Homeಮುಖಪುಟದೆಹಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ಸಿಕ್ಕಿಲ್ಲ: ಪೊಲೀಸರು

ದೆಹಲಿ ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ ಎಂಬುದಕ್ಕೆ ಸಾಕ್ಷಿ ಸಿಕ್ಕಿಲ್ಲ: ಪೊಲೀಸರು

ಸ್ಮಶಾನದ ಪೂಜಾರಿ ರಾಧೇಶ್ಯಾಮ್ ಮತ್ತು ಸ್ಮಶಾನದ ಉದ್ಯೋಗಿ ಕುಲದೀಪ್ ಸಿಂಗ್ ಇಬ್ಬರು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ನೈರುತ್ಯ ದೆಹಲಿಯ ಕಂಟೋನ್ಮೆಂಟ್ ಬಳಿ ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ನಡೆದಿದ್ದಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ವರದಿ ನೀಡಿರುವ ಪೊಲೀಸರು, ಬಾಲಕಿ ಮೇಲೆ ಅತ್ಯಾಚಾರ ನಡೆದಿದೆಯೇ ಎಂದು ಖಚಿತಪಡಿಸಲು ಯಾವುದೇ ಪುರಾವೆಗಳನ್ನು ಸಂಗ್ರಹಿಸಲು ಸಾಧ್ಯವಾಗಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ನಾಲ್ವರು ಆರೋಪಿಗಳ ಬಹಿರಂಗ ಹೇಳಿಕೆಗಳನ್ನು ಉಲ್ಲೇಖಿಸಿ, 55 ವರ್ಷದ ಸ್ಮಶಾನದ ಪೂಜಾರಿ ರಾಧೇ ಶ್ಯಾಮ್ ಮತ್ತು ಸ್ಮಶಾನದ ಉದ್ಯೋಗಿ ಕುಲದೀಪ್ ಸಿಂಗ್ ಇಬ್ಬರು ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪ್ರಕರಣದ ತನಿಖಾ ಅಧಿಕಾರಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಇತರ ಆರೋಪಿಗಳಾದ ಸಲೀಂ ಅಹ್ಮದ್ ಮತ್ತು ಲಕ್ಷ್ಮಿ ನಾರಾಯಣ್, ಇಬ್ಬರೂ ಸ್ಮಶಾನದಲ್ಲಿ ಉದ್ಯೋಗಿಗಳಾಗಿದ್ದು, ದಲಿತ ಬಾಲಕಿಯನ್ನು ಸುಡಲು ಅತ್ಯಾಚಾರ ಮಾಡಿದವರಿಗೆ ಸಹಾಯ ಮಾಡಿದ್ದಾರೆ ಎಂದು ಐಒ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

“ಮಗು ಅತ್ಯಾಚಾರಕ್ಕೊಳಗಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಲು ಯಾವುದೇ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಅಥವಾ ವೈದ್ಯಕೀಯ/ ವೈಜ್ಞಾನಿಕ ಸೇರಿದಂತೆ ಯಾವುದೇ ಪುರಾವೆಗಳನ್ನು ಸಂಗ್ರಹಿಸಲು ಸಾಧ್ಯವಿಲ್ಲ ಎಂದು ಐಒ ಒಪ್ಪಿಕೊಂಡಿದ್ದಾರೆ. ಮಗು ಅತ್ಯಾಚಾರಕ್ಕೊಳಗಾಗಿದೆಯೋ ಇಲ್ಲವೋ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ”ಎಂದು ನ್ಯಾಯಾಲಯ ಆಗಸ್ಟ್ 12 ರಂದು ನೀಡಿದ ಆದೇಶದಲ್ಲಿ ಉಲ್ಲೇಖಿಸಿದೆ.

ಪೊಲೀಸರ ಮುಂದೆ ಆರೋಪಿಗಳು ನೀಡಿರುವ ಬಹಿರಂಗ ಹೇಳಿಕೆಗಳನ್ನು ಇತರ ಸಾಕ್ಷ್ಯಗಳು ಬೆಂಬಲಿಸದ ಹೊರತು, ಕಾನೂನಿನ ಅಡಿಯಲ್ಲಿ ಸ್ವೀಕಾರಾರ್ಹವಲ್ಲ.

ವಿಶೇಷ ನ್ಯಾಯಾಧೀಶ ಅಶುತೋಷ್ ಕುಮಾರ್, ಈ ಮಧ್ಯೆ, ಸಂತ್ರಸ್ತ ಮಗುವಿನ ತಾಯಿಗೆ 2.5 ಲಕ್ಷ ರೂಪಾಯಿಗಳನ್ನು “ಮಧ್ಯಂತರ ಪರಿಹಾರ” ಎಂದು ಘೋಷಿಸಿದ್ದಾರೆ.

ನ್ಯಾಯಾಲಯವು  ನಾಲ್ವರು ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಎಫ್ಐಆರ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಮತ್ತು ನಂತರ ಆಕೆಯ ಪೋಷಕರ ಒಪ್ಪಿಗೆಯಿಲ್ಲದೆ ಅಂತ್ಯ ಸಂಸ್ಕಾರ ಮಾಡಿರುವ ದೂರಿದೆ.

ಆಗಸ್ಟ್ 1 ರಂದು ದಲಿತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿ, ಕುಟುಂಬದ ಒಪ್ಪಿಗೆಯಿಲ್ಲದೆ ಅಂತ್ಯಸಂಸ್ಕಾರ ಮಾಡಲಾಗಿತ್ತು. ಈ ಕುರಿತು ಬಾಲಕಿಯ ತಾಯಿಯ ಹೇಳಿಕೆಯ ಆಧಾರದ ಮೇಲೆ ದೆಹಲಿ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಭಾರತೀಯ ಅಪರಾಧ ಸಂಹಿತೆಯ “ಕೊಲೆ”, “ಅತ್ಯಾಚಾರ” ಮತ್ತು “ಕ್ರಿಮಿನಲ್ ಬೆದರಿಕೆ”, ಪೋಕ್ಸೊ ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: ದೆಹಲಿ: ದಲಿತ ಅಪ್ರಾಪ್ತೆ ಅತ್ಯಾಚಾರ, ಕೊಲೆ ಪ್ರಕರಣ, ಮ್ಯಾಜಿಸ್ಟೀರಿಯಲ್ ತನಿಖೆಗೆ ಕೇಜ್ರಿವಾಲ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...