Homeಕರ್ನಾಟಕ13 ತಿಂಗಳಿಂದ ಫೆಲೋಶಿಪ್ ಇಲ್ಲ: ಸಿಎಂ ಗೆ ಪತ್ರ ಬರೆದ ರಾಜ್ಯದ PhD ಸಂಶೋಧನಾರ್ಥಿಗಳು

13 ತಿಂಗಳಿಂದ ಫೆಲೋಶಿಪ್ ಇಲ್ಲ: ಸಿಎಂ ಗೆ ಪತ್ರ ಬರೆದ ರಾಜ್ಯದ PhD ಸಂಶೋಧನಾರ್ಥಿಗಳು

- Advertisement -
- Advertisement -

ಕಳೆದ 13 ತಿಂಗಳುಗಳಿಂದ ಬಿಡುಗಡೆಯಾಗದಿರುವ ಪಿಹೆಚ್.ಡಿ. ಸಂಶೋಧನಾ ಫೆಲೋಶಿಪ್ ಬಿಡುಗಡೆ ಮಾಡಲು ಕೋರಿ ರಾಜ್ಯದ ವಿವಿಧ ವಿವಿಗಳ ಸಂಶೋಧನಾರ್ಥಿಗಳು ಬೆಂಗಳೂರಿನ ಹಿಂದುಳಿದ ವರ್ಗಗಳ ಇಲಾಖೆಗೆ ಪತ್ರ ಅಭಿಯಾನ ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಮನವಿ ಪತ್ರಗಳನ್ನು ಬರೆದಿದ್ದಾರೆ.

ರಾಜ್ಯದ 11 ವಿವಿಗಳು ಮತ್ತು 4 ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್.ಡಿ. ಅಧ್ಯಯನ ಕೈಗೊಂಡಿರುವ 700 ಕ್ಕೂ ಅಧಿಕ OBC (ಇತರೆ ಹಿಂದುಳಿದ ವರ್ಗಗಳ) ವಿದ್ಯಾರ್ಥಿಗಳಿಗೆ ಕಳೆದ 13 ತಿಂಗಳುಗಳಿಂದ ಮಾಸಿಕ ಶಿಷ್ಯವೇತನ ದೊರೆಯದಿರುವುದನ್ನು ಪ್ರತಿಭಟಿಸಿ ಪತ್ರ ಅಭಿಯಾನ ಆರಂಭಿಸಲಾಗಿದೆ.

ಇದನ್ನೂ ಓದಿ: ನಾವು ರೈತರನ್ನು ಬೆಂಬಲಿಸಬೇಕು, ಏಕೆಂದರೆ… – ನಿರ್ದೇಶಕ ಪ. ರಂಜಿತ್ ಟ್ವೀಟ್

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ , ಹಿಂದುಳಿಗ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಇಲಾಖೆಯ ಆಯುಕ್ತರಿಗೆ ಶಿಷ್ಯವೇತನ ಬಿಡುಗಡೆಗೆ ಕೋರಿ ಪ್ರತಿಯೊಬ್ಬರಿಗೂ 200 ಕ್ಕೂ ಅಧಿಕ ಮನವಿ ಪತ್ರಗಳನ್ನು ಗುರುವಾರ ಪೋಸ್ಟ್‌ಮಾಡಿದ್ದಾರೆ.

“ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪಿಹೆಚ್.ಡಿ. ಅಧ್ಯಯನ ಕೈಗೊಳ್ಳುವ ಬಡ OBC ವಿದ್ಯಾರ್ಥಿಗಳಿಗೆ ಸಹಾಯವಾಗಲೆಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ 2015-16 ನೇ ಸಾಲಿನಿಂದ ಮಾಸಿಕ ರೂ. 5000/- ವ್ಯಾಸಂಗ ವೇತನವನ್ನು (3 ವರ್ಷಗಳ ಅವಧಿಗೆ) ನೀಡಲು ಆರಂಭಿಸಿತ್ತು. 2018 ನೇ ಸಾಲಿನಲ್ಲಿ ಈ ಮೊತ್ತವನ್ನು 10,000/- ರೂಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳಿಗೆ 2019 ರ ಡಿಸೆಂಬರ್ ತಿಂಗಳಿನಿಂದ ಶಿಷ್ಯವೇತನ ದೊರೆತಿರುವುದಿಲ್ಲ ಹಾಗೂ 2020-21 ನೇ ಶೈಕ್ಷಣಿಕ ವರ್ಷದಲ್ಲಿ ಶಿಷ್ಯವೇತನಕ್ಕೆ ಅರ್ಜಿಹಾಕಲು ಮತ್ತು ಹಳೇ ವಿದ್ಯಾರ್ಥಿಗಳು ನವೀಕರಣ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿಲ್ಲ. ಹೀಗಾಗಿ ಒಟ್ಟು 13 ತಿಂಗಳಿನಿಂದ ಒಂದು ಲಕ್ಷಕ್ಕೂ ಅಧಿಕ ಶಿಷ್ಯವೇತನವನ್ನೇ ವಿದ್ಯಾರ್ಥಿಗಳಿಗೆ ಒದಗಿಸಿಲ್ಲ. ಆರ್ಥಿಕ ಮುಗ್ಗಟ್ಟಿನಿಂದಾಗಿ ಬಡವರು ಮತ್ತು ಕೃಷಿಕುಟುಂಬದಿಂದ ಬಂದಂತಹ ವಿದ್ಯಾರ್ಥಿಗಳಿಗೆ ಭಾರೀ ತೊಂದರೆಯಾಗುತ್ತಿದೆ” ಎಂದು ಸಂಶೋಧನಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಲಸಿಕೆಯ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆಯಲು ನಿರ್ಧಾರ- ಫೈಜರ್ ಫಾರ್ಮಾ

