Homeಕರ್ನಾಟಕಕೆಇಎ ಪರೀಕ್ಷೆಗೆ ಹಿಜಾಬ್ ನಿಷೇಧವಿಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

ಕೆಇಎ ಪರೀಕ್ಷೆಗೆ ಹಿಜಾಬ್ ನಿಷೇಧವಿಲ್ಲ: ಸಚಿವ ಸುಧಾಕರ್ ಸ್ಪಷ್ಟನೆ

- Advertisement -
- Advertisement -

ಪರೀಕ್ಷಾ ಅಕ್ರಮ ತಡೆಯುವ ಉದ್ದೇಶದಿಂದ ಕೆಇಎ ಆದೇಶವೊಂದನ್ನು ಹೊರಡಿಸಿತ್ತು. ಅದರಲ್ಲಿ ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್‌ಗಳ ಮೇಲೆ ನಿಷೇಧ ಹೇರಲಾಗಿದೆ. ಅದು ಹಿಜಾಬ್‌ಗಳಿಗೆ ಅನ್ವಯಿಸುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ. ಸುಧಾಕರ್ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.

ಕೆಇಎಯ ಹೊರಡಿಸಿದ್ದ ವಸ್ತ್ರ ಸಂಹಿತೆ ಆದೇಶ ಆಕ್ರೋಶಕ್ಕೆ ಕಾರಣವಾಗಿತ್ತು. ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕಾರಣಿಗಳಿಂದ ಟೀಕೆಗೆ ಗುರಿಯಾಗಿತ್ತು.

ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಸುಧಾಕರ್‌, ”ಹಿಜಾಬ್‌ಗಳು ಇತರ ತಲೆ ಹೊದಿಕೆಗಳಂತೆ ಅಡ್ಡಿಯಾಗುವುದಿಲ್ಲ. ಹಿಜಾಬ್ ಧರಿಸಿ ಅಭ್ಯರ್ಥಿಗಳು ಪರೀಕ್ಷಾ ಅಕ್ರಮಕ್ಕೆ ಬ್ಲೂಟೂತ್ ಸಾಧನಗಳನ್ನು ಬಳಸಲು ಸಾಧ್ಯವಿಲ್ಲ. ಡ್ರೆಸ್ ಕೋಡ್ ನಿಯಮಗಳನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ” ಎಂದು ಹೇಳಿದ್ದಾರೆ.

”ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳು ಇರಲಿವೆ. ಹಿಜಾಬ್ ಧರಿಸಿರುವ ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ವರದಿ ಮಾಡಿಕೊಳ್ಳಬೇಕು. ಹಿಂದಿನ ವರ್ಷಗಳಲ್ಲಿ ವರದಿಯಾಗಿರುವ ವಂಚನೆ ಘಟನೆಗಳನ್ನು ತಡೆಗಟ್ಟಲು ಹೆಚ್ಚಿನ ಮೆಟಲ್ ಡಿಟೆಕ್ಟರ್‌ಗಳನ್ನು ಬಳಸಲಾಗುತ್ತದೆ. ಹಾಗಾಗಿ ಸಂಪೂರ್ಣ ತಪಾಸಣೆ ಇರಲಿದೆ” ಎಂದು ತಿಳಿಸಿದ್ದಾರೆ.

”ಈ ನಿಯಮಗಳು ಹೊಸದೇನಲ್ಲ. ಅವು ಮೊದಲೇ ಅಸ್ತಿತ್ವದಲ್ಲಿವೆ. ಅನಗತ್ಯ ಕ್ಯಾಪ್ ಅಥವಾ ಸ್ಕಾರ್ಫ್‌ಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಈ ನಿಷೇಧ ಹಿಜಾಬ್‌ಗೆ ಅನ್ವಯಿಸುವುದಿಲ್ಲ” ಎಂದು ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಈ ಡ್ರೆಸ್ ಕೋಡ್ ಆದೇಶದಲ್ಲಿ ಎಲ್ಲಾ ರೀತಿಯ ತಲೆ ಹೊದಿಕೆಯನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪವಿತ್ತು. ಹಾಗಾಗಿ ಸಾಂಸ್ಕೃತಿಕ ಮತ್ತು ಧಾರ್ಮಿಕ ಹಕ್ಕುಗಳ ಬಗ್ಗೆ ಚರ್ಚೆ ಹುಟ್ಟುಹಾಕಿತ್ತು. ಇದೀಗ ಆ ಬಗ್ಗೆ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ನ.18 ಮತ್ತು 19 ರಂದು ರಾಜ್ಯಾದ್ಯಂತ ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಮುಂಚಿತವಾಗಿ ಈ ಪ್ರಕಟನೆ ಬಂದಿದೆ. ಬ್ಲೂಟೂತ್ ಸಾಧನಗಳನ್ನು ಬಳಸಿ ಪರೀಕ್ಷಾ ಅಕ್ರಮ ಎಸಗುವುದನ್ನು ತಡೆಯಲು ಪರೀಕ್ಷಾ ಹಾಲ್‌ನಲ್ಲಿ ”ತಲೆ, ಬಾಯಿ ಅಥವಾ ಕಿವಿಗಳನ್ನು ಮುಚ್ಚುವ ಯಾವುದೇ ಉಡುಪು ಅಥವಾ ಕ್ಯಾಪ್ ಧರಿಸುವುದನ್ನು ನಿಷೇಧಿಸಲಾಗುವುದು” ಎಂದು ಕೆಇಎ ಆದೇಶ ಹೊರಡಿಸಿತ್ತು.

ಇದನ್ನೂ ಓದಿ: 545 ಪಿಎಸ್‌ಐ ನೇಮಕಾತಿ ಹಗರಣ: ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ‘ಸಂವಿಧಾನ ಮತ್ತು ಮೀಸಲಾತಿ’ಯನ್ನು ರದ್ದುಗೊಳಿಸಲು ಬಯಸುತ್ತಿದೆ: ಲಾಲು ಪ್ರಸಾದ್ ಯಾದವ್

0
ಬಿಜೆಪಿ ಸಂವಿಧಾನ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ, ಸರ್ಕಾರಿ ಉದ್ಯೋಗ ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರು ಕೂಡ ಮೀಸಲಾತಿಯನ್ನು ಪಡೆಯಬೇಕು, ಅವರ ಮೀಸಲಾತಿ ಪರವಾಗಿ ನಾನಿದ್ದೇನೆ ಎಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ)...