Homeಮುಖಪುಟರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ರಾಷ್ಟ್ರವ್ಯಾಪಿ NRC ಜಾರಿ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ: ಗೃಹ ಸಚಿವಾಲಯ

ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

- Advertisement -
- Advertisement -

ಕಾಂಗ್ರೆಸ್ ಸಂಸದ ಆನಂದ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿ ಗೃಹ ಸಚಿವಾಲಯವನ್ನು ಪ್ರಶ್ನಿಸಿತ್ತು.
ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಪ್ರಶ್ನೆಗೆ ಪ್ರತಿಕ್ರಿಯೆಯಾಗಿ, ದೇಶಾದ್ಯಂತ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಕುರಿತು ಇನ್ನೂ ನಿರ್ಧಾರಕ್ಕೆ ಬಂದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.

ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ನವೀಕರಣದ ಬಗೆಗಿನ ಸಮಿತಿಯ ಆತಂಕಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವಾಲಯ (ಎಂಎಚ್‌ಎ), “ಜನಗಣತಿಯಲ್ಲಿ ಸಂಗ್ರಹಿಸಲಾದ ಎಲ್ಲಾ ವೈಯಕ್ತಿಕ ಮಟ್ಟದ ಮಾಹಿತಿಯು ಗೌಪ್ಯವಾಗಿರುತ್ತದೆ. ಜನಗಣತಿಯಲ್ಲಿ, ಆಡಳಿತಾತ್ಮಕ ಹಂತಗಳಲ್ಲಿ ಒಟ್ಟು ಡೇಟಾವನ್ನು ಮಾತ್ರ ಬಿಡುಗಡೆ ಮಾಡಲಾಗುತ್ತದೆ. ಹಿಂದಿನ ಜನಗಣತಿಗಳಂತೆ, ಜನಗಣತಿ 2021 ಅನ್ನು ಯಶಸ್ವಿಯಾಗಿ ನಡೆಸಲು ಮತ್ತು ಪೂರ್ಣಗೊಳಿಸಲು ಸಾರ್ವಜನಿಕರಲ್ಲಿ ಸರಿಯಾದ ಜಾಗೃತಿ ಮೂಡಿಸಲು ವ್ಯಾಪಕ ಪ್ರಚಾರ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ದೇಶಾದ್ಯಂತ ಯಶಸ್ವಿಯಾಗಿ ನಡೆಸಿದ ಪೂರ್ವ ಪರೀಕ್ಷೆಯಲ್ಲಿ ಎನ್‌ಪಿಆರ್ ಜೊತೆಗೆ ಜನಗಣತಿಯ ಪ್ರಶ್ನಾವಳಿಗಳನ್ನು ಪರೀಕ್ಷಿಸಲಾಗಿದೆ. ಎನ್‌ಆರ್‌ಸಿ ರಚಿಸಲು ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಸರ್ಕಾರ ಕಾಲಕಾಲಕ್ಕೆ ಸ್ಪಷ್ಟಪಡಿಸಿದೆ” ಎಂದು ಎಂಎಚ್‌ಎ ವಿವರಿಸಿದೆ.

ಇದನ್ನೂ ಓದಿ: ಜನವರಿಯಿಂದಲೆ ಸಿಎಎ ಜಾರಿಯಾಗುವ ಸಾಧ್ಯತೆ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಕಾಂಗ್ರೆಸ್ ಸಂಸದ ಆನಂದ್ ಶರ್ಮಾ ನೇತೃತ್ವದ ಗೃಹ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಎಂಎಚ್‌ಎಯನ್ನು ಪ್ರಶ್ನಿಸಿತ್ತು. ಕೇಂದ್ರ ಸರ್ಕಾರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳನ್ನು ನೀಡುತ್ತಿರುವುದರಿಂದ ಎನ್‌ಪಿಆರ್ ಮತ್ತು ಜನಗಣತಿಗೆ ಸಂಬಂಧಿಸಿದಂತೆ ಸಾಕಷ್ಟು ಅಸಮಾಧಾನ ಮತ್ತು ಭಯವಿದೆ ಎಂದು ಸಮಿತಿ ಹೇಳಿತು.

ಎನ್‌ಪಿಆರ್ ಬಗ್ಗೆ ಎಲ್ಲಾ ರಾಜ್ಯಗಳಿಗೆ ಸಂಕ್ಷಿಪ್ತವಾಗಿ ತಿಳಿಸಬೇಕು ಮತ್ತು ಸರಿಯಾಗಿ ಮಾತನಾಡಬೇಕು ಎಂದು ಸಮಿತಿ ಹೇಳಿದೆ.

