ದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಆತಂಕವನ್ನೇ ಸೃಷ್ಟಿ ಮಾಡಿದೆ. ಪ್ರಸ್ತುತ 40ಕ್ಕೂ ಹೆಚ್ಚು ಪ್ರಕರಣಗಳು ಇದ್ದು, ಕೊರೊನಾ ಮೂರನೇ ಅಲೆ ತೀವ್ರತೆಗೆ ಕಾರಣವಾಗಬಹುದು ಎನ್ನಲಾಗಿತ್ತು. ಆದರೆ, ಈ ಎಲ್ಲಾ ಸಂಭವವನ್ನು ತಳ್ಳಿರುವ ದೇಶದ ತಜ್ಞ ವೈದ್ಯರು, ಜಿನೋಮ್ ತಜ್ಮರು ಡೆಲ್ಟಾ ಪ್ಲಸ್ ರೂಪಾಂತರಿ ಮೂರನೇ ಅಲೆಗೆ ಕಾರಣವಾಗಬಹುದು ಎಂಬುದಕ್ಕೆ ಯಾವುದೇ ಸಾಕ್ಷಿ, ಆಧಾರವಿಲ್ಲ ಎಂದಿದಾರೆ.
Institute of Genomics and Integrative Biology (ಐಜಿಐಬಿ) ನಿರ್ದೇಶಕ ಡಾ.ಅನುರಾಗ್ ಅಗರ್ವಾಲ್, ’ಈಗ ಕಾಣಿಸಿಕೊಂಡಿರುವುದರಿಂದ, ಮೂರನೇ ಅಲೆಯೊಂದಿಗೆ ಯಾವುದೇ ಸಂಬಂಧವಿಲ್ಲ. 3ನೇ ಅಲೆಯ ತೀವ್ರತೆಗೆ ಕಾರಣವಾಗುತ್ತದೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ’ ಎಂದಿದ್ದಾರೆ. ಜೊತೆಗೆ ಕೊರೊನಾ ಎರಡನೇ ಅಲೆಯಲ್ಲಿ ಎಚ್ಚರಿಕೆ ತೆಗೆದುಕೊಳ್ಳುವುದನ್ನು ನಿಲ್ಲಿಸದಂತೆ ಸಲಹೆ ನೀಡಿದ್ದಾರೆ.
“ನಮ್ಮ ಸಂಸ್ಥೆ ಜೂನ್ ತಿಂಗಳಲ್ಲಿ ಮಹಾರಾಷ್ಟ್ರದಿಂದ 3,500 ಕ್ಕೂ ಹೆಚ್ಚು ಮಾದರಿಗಳನ್ನು ಪರೀಕ್ಷೆ ನಡೆಸಿದೆ. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಈ ಮಾದರಿಗಳನ್ನು ಕಲೆಕ್ಟ್ ಮಾಡಲಾಗಿತ್ತು. ಈ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೂ, ಇವುಗಳ ಸಂಖ್ಯೆ ಶೇಕಡಾಕ್ಕಿಂತ ಒಂದಕ್ಕಿಂತ ಕಡಿಮೆ ಇರುತ್ತವೆ” ಎಂದು ಡಾ.ಅನುರಾಗ್ ಅಗರ್ವಾಲ್ ಹೇಳಿದ್ದಾರೆ.
ಇದನ್ನೂ ಓದಿ: ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ
ಈ ರೂಪಾಂತರಿ ಪ್ರಕರಣಗಳು ಹೆಚ್ಚಿರುವ ಕಡೆಗಳಲ್ಲಿಯೂ ಅವುಗಳು “ಹೆಚ್ಚು” ಎಂದು ಹೇಳಲು ಸಾಧ್ಯವಿಲ್ಲ. ದೇಶದಲ್ಲಿ ಪದೆಸ್ತುತ ಪರಿಸ್ಥಿತಿ ಸ್ಥಿರವಾಗಿ ಕಾಣುತ್ತಿವೆ ಎಂದು ಡಾ ಅಗರ್ವಾಲ್ ಭರವಸೆ ವ್ಯಕ್ತಪಡಿಸಿದ್ದಾರೆ.
“ಸದ್ಯ 40ಕ್ಕೂ ಹೆಚ್ಚು ಪ್ರಕರಣಗಳು ಭಾರತದಲ್ಲಿ ಕಂಡುಬಂದಿದೆ. ಆದರೆ, ಸದ್ಯಕ್ಕೆ ನಾವು ಡೆಲ್ಟಾ ಪ್ಲಸ್, ಮೂರನೇ ಅಲೆ ಬಗ್ಗೆ ಚಿಂತೆ ಮಾಡುವ ಮೊದಲು, ಎರಡನೇ ಅಲೆಯನ್ನು ಕೊನೆಗಿಳಿಸುವ ಕುರಿತು ಗಮನ ಹರಿಸಬೇಕು” ಎಂದು ಹೇಳಿದ್ದಾರೆ.
ದೇಶದಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ವೈರಸ್ ಪ್ರಕರಣಗಳು ಪತ್ತೆಯಾಗಿದ್ದವು. ಮೈಸೂರಿನಲ್ಲಿ ಮತ್ತು ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಪ್ರಕರಣ ಪತ್ತೆಯಾಗಿವೆ ಎಂದು ಬುಧವಾರ ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
’ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಸೂಕ್ಷ್ಮವಾಗಿ ಗಮನ ಹರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಜಿನೋಮ್ ಲ್ಯಾಬ್ ಗಳನ್ನು ಕೂಡಾ ಸೆಟಪ್ ಮಾಡಲಾಗುತ್ತಿದೆ. ರಾಜ್ಯದಲ್ಲಿ 6 ಜಿನೋಮ್ ಲ್ಯಾಬ್ ಮಾಡಲು ನಿರ್ಧಾರ ಮಾಡಿದ್ದೇವೆ. ಡೆಲ್ಟಾ ಪ್ಲಸ್ ಬಗ್ಗೆ ನಿರಂತರವಾಗಿ ಗಮನಹರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಡೆಲ್ಟಾ ಪ್ಲಸ್ ರೂಪಾಂತರಿ ವಿರುದ್ಧ ವ್ಯಾಕ್ಸಿನ್‌ಗಳು ಪರಿಣಾಮ ಕಳೆದುಕೊಳ್ಳುತ್ತಿವೆ: WHO