ಫೆಲೋಷಿಪ್ ಹಣವಿಲ್ಲದೆ ಪ್ರತೀ ತಿಂಗಳು ಹಾಸ್ಟೆಲ್‌ನ ಮೆಸ್‌ ಬಿಲ್, ಕೊಠಡಿ ಬಾಡಿಗೆ, ಅರ್ಧವಾರ್ಷಿಕ ವರದಿಗಳ ಶುಲ್ಕ ಪಾವತಿ, ಸಂಶೋಧನಾ ಸಂಬಂಧ ಕ್ಷೇತ್ರಕಾರ್ಯ ನಡೆಸಲು, ಪ್ರಯೋಗಾಲಯದ ಪರಿಕರಗಳು – ರಾಸಾಯನಿಕಗಳನ್ನು ಕೊಳ್ಳಲು ಪರದಾಡುವಂತಾಗಿದೆ. ಇದು ಒಟ್ಟಾರೆ ಸಂಶೋಧನಾ ಗುಣಮಟ್ಟ ಮತ್ತು ಪ್ರಗತಿ ಮೇಲೆ ಭಾರೀ ಪರಿಣಾಮ ಬೀರುತ್ತಿದೆ ಎಂದು ವಿದ್ಯಾರ್ಥಿಗಳು ಮನವಿ ಪತ್ರಗಳಲ್ಲಿ ತಿಳಿಸಿದ್ದಾರೆ.

ಇಂತಹ ಅನೇಕ ಸಮಸ್ಯೆಗಳಿಂದ 2017, 2018, 2019, 2020 ರ ಬ್ಯಾಚ್‌ನ ವಿದ್ಯಾರ್ಥಿಗಳು ತೀವ್ರವಾಗಿ ತೊಂದರೆಗೀಡಾಗಿದ್ದಾರೆ, ಈ ಸಲುವಾಗಿ ಧಾರವಾಡದ ಕೃಷಿ ಮತ್ತು ಕರ್ನಾಟಕ ವಿಶ್ವವಿದ್ಯಾಲಯ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯ, ಬಳ್ಳಾರಿಯ ವಿ.ಎಸ್.ಕೆ. ವಿವಿ, ತುಮಕೂರು ಮತ್ತು ದಾವಣಗೆರೆ ವಿವಿಗಳ 200 ಕ್ಕೂ ಅಧಿಕ ವಿದ್ಯಾರ್ಥಿಗಳು ಪತ್ರ ಬರೆದು ತುರ್ತಾಗಿ ಶಿಷ್ಯವೇತನ ಬಿಡುಗಡೆ ಮಾಡಬೇಕೆಂದು ಕೋರಿಕೊಂಡಿದ್ದಾರೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಮುಂದಿನ ಹೋರಾಟವನ್ನು ಬೆಂಗಳೂರಿನಲ್ಲಿ ಕೈಗೊಳ್ಳಲು ಯೋಜಿಸುತ್ತಿರುವುದಾಗಿಯೂ ತಿಳಿಸಿದ್ದಾರೆ.


ಇದನ್ನೂ ಓದಿ: ಮುಂದಿನ ರಿಹಾನ್ನಾ ವಿಡಿಯೋದಲ್ಲಿ ನೀವಿರುತ್ತೀರಿ: ಸ್ವರ, ತಾಪ್ಸಿ ಶ್ಲಾಘಿಸಿದ ಅಭಯ್ ಡಿಯೋಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...