Homeಮುಖಪುಟಐಟಿ ನಿಯಮಗಳ ತಿದ್ದುಪಡಿ, ಪ್ರತ್ಯೇಕ ಫ್ಯಾಕ್ಟ್‌ಚೆಕ್ ಘಟಕದ ಅಗತ್ಯತೆ ಏನಿದೆ?: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಐಟಿ ನಿಯಮಗಳ ತಿದ್ದುಪಡಿ, ಪ್ರತ್ಯೇಕ ಫ್ಯಾಕ್ಟ್‌ಚೆಕ್ ಘಟಕದ ಅಗತ್ಯತೆ ಏನಿದೆ?: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಹೊಸ ಐಟಿ ನಿಯಮಗಳು ಸರ್ಕಾರಕ್ಕೆ ಯಾವುದೇ “ಮಾರ್ಗಸೂಚಿಗಳು ಮತ್ತು ಗಾರ್ಡ್‌ರೈಲ್‌ಗಳು ಇಲ್ಲದೆಯೇ “ಅನಿಯಂತ್ರಿತ ಅಧಿಕಾರ” ನೀಡುತ್ತದೆ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಗಮನಿಸಿದೆ.

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಐಟಿ ನಿಯಮದ ತಿದ್ದುಪಡಿಗಳನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಪೀಠವು, ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್ ಚೆಕ್‌ನ್ನು ಸ್ಥಾಪಿಸಿದ್ದರೂ ತಿದ್ದುಪಡಿ ಮತ್ತು ಪ್ರತ್ಯೇಕ ಸತ್ಯ ಪರಿಶೀಲನಾ ಘಟಕದ ಅಗತ್ಯತೆ ಏನಿದೆ? ಎಂದು ಸರ್ಕಾರವನ್ನು ಪ್ರಶ್ನಿಸಿತು.

”ನೀವು ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತ PIB ಇದೆ, ಹಾಗಿದ್ದಾಗ ಈ ತಿದ್ದುಪಡಿ ಏಕೆ ಅಗತ್ಯವಿತ್ತು ಮತ್ತು ಫ್ಯಾಕ್ಟ್‌ಚೆಕ್ ಘಟಕ ಯಾಕೆ ಸ್ಥಾಪಿಸಬೇಕು? ಈ ತಿದ್ದುಪಡಿಯು ಉದ್ದೇಶವೇ ಬೇರೆ ಎಂದು ನಮಗೆ ಅನಿಸುತ್ತಿದೆ. ಸರ್ಕಾರವು “ಯಾವುದೇ ಫ್ಯಾಕ್ಟ್‌ಚೆಕ್ ಮಾಡಲು ಮಾರ್ಗಸೂಚಿ ಹೊಂದಿರುವುದು ಅಗತ್ಯವಿದೆ” ಎಂದು ನ್ಯಾಯಮೂರ್ತಿ ಪಟೇಲ್ ಹೇಳಿದರು.

ಈ ಮಧ್ಯೆ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪಿಐಬಿಯ ಫ್ಯಾಕ್ಟ್ ಚೆಕ್ ಯುನಿಟ್ “ಹಲ್ಲಿಲ್ಲ ಹಾವಿನಂತೆ” ಎಂದು ಹೇಳಿದರು.

”ಐಟಿ ನಿಯಮಗಳು ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸುವುದಕ್ಕೆ ಸಂಬಂಧಿಸಿಲ್ಲ. ಅಭಿಪ್ರಾಯ, ಟೀಕೆ ಅಥವಾ ತುಲನಾತ್ಮಕ ವಿಶ್ಲೇಷಣೆಯ ಯಾವುದೇ ಅಭಿವ್ಯಕ್ತಿಯನ್ನು ನಿಷೇಧಿಸಲು ಸರ್ಕಾರ ಪ್ರಯತ್ನಿಸುತ್ತಿಲ್ಲ… ವಾಸ್ತವವಾಗಿ ನಾವು ಅಂತವರನ್ನು ಸ್ವಾಗತಿಸುತ್ತೇವೆ, ಅವರಿಗೆ ಪ್ರೋತ್ಸಾಹಿಸುತ್ತೇವೆ ಮತ್ತು ಅವರಿಂದ ಕಲಿಯುತ್ತೇವೆ” ಎಂದು ಅವರು ಹೇಳಿದರು.

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಪ್ರಕರಣದಲ್ಲಿ ಈ ನಿಯಮಗಳನ್ನು ಅನಿಯಂತ್ರಿತ ಮತ್ತು ಅಸಂವಿಧಾನಿಕವಾಗಿ ಬಳಸಲಾಗಿದೆ ಎಂದು ಉಲ್ಲೇಖಿಸಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಮ್ಯಾಗಜೀನ್‌ಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆ ಅರ್ಜಿಗಳ ವಿಚಾರಣೆ ಬುಧವಾರವೂ ಮುಂದುವರಿಯಲಿದೆ.

ಈ ತಿದ್ದುಪಡಿಯನ್ನು ಏಪ್ರಿಲ್ 6ರಂದು ತಿಳಿಸಲಾಗಿದೆ, ಸರ್ಕಾರಿ ಸತ್ಯ-ಪರಿಶೀಲನಾ ಘಟಕದಿಂದ ನಕಲಿ ಎಂದು ಪರಿಗಣಿಸಲ್ಪಟ್ಟ ವಿಷಯವನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ಮತ್ತು ಇತರ ಮಧ್ಯವರ್ತಿಗಳು  ತೆಗೆದುಹಾಕಬೇಕು ಎಂದು ಹೇಳಿದರು. ಇದನ್ನು ಪತ್ರಿಕಾ ಗುಂಪುಗಳು, ವಿರೋಧ ಪಕ್ಷದ ನಾಯಕರು ಮತ್ತು ಪತ್ರಕರ್ತರು ವ್ಯಾಪಕವಾಗಿ ವಿರೋಧಿಸಿದರು.

ಇದನ್ನೂ ಓದಿ: ‘ಇಸ್ಕಾನ್’ ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...