾಮಯ್ಯನವರ ವಿರುದ್ಧದ ಹೋರಾಟ ಇದೇ ಮೊದಲಲ್ಲ

ರಾಜ್ಯದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿರುವ ಸಿದ್ದರಾಮಯ್ಯನವರನ್ನು ಸೋಲಿಸಲು ಪ್ರತಿ ಚುನಾವಣೆಯಲ್ಲಿ ತಂತ್ರ ರೂಪಿಸಲಾಗುತ್ತಿದೆ. 2013ರಲ್ಲಿಯೂ ಸಹ ಇದೇ ನಡೆದಿತ್ತು. ಕೆಜೆಪಿಯಿಂದ ಸ್ಪರ್ಧಿಸಿದ್ದ ಕಾಪು ಸಿದ್ದಲಿಂಗಸ್ವಾಮಿ ಚುನಾವಣೆಗೂ ಮುನ್ನವೇ ಸಿದ್ದರಾಮಯ್ಯನವರನ್ನು ಸೋಲಿಸಿಯೇ ಬಿಟ್ಟೆ ಎಂಬಂತೆ ವರ್ತಿಸಿದ್ದರು. ಆದರೆ ಫಲಿತಾಂಶ ಬಂದಾಗ ಅವರು 54,744 ಮತಗಳನ್ನು ಪಡೆದರಷ್ಟೇ. 84,385 ಮತಗಳನ್ನು ಪಡೆದ ಸಿದ್ದರಾಮಯ್ಯ 29,641 ಮತಗಳ ಬೃಹತ್‌‌ ಅಂತರದಲ್ಲಿ ಗೆದ್ದು ರಾಜ್ಯದ ಮುಖ್ಯಮಂತ್ರಿಯೂ ಆದರು.

2018ರ ಚುನಾವಣೆಯಲ್ಲಿ ಯತೀಂದ್ರ ಅವರ ವಿರುದ್ಧವಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧಿಸುತ್ತಾರೆಂಬುದು ಭಾರೀ ಪ್ರಚಾರ ಪಡೆಯಿತು. ಲಿಂಗಾಯತರು ಅತಿ ಹೆಚ್ಚಿರುವುದರಿಂದ ಹೈವೋಲ್ಟೇಜ್‌ ಕ್ಷೇತ್ರವಾಗಿ ವರುಣ ಮಾರ್ಪಟ್ಟಿತು. ಆದರೆ ಅಂತಿಮ ಕ್ಷಣಗಳಲ್ಲಿ ವಿಜಯೇಂದ್ರ ಅವರನ್ನು ಕಣಕ್ಕೆ ಇಳಿಸುವ ನಿರ್ಧಾರವನ್ನು ಬಿಜೆಪಿ ಕೈಬಿಟ್ಟಿತು. ತೋಟದಪ್ಪ ಬಸವರಾಜು ಎಂಬವರು ಬಿಜೆಪಿಯಿಂದ ಸ್ಪರ್ಧಿಸಿದರು. ಹೀಗಾಗಿ 96,435 ಮತಗಳನ್ನು ಪಡೆದ ಯತೀಂದ್ರ ಅವರು 58,616 ಅಂತರದಲ್ಲಿ ಭಾರೀ ಗೆಲುವನ್ನು ಪಡೆದರು. ಅಷ್ಟಾಗಿಯೂ ಟಿ.ಬಸವರಾಜು 37,819 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ರಾಹುಲ್ ಗಾಂಧಿಯವರನ್ನು ಸಂಸತ್ತಿನಿಂದ ಅನರ್ಹಗೊಳಿಸಿದ ಪ್ರಕರಣ; ಹತ್ತು ಗಂಭೀರ ಪ್ರಶ್ನೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...