Homeಮುಖಪುಟಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ನಿರ್ಧರಿಸಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಯನ್ನು ರಾಷ್ಟ್ರವ್ಯಾಪಿ ನಡೆಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಬುಧವಾರ ತಿಳಿಸಿದೆ. ದೇಶಾದ್ಯಂತ ಎನ್‌ಆರ್‌ಸಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರಕ್ಕೆ ಯಾವುದೇ ಯೋಜನೆ ಇದೆಯೇ ಎಂಬ ಪ್ರಶ್ನೆಗೆ ಕೇಂದ್ರ ಸಚಿವ ನಿತ್ಯಾನಂದ ರೈ ರಾಜ್ಯಸಭೆಯಲ್ಲಿ ಉತ್ತರಿಸಿದರು.

“ಎನ್‌ಆರ್‌ಸಿಯನ್ನು ರಾಷ್ಟ್ರ ಮಟ್ಟದಲ್ಲಿ ಸಿದ್ಧಪಡಿಸಲು ಸರ್ಕಾವು ಇಲ್ಲಿಯವರೆಗೆ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ” ಎಂದು ನಿತ್ಯಾನಂದ ರೈ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರವು 2019 ರ ಆಗಸ್ಟ್ 31 ರಂದು ಅಸ್ಸಾಂನಲ್ಲಿ ಎನ್‌ಆರ್‌‌ಸಿ ವರದಿಯನ್ನು ಬಿಡುಗಡೆಗೊಳಿಸಿದಾಗ ಒಟ್ಟು 3,30,27,661 ಅರ್ಜಿದಾರರಲ್ಲಿ 19.06 ಲಕ್ಷ ಜನರನ್ನು ಹೊರಗಿಡಲಾಗಿತ್ತು. ಇದು ಭಾರತದಾದ್ಯಂತ ಭಾರತದಾದ್ಯಂತ ಭಾರಿ ವಿವಾದ ಸೃಷ್ಟಿಸಿತ್ತು.

ಇದನ್ನೂ ಓದಿ: ಬಾಡಿಗೆದಾರನ ಮೇಲೆ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಬಿಜೆಪಿ ನಾಯಕಿ

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ನಿತ್ಯಾನಂದ ರೈ, ಪೌರತ್ವ ಕಾಯ್ದೆ-1955 ಮತ್ತು ಭಾರತೀಯ ನಾಗರಿಕರ ರಾಷ್ಟ್ರೀಯ ನೋಂದಣಿ ಅಡಿಯಲ್ಲಿ ಬಂಧನ ಕೇಂದ್ರಗಳನ್ನು ಒದಗಿಸಲು ಅವಕಾಶವಿಲ್ಲ ಎಂದು ಹೇಳಿದ್ದಾರೆ.

“ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ ವಿದೇಶಿ ಪ್ರಜೆಗಳನ್ನು ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕು. ಅವರ ಗಡೀಪಾರು ಮಾಡುವವರೆಗೂ ಅವರನ್ನು ಚಲನೆಯನ್ನು ನಿರ್ಬಂಧಿಸಿದ ಸೂಕ್ತ ಸ್ಥಳದಲ್ಲಿ ಇಡಬೇಕು ಎಂದು ಫೆಬ್ರವರಿ 28, 2012 ರಂದು ಸುಪ್ರೀಂ ಕೋರ್ಟ್ನಿ ರ್ದೇಶನ ನೀಡಿದೆ ಎಂದು ಹೇಳಿದ್ದಾರೆ.

ಆ ನಿರ್ದೇಶನವನ್ನು ಅನುಸರಿಸಿ, ಸುಪ್ರೀಂಕೋರ್ಟ್‌ನ ನಿರ್ದೇಶನಗಳನ್ನು ಪಾಲಿಸುವಂತೆ ಗೃಹ ಸಚಿವಾಲಯವು ಮಾರ್ಚ್ 7, 2012 ರಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಆಡಳಿತಗಳಿಗೆ ಸೂಚನೆಗಳನ್ನು ನೀಡಿತು ಎದು ಅವರು ಹೇಳಿದ್ದಾರೆ.

ಅಕ್ರಮ ವಲಸಿಗರು ಮತ್ತು ವಿದೇಶಿಯರನ್ನು ಬಂಧಿಸಲು ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿದ ಆಡಳಿತಗಳು ಬಂಧನ ಕೇಂದ್ರಗಳನ್ನು ಸ್ಥಾಪಿಸಿವೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡಿದರೆ ‘ಜೈ ಸಿಯಾ ರಾಂ’ ಎನ್ನಲು ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...