Homeಮುಖಪುಟಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

ಆಕ್ಸಿಜನ್ ಕೊರತೆಯಿಂದ ಯಾವುದೇ ಸಾವು ಸಂಭವಿಸಿಲ್ಲ: ಡೇಟಾ ಇಲ್ಲದ್ದಕ್ಕೆ ರಾಜ್ಯಗಳೆ ಹೊಣೆ ಎಂದ ಕೇಂದ್ರ ಸರ್ಕಾರ!

- Advertisement -
- Advertisement -

ಈ ವರ್ಷದ ಏಪ್ರಿಲ್ ಆರಂಭದಲ್ಲಿ ಅಪ್ಪಳಿಸಿದ ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಸಿಗದೇ ಜನರು ಒದ್ದಾಡುತ್ತಿರುವ, ಪ್ರಾಣ ಬಿಟ್ಟ ಸಾವಿರಾರು ಪ್ರಕರಣಗಳು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದವು. ಆದರೆ ಆಕ್ಸಿಜನ್ ಕೊರತೆಯಿಂದಾದ ಸಾವುಗಳ ಯಾವುದೇ ವರದಿಯನ್ನು ರಾಜ್ಯಗಳು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ವಾದಿಸಿದೆ.

ಆರೋಗ್ಯವು ರಾಜ್ಯಕ್ಕೆ ಸಂಬಂಧಿಸಿದ ವಿಷಯವಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರಂತರವಾಗಿ ಕೋವಿಡ್ ಪ್ರಕರಣಗಳ ಮತ್ತು ಸಾವುಗಳ ವರದಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಿದೆ. ಆದರೆ ಆಕ್ಸಿಜನ್ ಕೊರತೆಯಿಂದ ಉಂಟಾದ ಕೋವಿಡ್ ಸಾವುಗಳ ಡೇಟವನ್ನು ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಮಂತ್ರಿ ಭಾರತಿ ಪ್ರವೀಣ್ ಪವಾರ್ ರಾಜ್ಯಸಭೆಗೆ ಲಿಖಿತ ರೂಪದಲ್ಲಿ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಚಾಮರಾಜನಗರ ದುರಂತಕ್ಕೆ ಆಮ್ಲಜನಕದ ಕೊರತೆ ಕಾರಣ: ಸಮಿತಿ ವರದಿ

ಆಕ್ಸಿಜನ್ ಕೊರತೆಯಿಂದ ರಸ್ತೆಯಲ್ಲಿ – ಆಸ್ಪತ್ರೆಯಲ್ಲಿ ಉಂಟಾದ ಕೋವಿಡ್‌ ಸಾವುಗಳೆಷ್ಟು ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ರಸ್ತೆಯಲ್ಲಾಗಲಿ, ಆಸ್ಪತ್ರೆಯಲ್ಲಾಗಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ.

ಆದರೆ ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲಿ ಹೆಚ್ಚಿನ ಆಕ್ಸಿಜನ್ ಬೇಡಿಕೆಯುಂಟಾಗಿತ್ತು. ಮೊದಲ ಅಲೆಯ 3,095 ಮೆಟ್ರಿಕ್ ಟನ್‌ ಬೇಡಿಕೆಗಿಂತ ಎರಡನೇ ಅಲೆಯಲ್ಲಿ ಸುಮಾರು 9000 ಮೆಟ್ರಿಕ್ ಟನ್ ಆಕ್ಸಿಜನ್ ಬೇಡಿಕೆಯಿತ್ತು. ಕೇಂದ್ರ ಸರ್ಕಾರ ಅದನ್ನು ರಾಜ್ಯಗಳಿಗೆ ಸಮಾನವಾಗಿ ಪೂರೈಸಲು ಕ್ರಮ ಕೈಗೊಂಡಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಆಕ್ಸಿಜನ್ ಕೊರತೆಯಿಂದಾಗಿ ಗೋವಾದ ಆಸ್ಪತ್ರೆಯಲ್ಲಿ ಐದು ದಿನಗಳಲ್ಲಿ 80 ಸಾವು ಸಂಭವಿಸಿದ ವರದಿಯಾಗಿತ್ತು. ಕರ್ನಾಟಕದ ಚಾಮರಾಜನಗರದಲ್ಲಿ ಆಮ್ಲಜನಕ ಸಿಗದೇ 24 ಜನ, ಕೋಲಾರದಲ್ಲಿ ಹತ್ತಕ್ಕೂ ಹೆಚ್ಚು ಜನ ಮೃತ ಪಟ್ಟಿದ್ದಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಹೈದರಾಬಾದ್‌ನಲ್ಲಿ 11 ಜನ,  ದೆಹಲಿಯಲ್ಲಿ 21 ಜನ ಆಕ್ಸಿಜನ್ ಸಿಗದೇ ಪ್ರಾಣಬಿಟ್ಟರೆಂದು ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