ವಿರೋಧಪಕ್ಷಗಳ ಆಡಳಿತವಿರುವ ಹಲವಾರು ರಾಜ್ಯಗಳು ಈ ಹಿಂದೆ ಎನ್‌ಪಿಆರ್ ಅನ್ನು ಕಾರ್ಯಗತಗೊಳಿಸುವುದಿಲ್ಲ ಎಂದು ಹೇಳಿದ್ದವು. “ಇದನ್ನು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಕಾರ್ಯಗತಗೊಳಿಸಲು ಬಳಸಲಾಗುವುದು ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯೊಂದಿಗೆ ಅದನ್ನು ಸೇರಿಸಿ, ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಲು ಬಳಸಲಾಗುತ್ತದೆ” ಎಂಬ ಆತಂಕವನ್ನು ಆ ರಾಜ್ಯಗಳು ವ್ಯಕ್ತಪಡಿಸಿದ್ದನ್ನು ಸಮಿತಿ ಉಲ್ಲೇಖಿಸಿತು.

ಇದನ್ನೂ ಓದಿ: ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

2019 ರ ಕೊನೆಯಲ್ಲಿ ಮತ್ತು 2020 ರ ಆರಂಭದಲ್ಲಿ ಸಿಎಎ-ಎನ್‌ಆರ್‌ಸಿ-ಎನ್‌ಪಿಆರ್ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆದಾಗ, ರಾಷ್ಟ್ರವ್ಯಾಪಿ ಎನ್‌ಆರ್‌ಸಿ ಪ್ರಕ್ರಿಯೆಯ ಪೂರ್ವ ತಯ್ಯಾರಿ ಆಗಲೇ ಆರಂಭಗೊಂಡಿದೆ ಎಂದು ಒಮ್ಮೆ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಹಿಂದಕ್ಕೆ ಹೆಜ್ಜೆ ಇಡಬೇಕಾಯಿತು. ನಂತರ ಸರ್ಕಾರವು ಎನ್‌ಆರ್‌ಸಿ ಯೋಜನೆಗೆ ಎಂದಿಗೂ ಅಂತಿಮ ಅನುಮತಿ ನೀಡಿಲ್ಲ ಎಂದು ಹೇಳಿಕೊಂಡಿತ್ತು. ಅದು ಇನ್ನೂ ಚರ್ಚೆಯಲ್ಲಿದೆ (ಈಗ ಎಂಎಚ್‌ಎ ಹೇಳಿರುವಂತೆ) ಎಂದು ಸರ್ಕಾರ ಹೇಳಿತ್ತು.

ಅದಕ್ಕೂ ಮೊದಲು, ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತು ಸೇರಿದಂತೆ ಅನೇಕ ವೇದಿಕೆಗಳಲ್ಲಿ, ಅನೇಕ ಸಲ ’ಕೇಂದ್ರವು ರಾಷ್ಟ್ರವ್ಯಾಪಿ ಎನ್‌ಆರ್‌ಸಿಯನ್ನು ಜಾರಿಗೆ ತರಲಿದೆ’ ಎಂದು ಘೋಷಿಸಿದ್ದರು.

ರಾಜಕೀಯ ರ್‍ಯಾಲಿಗಳು, ಪತ್ರಿಕಾಗೋಷ್ಠಿಗಳು ಮತ್ತು ಸಂದರ್ಶನಗಳಲ್ಲಿ ತಮ್ಮ ಸಾರ್ವಜನಿಕ ಘೋಷಣೆಗಳ ಹೊರತಾಗಿ, ರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ರಾಜ್ಯಗಳಲ್ಲೂ (ಅಸ್ಸಾಂನಲ್ಲಿ ಎರಡನೇ ಬಾರಿ) ಎನ್‌ಆರ್‌ಸಿ ಪ್ರಕ್ರಿಯೆ ನಡೆಸುವ ಸರ್ಕಾರದ ನಿರ್ಧಾರವನ್ನು 2019 ರ ನವೆಂಬರ್ 20 ರಂದು ರಾಜ್ಯಸಭೆಗೆ ಕೇಂದ್ರ ಗೃಹ ಸಚಿವರು ತಿಳಿಸಿದ್ದರು.


ಇದನ್ನೂ ಓದಿ: ಸಿಎಎ ವಿರೋಧಿ ಪ್ರತಿಭಟನಕಾರರ ಬಂಧನ: ಆತಂಕ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...