Homeಮುಖಪುಟಮುಸ್ಲಿಂ ಮೀಸಲಾತಿ ಕುರಿತು ಯಾವುದೇ ಚರ್ಚೆ ನಡೆದಿಲ್ಲ: ಶಿವಸೇನೆ

ಮುಸ್ಲಿಂ ಮೀಸಲಾತಿ ಕುರಿತು ಯಾವುದೇ ಚರ್ಚೆ ನಡೆದಿಲ್ಲ: ಶಿವಸೇನೆ

- Advertisement -
- Advertisement -

ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡುವ ಹೊಸ ಮಸೂದೆಯನ್ನು ಶೀಘ್ರದಲ್ಲೇ ರಾಜ್ಯ ವಿಧಾನಸಭೆಯಲ್ಲಿ ಪರಿಚಯಿಸಲಾಗುವುದು ಎಂದು ಮಹಾರಾಷ್ಟ್ರ ಸಮ್ಮಿಶ್ರ ಸರ್ಕಾರದ ಸಚಿವರು ಹೇಳಿದ ಎರಡು ದಿನಗಳ ನಂತರ, ಮೈತ್ರಿಕೂಟದ ಮತ್ತೊಬ್ಬ ಸದಸ್ಯ ಪಕ್ಷವಾದ ಶಿವಸೇನೆ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಹೇಳಿದೆ.

ಬಲಪಂಥೀಯ ಗುಂಪು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಈ ಮೀಸಲಾತಿ ನಿರ್ಧಾರದ ವಿರುದ್ಧ ಪ್ರತಿಭಟನೆಗೆ ಸಿದ್ಧವಾಗುತ್ತಿದ್ದಂತೆಯೇ ಶಿವಸೇನೆ ಅಂತಹ ಪ್ರಸ್ತಾಪವನ್ನು ತಳ್ಳಿ ಹಾಕಿದೆ.

“ಮುಸ್ಲಿಮರಿಗೆ ಧರ್ಮ ಆಧಾರಿತ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರದ ಸುದ್ದಿ ಆತಂಕಕಾರಿಯಾಗಿದೆ. ಶಿವಸೇನೆ ನೇತೃತ್ವದ ಸರ್ಕಾರವು ಮುಸ್ಲಿಮರನ್ನು ಸಮಾಧಾನಪಡಿಸಬಾರದು. ಇದು ಹಿಂದೂ ಸಮಾಜದ ನಿರೀಕ್ಷೆಯಾಗಿದೆ” ಎಂದು ವಿಎಚ್‌ಪಿ ಶನಿವಾರ ಹಿಂದಿಯಲ್ಲಿ ಟ್ವೀಟ್ ಮಾಡಿತ್ತು.

ಭಾನುವಾರ ಬೆಳಿಗ್ಗೆ ಶಿವಸೇನೆಯ ಐಟಿಸೆಲ್‌ ವಿಎಚ್‌ಪಿ ಟ್ವೀಟ್ ಮಾಡಿರುವುದಕ್ಕೆ ಉತ್ತರಿಸಿ “ಅಂತಹ ಯಾವುದೇ ವಿಷಯ ಚರ್ಚೆಯಿಲ್ಲ” ಎಂದು ಸ್ಪಷ್ಟನೆ ನೀಡಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡುವ ಹೊಸ ಮಸೂದೆಯನ್ನು ಶೀಘ್ರದಲ್ಲೇ ರಾಜ್ಯ ವಿಧಾನಸಭೆಯಲ್ಲಿ ಪರಿಚಯಿಸಲಾಗುವುದು ಎಂದು ಮಹಾರಾಷ್ಟ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಶುಕ್ರವಾರ ಹೇಳಿದ್ದರು.

ಉದ್ಯೋಗಗಳಲ್ಲಿ ಮೀಸಲಾತಿಗೆ ಅವಕಾಶ ಕಲ್ಪಿಸಲು ಸರ್ಕಾರ ಕೂಡ ಯೋಜಿಸುತ್ತಿದೆ ಮತ್ತು ಅದಕ್ಕಾಗಿ ಸರ್ಕಾರ ಕಾನೂನು ಸಲಹೆ ಪಡೆಯುತ್ತಿದೆ ಎಂದು ಸಹ ಎನ್‌ಸಿಪಿಯ ಸಚಿವರು ಹೇಳಿದ್ದರು.

ಸೇನಾ ಮತ್ತು ಬಿಜೆಪಿ ನಡುವಿನ ಹಿಂದಿನ ಸರ್ಕಾರವು ನ್ಯಾಯಾಲಯದ ಆದೇಶದ ಹೊರತಾಗಿಯೂ ಮುಸ್ಲಿಮರಿಗೆ ಮೀಸಲಾತಿ ನೀಡಿಲ್ಲ ಎಂದು ಮಲಿಕ್ ಆರೋಪಿಸಿದ್ದರು.

“ಈ ವಿಧಾನಸಭೆ ಅಧಿವೇಶನದ ಅಂತ್ಯದ ವೇಳೆಗೆ ನಾವು ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ 5 ರಷ್ಟು ಮೀಸಲಾತಿ ನೀಡಲು ಪ್ರಯತ್ನಿಸುತ್ತೇವೆ” ಎಂದು ಸಚಿವರು ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಮರಿಗೆ ಶಿಕ್ಷಣದಲ್ಲಿ 5% ಮೀಸಲಾತಿ: ಮಹಾರಾಷ್ಟ್ರ ಸರ್ಕಾರದ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...