“ಜನರು ಆಕ್ಸಿಜನ್ ಸಿಗದೇ ಕಾರಣ ತಮ್ಮ ಪ್ರೀತಿ ಪಾತ್ರರನ್ನು ಮತ್ತು ನೆರೆಹೊರೆಯವರನ್ನು ಕಳೆದುಕೊಂಡಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ಇದು ಕಾಳಜಿಯಿಲ್ಲದ ಕುರುಡು ಸರ್ಕಾರ” ಎಂದು ಕಾಂಗ್ರೆಸ್ ವಕ್ತಾರ ಕೆ.ಸಿ ವೇಣುಗೋಪಾಲ್ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಆರೋಗ್ಯ ಸಚಿವರು ತಪ್ಪು ಮಾಹಿತಿ ನೀಡುತ್ತಿದ್ದಾರೆ. ಹಾಗಾಗಿ ಇದರ ವಿರುದ್ದ ಹಕ್ಕು ಚ್ಯುತಿ ಮಂಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಲೋಕಸಭೆಯಲ್ಲಿಯೂ ಸಹ ಕೇಂದ್ರ ಸಚಿವ ಮನ್ಸುಕ್ ಮಾಂಡವಿಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕೋವಿಡ್ ಎರಡನೇ ಅಲೆಯ ಕೋವಿಡ್ ಸಾವುಗಳು ಮಾಹಿತಿ ನೀಡಬೇಕಿರುವುದು ರಾಜ್ಯಗಳ ಜವಾಬ್ದಾರಿ ಎಂದು ಆರೋಪಿಸಿದ್ದಾರೆ.

ಗಂಗೆಯಲ್ಲಿ ಹೆಣಗಳು ತೇಲಿ ಬಂದಿದ್ದು, ಸಾಮೂಹಿಕ ಶವಸಂಸ್ಕಾರದ ಚಿತ್ರಗಳು ವೈರಲ್ ಆಗಿದ್ದರಿಂದ ಕೋವಿಡ್ ಸಾವುಗಳ ಸಂಖ್ಯೆ ಹೆಚ್ಚಿರಬಹುದು ಎಂದು ಹೇಳಲಾಗುತ್ತಿದೆ. ಆದರೆ ಅದಕ್ಕಾಗಿ ಭಾರತ ಸರ್ಕಾರವನ್ನು, ಮೋದಿ ಸರ್ಕಾರವನ್ನು ದೂರವಂತಿಲ್ಲ. ನೋಂದಣಿ ಮಾಡುವವರು ಯಾರು? ಲೆಕ್ಕ ಹಾಕುವವರು ಯಾರು? ಇದೆಲ್ಲವನ್ನು ರಾಜ್ಯಗಳು ಮಾಡುತ್ತಿದ್ದರೂ ಅವರನ್ನು ಯಾರು ಕೇಳುವುದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾರರ ಹೆಸರು ಕೈಬಿಟ್ಟ ಹಗರಣ; ಬಿಜೆಪಿ ಪಕ್ಷದ ಕೈವಾಡದ ಆರೋಪ

0
ಭಾರತದ ಪ್ರಜಾಪ್ರಭುತ್ವದಲ್ಲಿ ಗ್ರಾಮ ಪಂಚಾಯ್ತಿಯಿಂದ ಹಿಡಿದು ಸಂಸತ್‌ವರೆಗೆ ಹಲವು ಹಂತಗಳ ಚುನಾವಣೆಗಳಲ್ಲಿ ಮತ ಚಲಾಯಿಸುವ ಮೂಲಕ ಜನಪ್ರತಿನಿಧಿಗಳನ್ನು ಮತದಾರರು ಆರಿಸುವುದಲ್ಲದೆ, ಆಳುವ ಸರ್ಕಾರಗಳನ್ನು ನಿರ್ಧರಿಸುತ್ತಾರೆ. ಈ ಚುನಾವಣಾ ವ್ಯವಸ್ಥೆಯು ಮುಕ್ತ ಮತ್ತು ನ್ಯಾಯಸಮ್ಮತವಾಗಿರಬೇಕಾದದ್ದು...