Homeಮುಖಪುಟ10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

10-15 ವರ್ಷ ಹಳೆಯ ವಾಹನಗಳಿಗೆ ಇಂಧನವಿಲ್ಲ!..ಏನಿದು ಹೊಸ ನಿಯಮ?

- Advertisement -
- Advertisement -

ಜುಲೈ 1, 2025ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ (no fuel for end-of-life vehicles) ನಿಯಮ ಜಾರಿಯಾಗಿದೆ.

ಹೊಸ ನಿಯಮದ ಪ್ರಕಾರ 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಇಂಧನ ಸಿಗುವುದಿಲ್ಲ. ಪರಿಸರ ಮಾಲಿನ್ಯ (ವಾಯು, ಶಬ್ದ ಇತ್ಯಾದಿ) ತಡೆಯಲು ಈ ನಿಯಮವನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) 2014 ಆದೇಶ ಮತ್ತು ಸುಪ್ರೀಂ ಕೋರ್ಟ್‌ನ 2018ರ ತೀರ್ಪಿನ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಓಡಿಸುವುದನ್ನು ಮತ್ತು ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.

‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನೀತಿಯನ್ನು ಮಾರ್ಚ್ 2025ರಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ, ಜುಲೈ 1ರಿಂದ ಜಾರಿಗೆ ಬಂದಿದೆ.

ಮಾರ್ಚ್ 2025ರ ಆರಂಭದಲ್ಲಿ, ದೆಹಲಿಯ ಪರಿಸರ ಖಾತೆ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರು, 15 ವರ್ಷ ಹಳೆಯ ಪೆಟ್ರೋಲ್ ವಾಹನಗಳು ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳಿಗೆ ಏಪ್ರಿಲ್ 1ರಿಂದ ಇಂಧನ ಕೇಂದ್ರಗಳು ಇಂಧನ ಒದಗಿಸುವುದಿಲ್ಲ ಎಂದು ಹೇಳಿದ್ದರು.

ವಾಹನಗಳ ಹೊರಸೂಸುವಿಕೆಯನ್ನು (ಇಂಗಾಲ ಡೈ ಆಕ್ಸೈಡ್) ಕಡಿಮೆ ಮಾಡುವ ವಿಶಾಲ ಕಾರ್ಯತಂತ್ರದ ಭಾಗ ಇದಾಗಿದ್ದು, ನಿಯಮವನ್ನು ಜಾರಿಗೊಳಿಸಲು ಇಂಧನ ಕೇಂದ್ರಗಳಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದಿದ್ದರು.

ಆದರೆ ಮಾರ್ಚ್ 2025ರ ಅಂತ್ಯದ ವೇಳೆಗೆ, ಇಂಧನ ಕೇಂದ್ರಗಳಲ್ಲಿ ಅಗತ್ಯವಿರುವ ಎನ್‌ಪಿಆರ್ ಕ್ಯಾಮರಾಗಳು ಮತ್ತು ಸಂಬಂಧಿತ ಸಾಧನಗಳ ಅಳವಡಿಕೆ ಅಪೂರ್ಣವಾಗಿದ್ದರಿಂದ ನಿಯಮ ಜಾರಿ ವಿಳಂಬವಾಗಿತ್ತು. ಮಾರ್ಚ್ 31, 2025 ರೊಳಗೆ ಎಲ್ಲಾ ಇಂಧನ ಕೇಂದ್ರಗಳು ಸಂಪೂರ್ಣವಾಗಿ ಸಜ್ಜುಗೊಂಡಿಲ್ಲದ ಕಾರಣ ನಿಯಮ ಜಾರಿಗೆ ಹೆಚ್ಚಿನ ಸಮಯದ ಅಗತ್ಯವಿದೆ ಎಂದು ಸಚಿವ ಸಿರ್ಸಾ ತಿಳಿಸಿದ್ದರು.

ಕೊನೆಗೆ ಜುಲೈ 1ರಂದು ‘ಅವಧಿ ಮುಗಿದ ವಾಹನಗಳಿಗೆ ಇಂಧನವಿಲ್ಲ’ ನಿಯಮವನ್ನು ಜಾರಿಗೆ ತರಲಾಗಿದೆ. ಈ ವೇಳೆ ದೆಹಲಿಯ 520 ಇಂಧನ ಕೇಂದ್ರಗಳ ಪೈಕಿ ಸುಮಾರು 500 ಕೇಂದ್ರಗಳಲ್ಲಿ ಎಎನ್‌ಪಿಆರ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಸಾರಿಗೆ ಇಲಾಖೆ, ದೆಹಲಿ ಪೊಲೀಸ್, ಸಂಚಾರ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಒಳಗೊಂಡ ವಿವರವಾದ ನಿಯಮ ಜಾರಿ ಕಾರ್ಯತಂತ್ರವು ಸಿದ್ದವಾಗಿದೆ ಎಂದು ಸರ್ಕಾರ ಹೇಳಿತ್ತು.

ವಾಯು ಗುಣಮಟ್ಟ ನಿರ್ವಹಣಾ ಆಯೋಗವು (ಸಿಎಕ್ಯೂಎಂ) ನಿಯಮ ಜಾರಿಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಿತ್ತು. ಅದರಂತೆ, ಜುಲೈ 1, 2025 ರಂದು ಬೆಳಿಗ್ಗೆ 6 ಗಂಟೆಗೆ ಅಧಿಕೃತವಾಗಿ ಅವಧಿ ಮುಗಿದ ವಾಹನಗಳಿಗೆ ಇಂಧನ ಪೂರೈಸುವುದನ್ನು ಸ್ಥಗಿತಗೊಳಿಸಲಾಗಿದೆ.

ಅವಧಿ ಮುಗಿದ ವಾಹನಗಳನ್ನು ಪತ್ತೆ ಹಚ್ಚುವುದು ಹೇಗೆ?

ಇಂಧನ ಕೇಂದ್ರಗಳಲ್ಲಿ ಅಥವಾ ಪೆಟ್ರೋಲ್ ಬಂಕ್‌ಗಳಲ್ಲಿ ಎಐ ಆಧಾರಿತ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ (ಎಎನ್‌ಪಿಆರ್) ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇದು ವಾಹನ ಬಂಕ್‌ಗೆ ಬಂದ ತಕ್ಷಣ ಅದರ ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿ ‘ವಾಹನ್’ ವ್ಯವಸ್ಥೆಯ ಡೇಟಾಬೇಸ್ ಮೂಲಕ ವಾಹನದ ಅವಧಿಯನ್ನು ಪತ್ತೆ ಹಚ್ಚುತ್ತದೆ.

ವಾಹನ ಮಾಲಕರ ಗತಿಯೇನು?

ಅವಧಿ ಮೀರಿದ ವಾಹನಗಳಿಗೆ ಇಂಧನ ಪೂರೈಕೆ ಮಾಡದಿದ್ದರೆ ವಾಹನ ಮಾಲಕರು ಅವುಗಳನ್ನು ಏನು ಮಾಡುವುದು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಬಹುದು. ಸದ್ಯಕ್ಕೆ ದೆಹಲಿಯಲ್ಲಿ ಮಾತ್ರ ಇಂಧನ ಪೂರೈಕೆ ಮಾಡುತ್ತಿಲ್ಲ. ಹಾಗಾಗಿ, ವಾಹನ ಮಾಲಕರು ದೆಹಲಿ-ಎನ್‌ಸಿಆರ್ ಹೊರಗೆ ವಾಹನವನ್ನು ಮರು ನೋಂದಾಯಿಸಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಪಡೆಯಬಹುದು.

ಖಾಸಗಿ ಸ್ಥಳಗಳಲ್ಲಿ ವಾಹನಗಳನ್ನು ನಿಲ್ಲಿಸಬಹುದು (ಸಾರ್ವಜನಿಕ ಪಾರ್ಕಿಂಗ್ ನಿಷೇಧಿಸಲಾಗಿದೆ).

ನೋಂದಾಯಿತ ಸ್ಕ್ರ್ಯಾಪಿಂಗ್ ಸೌಲಭ್ಯದಲ್ಲಿ ವಾಹನವನ್ನು ಸ್ಕ್ರ್ಯಾಪ್ ಮಾಡಬಹುದು ಅಥವಾ ವಾಹವನ್ನು ಗುಜರಿಗೆ ಹಾಕಬಹುದು.

ನಿಯಮ ಉಲ್ಲಂಘಿಸಿದರೆ ಏನಾಗುತ್ತದೆ?

ನಿಯಮ ಉಲ್ಲಂಘಿಸಿದರೆ ಕಾರುಗಳಿಗೆ 10,000 ರೂಪಾಯಿ ಮತ್ತು ದ್ವಿಚಕ್ರ ವಾಹನಗಳಿಗೆ 5,000 ರೂಪಾಯಿ ಜೊತೆಗೆ ಟೋವಿಂಗ್ ಶುಲ್ಕಗಳನ್ನು ವಿಧಿಸಲಾಗುತ್ತದೆ. ಪದೇ ಪದೇ ನಿಯಮ ಉಲ್ಲಂಘಿಸಿದರೆ ಸಂಬಂಧಿತ ಅಧಿಕಾರಿಗಳೇ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಸ್ಕ್ರ್ಯಾಪ್ ಮಾಡುತ್ತಾರೆ.

ಹೊಸ ನಿಯಮದಲ್ಲಿ ಅಂಗವಿಕಲರು ಅಥವಾ ಇತರ ಗುಂಪುಗಳಿಗೆ ಯಾವುದೇ ನಿರ್ದಿಷ್ಟ ವಿನಾಯಿತಿಗಳನ್ನು ನೀಡಲಾಗಿಲ್ಲ. ಅಂದರೆ, ಎಲ್ಲಾ ವಾಹನಗಳು, ಮಾಲೀಕತ್ವವನ್ನು ಲೆಕ್ಕಿಸದೆ, ನಿಯಮಗಳನ್ನು ಪಾಲಿಸಬೇಕಿದೆ.

ಇಂಧನ ತಡೆ ಹಿಡಿಯುವ ನೀತಿಯು, ಆಗಸ್ಟ್ 15, 2026 ರಿಂದ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ಮತ್ತು ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳನ್ನು ನಿಷೇಧಿಸುವ ಮುಂಬರುವ ದೆಹಲಿಯ ಇವಿ ನೀತಿ 2.0 ಮತ್ತು
ದೆಹಲಿಯ ಶುದ್ಧ ಗಾಳಿಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೆ ತರಲಾಗಿದೆ.

ದಂಡವನ್ನು ತಪ್ಪಿಸಲು ಜೀವಿತಾವಧಿ ಮುಗಿದ ವಾಹನಗಳ ಮಾಲೀಕರು ಹೊಸ, ತಂತ್ರಜ್ಞಾನಗಳು ಹೊಂದಿರುವ ವಾಹನಗಳು ಅಥವಾ ವಿದ್ಯುತ್ ವಾಹನಗಳಿಗೆ (ಇವಿ) ಬದಲಾಯಿಸಲು ಪ್ರೋತ್ಸಾಹಿಸಲಾಗುತ್ತದೆ.

ದೆಹಲಿ ಇವಿ ನೀತಿ 2.0 (ಭವಿಷ್ಯದ ಪರಿಣಾಮ)

ಆಗಸ್ಟ್ 15,2026 ರಿಂದ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಸಿಎನ್‌ಜಿ ದ್ವಿಚಕ್ರ ವಾಹನಗಳ ಹೊಸ ನೋಂದಣಿಗಳನ್ನು ನಿಷೇಧಿಸಲು ಯೋಜಿಸಲಾಗಿದೆ. ಇದರಿಂದಾಗಿ ವಿದ್ಯುತ್ ಚಾಲಿತ ವಾಹನಗಳಿಗೆ (ಇವಿ) ಬೇಡಿಕೆ ಹೆಚ್ಚಾಗಲಿದೆ. ಆಗಸ್ಟ್ 15,2025 ರಿಂದ ಸಿಎನ್‌ಜಿ ಆಟೋರಿಕ್ಷಾಗಳು ಸಹ ನಿರ್ಬಂಧಗಳನ್ನು ಎದುರಿಸಬೇಕಾಗುತ್ತದೆ.

ಬೈಕ್ ಟ್ಯಾಕ್ಸಿಯನ್ನು ಬೆಂಬಲಿಸಿದ ಕೇಂದ್ರದ ಮಾರ್ಗಸೂಚಿ: ರಾಜ್ಯದಲ್ಲಿ ಹೊಸ ನಿರೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...