Homeಕರ್ನಾಟಕ'ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಹೈಕಮಾಂಡ್ ತೀರ್ಮಾನವೇ ಅಂತಿಮ' : ಸಿಎಂ-ಡಿಸಿಎಂ ಒಗ್ಗಟ್ಟಿನ ಮಂತ್ರ

‘ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಹೈಕಮಾಂಡ್ ತೀರ್ಮಾನವೇ ಅಂತಿಮ’ : ಸಿಎಂ-ಡಿಸಿಎಂ ಒಗ್ಗಟ್ಟಿನ ಮಂತ್ರ

ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ, ಬ್ರೇಕ್‌ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ

- Advertisement -
- Advertisement -

“ನಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹೈಕಮಾಂಡ್ ಹೇಳಿದಂತೆ ಮುಂದುವರಿಯುತ್ತೇವೆ. 2028ಕ್ಕೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಶನಿವಾರ (ನವೆಂಬರ್ 29) ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ‘ಬ್ರೇಕ್‌ ಫಾಸ್ಟ್ ಮೀಟಿಂಗ್’ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಉಭಯ ನಾಯಕರು, ಕೆಲ ದಿನಗಳಿಂದ ಉಂಟಾಗಿದ್ದ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಹೈಕಮಾಂಡ್‌ ಸೂಚನೆಯಂತೆ ಬೆಳಿಗ್ಗೆ 9 ಗಂಟೆಯ ಹೊತ್ತಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿದರು. ಬಳಿಕ ಇಬ್ಬರೂ ಜೊತೆಯಾಗಿ ಉಪಹಾರ ಸವಿದರು. ಈ ವೇಳೆ ನಗು ನಗುತ್ತಾ ಫೋಟೋಗೆ ಪೋಸ್‌ ಕೊಟ್ಟರು. ಉಪಹಾರ ಸವಿದ ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೊದಲು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಲ ದಿನಗಳಿಂದ ಗೊಂದಲ ಸೃಷ್ಠಿಯಾಗಿದೆ. ನಮ್ಮ ನಡುವೆ ಯಾವುದೇ ಭಿನ್ನಾಪ್ರಾಯ ಇಲ್ಲ. ಆದರೂ, ಕೆಲ ಮಾಧ್ಯಮಗಳು ಗೊಂದಲ ಸೃಷ್ಟಿಸಿವೆ. ಡಿಸೆಂಬರ್ 8ರಿಂದ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ಗೊಂದಲ ಪರಿಹಾರಕ್ಕೆ ಹೈಕಮಾಂಡ್ ಸೂಚಿಸಿದೆ ಎಂದರು.

ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಹೈಕಮಾಂಡ್ ಹೇಳಿದಂತೆ ಮುಂದುವರಿಯಲು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಬಿಜೆಪಿ-ಜೆಡಿಎಸ್‌ನವರು ಸುಳ್ಳು ಅಪಪ್ರಚಾರಗಳನ್ನು ಮಾಡುತ್ತಿದ್ದಾರೆ. ಅವೆಲ್ಲವನ್ನೂ ನಾವು ಈ ಹಿಂದೆಯೂ ಸಮರ್ಥವಾಗಿ ಎದುರಿಸಿದ್ದೇವೆ. ಮುಂದೆಯೂ ಎದುರಿಸುತ್ತೇವೆ ಎಂದು ಹೇಳಿದರು.

ಶಾಸಕರು ದೆಹಲಿಗೆ ಹೋಗಿದ್ದಾರಲ್ಲಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಶಾಸಕರು ತಮ್ಮನ್ನು ಮಂತ್ರಿ ಮಾಡುವಂತೆ ಹೈಕಮಾಂಡ್‌ಗೆ ಮನವಿ ಮಾಡಲು ಹೋಗಿರಬಹುದು. ಕೆಲವರು ದೆಹಲಿ ಹೋಗಿರುವ ಬಗ್ಗೆ ನನಗೆ ತಿಳಿಸಿದ್ದಾರೆ ಎಂದರು.

ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿ, ರಾಜಕೀಯವಾಗಿ ನಮ್ಮಿಬ್ಬರದ್ದು ಒಂದೇ ತೀರ್ಮಾನ. ಪಕ್ಷದ ಹೈಕಮಾಂಡ್ ಹೇಳಿದಂತೆ ನಾವು ಮುಂದುವರಿಯುತ್ತೇವೆ. ನಮ್ಮ ನಡುವೆ ಯಾವುದೇ ಗುಂಪುಗಾರಿಕೆ ಇಲ್ಲ. ಹಿಂದೆಯೂ ನಾನು ಗುಂಪುಗಾರಿಕೆಗೆ ಅವಕಾಶ ಕೊಟ್ಟಿಲ್ಲ, ಮುಂದೆಯೂ ಕೊಡುವುದಿಲ್ಲ. ನಮ್ಮದು ಒಂದೇ ಗುಂಪು, ಅದು ಕಾಂಗ್ರೆಸ್ ಗುಂಪು. ಶಾಸಕರು ಮತ್ತು ಪಕ್ಷವನ್ನು ಶಕ್ತಿಶಾಲಿಯಾಗಿ ಬೆಳೆಸುವುದು ನಮ್ಮ ಕರ್ತವ್ಯ. 2028ಕ್ಕೆ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇವೆ. ಅದಕ್ಕಾಗಿ ನಮ್ಮದೇ ಕಾರ್ಯಸೂಚಿಗಳನ್ನು ಸಿದ್ದಪಡಿಸಿದ್ದೇವೆ. ಸಿಎಂ ಹೇಳಿದ್ದಕ್ಕೆ ನನ್ನ ಸಹಮತವಿದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...