Homeಮುಖಪುಟಡಿಸಿಎಂ ಸ್ಥಾನ ಇಲ್ಲ, 29 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ: ಸಿಎಂ ಬೊಮ್ಮಾಯಿ

ಡಿಸಿಎಂ ಸ್ಥಾನ ಇಲ್ಲ, 29 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ: ಸಿಎಂ ಬೊಮ್ಮಾಯಿ

- Advertisement -
- Advertisement -

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿಯವರು ಇಂದು ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಈ ಬಾರಿ ಡಿಸಿಎಂ ಸ್ಥಾನ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, “ದೆಹಲಿಯಲ್ಲಿ ವರಿಷ್ಠರೊಂದಿಗೆ ಚರ್ಚೆಯಾಗಿದೆ. 29 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಪಟ್ಟಿಯನ್ನು ರಾಜ್ಯಭವನಕ್ಕೆ ಕಳಿಸಿದ್ದೇನೆ” ಎಂದಿದ್ದಾರೆ.

ನಮ್ಮ ಸಚಿವ ಸಂಪುಟದಲ್ಲಿ ಅನುಭವಿಗಳು ಮತ್ತು ಹೊಸಬರು ಸಹ ಇದ್ದಾರೆ. 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ, 3 ಪರಿಶಿಷ್ಟ ಜಾತಿ ಮತ್ತು 1 ಪರಿಶಿಷ್ಟ ಪಂಗಡ, 1 ಬ್ರಾಹ್ಮಣ, 1 ರೆಡ್ಡಿ ಸಮುದಾಯ ಮತ್ತು ಒಬ್ಬ ಮಹಿಳಾ ಶಾಸಕಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ನಮ್ಮ ನಾಯಕರಾದ ಬಿ.ಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಈ ಸಚಿವ ಸಂಪುಟ ರಚನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಜೆ.ಪಿ ನಡ್ಡಾರವರು ಮತ್ತು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ರವರು ಯಡಿಯೂರಪ್ಪನವರ ಮಗ ಬಿ.ವೈ ವಿಜೇಯೇಂದ್ರರವರ ಜೊತೆ ಮಾತನಾಡಿದ್ದಾರೆ. ಸಚಿವ ಸಂಪುಟದ ಪಟ್ಟಿಯಲ್ಲಿ ಬಿ.ವೈ ವಿಜೇಯೇಂದ್ರ ಹೆಸರು ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.

ನಾನು ಸಿಎಂ ಆದ ಕೂಡಲೇ ಪ್ರವಾಹ ಪೀಡಿತ ಪ್ರದೇಶಕ್ಕೆ ತೆರಳಿ ಪರಿಹಾರ ಘೋಷಿಸಿದ್ದೇನೆ. ರೈತ ಮಕ್ಕಳಿಗೆ 1 ಸಾವಿರ ಕೋಟಿ ರೂ ಮೀಸಲಿಟ್ಟು ಹೊಸ ಯೋಜನೆ ಸ್ಕಾಲರ್‌ ಶಿಪ್ ಯೋಜನೆ ಘೋಷಿಸಿದ್ದೇನೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ರವರು ಹೊಸ ಸಚಿವ ಸಂಪುಟದಲ್ಲಿ ಇಲ್ಲ ಎಂಬುದು ತಿಳಿದುಬಂದಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, “ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು” ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಒಲಿಂಪಿಕ್ಸ್ ಬಾಕ್ಸಿಂಗ್: ಭಾರತಕ್ಕೆ ಮತ್ತೊಂದು ಪದಕ ತಂದುಕೊಟ್ಟ ಹೆಣ್ಣುಮಗಳು ಲವ್ಲಿನಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ...

0
ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ...