Homeಮುಖಪುಟದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

ದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ರಮೇಶ್ ಜಗಜಿಣಗಿ ನೀವು ದಲಿತರಾಗಿದ್ದುಕೊಂಡು ಬಿಜೆಪಿಯೊಳಗಿದ್ದರೆ ಬೆಳಯಲು ಏನು ಅವಕಾಶ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಜಗಜಿಣಗಿ, ದಲಿತರಾಗಿದ್ದರೆ ಬಿಜೆಪಿಯೊಳಗೆ ಬೆಳೆಯಲು ಅವಕಾಶ ಸಿಗುವುದಿಲ್ಲ. ಶ್ರೀಮಂತ ನಾಯಕರು ಅಥವಾ ಒಕ್ಕಲಿಗರು ಇದ್ದರೆ ಅವರನ್ನು ಬೆಂಬಲಿಸುತ್ತಾರೆ. ಆದರೆ ದಲಿತರಿದ್ದರೆ ಯಾರೂ ಬೆಂಬಲಿಸುವುದಿಲ್ಲ. ಇದು ನಮಗೆ ತಿಳಿದಿದೆ ಮತ್ತು ಇದು ತುಂಬಾ ದುರದೃಷ್ಟಕರ ಎಂದು ಹೇಳಿದ್ದಾರೆ.

ಬಿಜೆಪಿಯ ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದೆ ಹೊರತು ಅವರನ್ನು ರಾಜ್ಯದ ಬಿಜೆಪಿ ನಾಯಕರು ಹೆಸರಿಸಿಲ್ಲ ಎಂದು ಹೇಳುವ ಮೂಲಕ ಪಕ್ಷದ ಹೈಕಮಾಂಡ್‌ ನಿರ್ಧಾರದ ವಿರುದ್ದ ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿ.ವೈ.ವಿಜಯೇಂದ್ರ ಅವರು ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಎಂಬ ಕಾರಣಕ್ಕೆ ಪಕ್ಷದ ಹೈಕಮಾಂಡ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಟೀಕಿಸಿದರು.

ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶುಕ್ರವಾರ ನೇಮಿಸಿದ್ದರು. ಅವರು ನ.15 ರಂದು ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರಿಂದ ವಿಜಯೇಂದ್ರ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ನೇಮಕ  ಬಿಜೆಪಿಯ ಹಲವು ಹಿರಿಯ ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಸೋಮಣ್ಣ, ಸಿಟಿ ರವಿ, ಯತ್ನಾಳ್ ಸೇರಿ ಹಲವು ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿತರಾಗಿದ್ದರು. ಆದರೆ ಕೊನೆಗೆ ಯಡಿಯೂರಪ್ಪ ಅವರೇ ಮೇಲುಗೈ ಸಾಧಿಸಿದ್ದಾರೆ.

ವಿಜಯೇಂದ್ರ ಅವರ ನೇಮಕದ ಬಗ್ಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೂ ಜವಾಬ್ದಾರಿ ನಿರ್ವಹಿಸಿದ್ದೇನೆ. ಈಗಾಗಲೆ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೇ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದರು.

ಇದನ್ನು ಓದಿ; ‘ಮರುನಾಡನ್ ಮಲಯಾಳಿ’ ಯೂಟ್ಯೂಬ್ ಚಾನೆಲ್ ಸಂಸ್ಥಾಪಕರ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...