Homeಮುಖಪುಟಸಂಸತ್ತಿನ ಒಳಗೆ, ಹೊರಗೆ ವಾಕ್‌ ಸ್ವಾತಂತ್ರ್ಯ ಇಲ್ಲವಾಗಿದೆ: ಖರ್ಗೆ ಟೀಕೆ

ಸಂಸತ್ತಿನ ಒಳಗೆ, ಹೊರಗೆ ವಾಕ್‌ ಸ್ವಾತಂತ್ರ್ಯ ಇಲ್ಲವಾಗಿದೆ: ಖರ್ಗೆ ಟೀಕೆ

- Advertisement -
- Advertisement -

ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, “ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ” ಎಂದಿದ್ದಾರೆ.

ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, “ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಪಕ್ಷದ 60 ದಿನಗಳ ‘ಹಾಥ್ ಸೆ ಹಾಥ್ ಜೋಡೋ’ ಜನಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಕಾಂಗ್ರೆಸ್ ಅಧ್ಯಕ್ಷರು ಪಾಕೂರಿನ ಗುಮಾನಿ ಮೈದಾನದಲ್ಲಿ ಮಾತನಾಡಿದರು.

ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ. ಯಾರಾದರೂ ಸತ್ಯವನ್ನು ಮಾತನಾಡಿದರೆ, ಅದರ ಬಗ್ಗೆ ಬರೆದರೆ, ಅದನ್ನು ತೋರಿಸಿದರೆ ಅವರು (ಬಿಜೆಪಿ) ಸತ್ಯ ಹೇಳಿದವರನ್ನು ಕಂಬಿ ಹಿಂದೆ ಕಳುಹಿಸುತ್ತಾರೆ ಎಂದು ಆರೋಪಿಸಿದರು.

“ನಾನು ಪ್ರಧಾನಿಯನ್ನು ವಿವರಿಸಲು ಯಾವುದೇ ಅಸಂಸದೀಯ ಪದ ಅಥವಾ ಭಾಷೆಯನ್ನು ಬಳಸಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್‌ ಅವರಿಗೆ ಇದೇ ರೀತಿ ಬಳಸಿದ್ದರು. ಬಿಜೆಪಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ಅವರಿಗೆ ಇದೇ ಪದ ಬಳಸಿದ್ದರು” ಎಂದು ಖರ್ಗೆ ಹೇಳಿದರು.

ಅದಾನಿ ವಿಚಾರದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“ಪ್ರಧಾನಿ ನರೇಂದ್ರ ಮೋದಿಯವರ ಸ್ನೇಹಿತರಾಗಿರುವ ಅದಾನಿ ಈಗ 13 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಅವರ ಆಸ್ತಿ 2019 ರಲ್ಲಿ 1 ಲಕ್ಷ ಕೋಟಿ ರೂಪಾಯಿಗಳಷ್ಟಿತ್ತು” ಎಂದು ಮಾಹಿತಿ ನೀಡಿದರು.

“ಪ್ರಧಾನಿ ಅವರಿಗಾಗಿ (ಅದಾನಿ) ಕೆಲಸ ಮಾಡುತ್ತಾರೆಯೇ ಹೊರತು ಬಡವರಿಗಾಗಿ ಅಲ್ಲ” ಎಂದು ಆರೋಪಿಸಿದ ಖರ್ಗೆಯವರು, “ಅದಾನಿ ಗ್ರೂಪ್‌ಗೆ ಎಲ್‌ಐಸಿಯ 16,000 ಕೋಟಿ ರೂ. ಮತ್ತು ಎಸ್‌ಬಿಐನ 82,000 ಕೋಟಿ ರೂ.ಗಳನ್ನು ನೀಡಲಾಗಿದೆ” ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಸಂಸತ್ತಿನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಆ ವಿಷಯವನ್ನು ಕಡತದಿಂದ ತೆಗೆದುಹಾಕಲಾಯಿತು ಎಂದು ಅವರು ಹೇಳಿದರು.

“ಇಡಿ, ಐಟಿ, ಸಿಬಿಐ ಪ್ರಕರಣಗಳನ್ನು ಎದುರಿಸುತ್ತಿರುವ ಅನೇಕ ಶಾಸಕರನ್ನು ಬಿಜೆಪಿ ಸೇರಿಸಿಕೊಂಡಿದೆ. ಮೋದಿ ಮತ್ತು ಶಾ ವಾಷಿಂಗ್ ಮೆಷಿನ್ ಖರೀದಿಸಿದ್ದಾರೆ, ಅದರಲ್ಲಿ ಅವರು ಅಂತಹ ಶಾಸಕರ ಕಲೆಗಳನ್ನು ತೊಳೆಯುತ್ತಾರೆ” ಎಂದು ವ್ಯಂಗ್ಯವಾಡಿದ್ದಾರೆ.

“ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಚುನಾಯಿತ ಸರ್ಕಾರಗಳನ್ನು ಉರುಳಿಸುವಲ್ಲಿ ನಿಪುಣರು” ಎಂದು ಆರೋಪಿಸಿದ ಖರ್ಗೆ, “ಇವರೆಲ್ಲ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ” ಎಂದು ಕುಟುಕಿದ್ದಾರೆ.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನದ ಪ್ರಕಾರ ನೀವು ಏಕೆ ಆಡಳಿತ ನಡೆಸುತ್ತಿಲ್ಲ? ಹಣದುಬ್ಬರವನ್ನು ತಡೆಯುವ ಭರವಸೆಯೊಂದಿಗೆ 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು, ಆದರೆ ಅದು ರಚನೆಯಾದಾಗಿನಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚುತ್ತಿದೆ, ಬಡತನ ಹೆಚ್ಚುತ್ತಿದೆ” ಎಂದು ವಿಷಾದಿಸಿದರು.

“ದೇಶದ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಕಾಂಗ್ರೆಸ್‌ನವರು” ಎಂದು ಖರ್ಗೆ ಬಣ್ಣಿಸಿದರು.

ಫೆಬ್ರವರಿ 27 ರಂದು ನಡೆಯಲಿರುವ ರಾಮಗಢ ಉಪಚುನಾವಣೆಗೆ ಯುಪಿಎ ಅಭ್ಯರ್ಥಿ ಬಜರಂಗ್ ಮಹತೋಗೆ ಮತ ನೀಡುವಂತೆ ಅವರು ಜನರಲ್ಲಿ ಮನವಿ ಮಾಡಿದರು.

‘ಹಾಥ್ ಸೆ ಹಾಥ್ ಜೋಡೋ’ ಕಾರ್ಯಕ್ರಮದ ಸಂದರ್ಭದಲ್ಲಿ, ಕಾಂಗ್ರೆಸ್ ಕಾರ್ಯಕರ್ತರು ಮನೆ-ಮನೆಗೆ ಭೇಟಿ ನೀಡಿ ಕೇಂದ್ರದ ಜನವಿರೋಧಿ ನೀತಿಗಳ ಬಗ್ಗೆ ಅರಿವು ಮೂಡಿಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ ಮತ್ತು ರಾಜ್ಯ ಸಚಿವ ಅಲಂಗೀರ್ ಆಲಂ ಸೇರಿದಂತೆ ಇತರ ಮುಖಂಡರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...