Homeಮುಖಪುಟಅರ್ನಾಬ್ ವಾಟ್ಸಾಪ್ ಚಾಟ್: ಕೇಂದ್ರಕ್ಕೆ ಯಾವುದೇ ಮಾಹಿತಿಯಿಲ್ಲ ಎಂದ ಸಚಿವ ಜಿ.ಕಿಶನ್ ರೆಡ್ಡಿ

ಅರ್ನಾಬ್ ವಾಟ್ಸಾಪ್ ಚಾಟ್: ಕೇಂದ್ರಕ್ಕೆ ಯಾವುದೇ ಮಾಹಿತಿಯಿಲ್ಲ ಎಂದ ಸಚಿವ ಜಿ.ಕಿಶನ್ ರೆಡ್ಡಿ

ಈ ವಾಟ್ಸಾಪ್ ಚಾಟ್‌ಗಳನ್ನು ಮುಂಬೈ ಪೊಲೀಸರು ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್‌ಪಿ) ಹಗರಣದ ತನಿಖೆಯ ವೇಳೆ ಹೊರಗೆಳೆದಿದ್ದರು.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯು ದೇಶದ ಗೌಪ್ಯ ಮತ್ತು ಸೂಕ್ಷ್ಮ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ವಾಟ್ಸಾಪ್ ಚಾಟ್‌ಗಳ ಬಗ್ಗೆ ಕೇಂದ್ರಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ ಮಂಗಳವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದರು.

ಫೆಬ್ರವರಿ 2019 ರ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ, ಫೆಬ್ರವರಿ 26, 2019 ರಂದು ಬಾಲಕೋಟ್‌‌ನ ಭಯೋತ್ಪಾದಕ ಶಿಬಿರದ ಮೇಲೆ ಭಾರತೀಯ ಏರ್‌ ಫೋರ್ಸ್ ಬಾಂಬ್ ಸ್ಫೋಟಿಸಿದೆ ಎನ್ನಲಾದ ಈ ಯೋಜನೆಯು ಗೌಪ್ಯವಾಗಿತ್ತು ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅರ್ನಾಬ್‌‌‌‌‌ ಮತ್ತು ಆಗಿನ ಬಾರ್ಕ್‌‌ನ ಮುಖ್ಯ ಕಾರ್ಯನಿರ್ವಾಹಕ ಪಾರ್ಥೋ ದಾಸ್‌ಗುಪ್ತಾ ನಡುವೆ ನಡೆದಿರುವ ವಾಟ್ಸಾಪ್ ಸಂಭಾಷಣೆಯಲ್ಲಿ, ಭಾರತೀಯ ವಾಯುಸೇನೆ ನಡೆಸಲಿರುವ ಬಾಲಕೋಟ್ ವಾಯುದಾಳಿಯ ಬಗ್ಗೆ ದಾಳಿಗಿಂತಲೂ ಮೂರು ದಿನ ಮೊದಲೇ ಚರ್ಚಿಸಿದ್ದರು. ಅಲ್ಲದೇ ಪುಲ್ವಾಮ ದಾಳಿ ನಡೆದಾಗ ಅರ್ನಾಬ್ ಸಂಭ್ರಮಿಸಿದ್ದರು ಎಂದು ಹೇಳಲಾಗಿದೆ. ಇದು ದೇಶಾದ್ಯಂತ ಕೋಲಾಹಲ ಸೃಷ್ಟಿಸಿತ್ತು.

ಈ ವಾಟ್ಸಾಪ್ ಚಾಟ್‌ಗಳನ್ನು ಮುಂಬೈ ಪೊಲೀಸರು ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್‌ಪಿ) ಹಗರಣದ ತನಿಖೆಯ ವೇಳೆ ಹೊರಗೆಳೆದಿದ್ದರು.

ಇದನ್ನೂ ಓದಿ: ಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

ವಾಟ್ಸಾಪ್ ಚಾಟ್ ಪ್ರಕರಣದ ಬಗ್ಗೆ ವಿವರಗಳನ್ನು ಕೋರಿದ್ದ ಸಂಸತ್ತಿನ ಕನಿಷ್ಠ ಆರು ಸದಸ್ಯರಿಗೆ ಸಚಿವ ಜಿ.ಕಿಶನ್ ರೆಡ್ಡಿ ಲಿಖಿತ ಪ್ರತಿಕ್ರಿಯೆ ನೀಡಿದ್ದು, “ಅಂತಹ ಯಾವುದೇ ಮಾಹಿತಿಯು ಸರ್ಕಾರದ ಗಮನಕ್ಕೆ ಬಂದಿಲ್ಲ” ಎಂದಿ‌ದ್ದಾರೆ.

ದೇಶದ ಹಿತಾಸಕ್ತಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯ ಸೋರಿಕೆ ದೇಶದ ಭದ್ರತೆಯ ಉಲ್ಲಂಘನೆಯಾಗಿದೆ ಎಂದು ಅರ್ನಾಬ್ ಮತ್ತು ಬಾರ್ಕ್‌‌ನ ಮಾಜಿ ಮುಖ್ಯ ಕಾರ್ಯನಿರ್ವಾಹಕ ಪಾರ್ಥೋ ದಾಸ್‌ಗುಪ್ತಾ ಅವರ ನಡುವಿನ ಉದ್ದೇಶಿತ ಚಾಟ್‌ಗಳ ಕುರಿತು ತನಿಖೆ ನಡೆಸಬೇಕೆಂದು ಆಡಳಿತಾರೂಢ ಮಹಾರಾಷ್ಟ್ರ ವಿಕಾಸ್ ಅಘಾಡಿ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಫೆಬ್ರವರಿ 2019 ರ ಬಾಲಕೋಟ್ ವೈಮಾನಿಕ ದಾಳಿಯ ವಿವರಗಳ ಜೊತೆಗೆ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನಗಳನ್ನು ತೆಗೆದುಹಾಕುವ ಕೇಂದ್ರದ ಕ್ರಮಗಳನ್ನು ಒಳಗೊಂಡಿದ್ದ ವಾಟ್ಸಾಪ್ ಸಂಭಾಷಣೆಯ ಪ್ರತಿ ಕೂಡ ಟಿಆರ್‌ಪಿ ಹಗರಣದಲ್ಲಿ ಮುಂಬೈ ಪೊಲೀಸರು ಸಲ್ಲಿಸಿದ್ದ 500 ಪುಟಗಳ ಚಾರ್ಜ್‌ಶೀಟ್‌ನ ಒಂದು ಭಾಗವಾಗಿತ್ತು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ರಾಷ್ಟ್ರೀಯ ಭದ್ರತೆಯ ಉಲ್ಲಂಘನೆ ಎಂದು ಕರೆದು ಜಂಟಿ ಸಂಸದೀಯ ಸಮಿತಿ ಪ್ರಕರಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿತು. ದೇಶದ ಬಗೆಗಿನ ಉನ್ನತ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡುವುದು ಅಪರಾಧ. ಅಂತಹ ಕೃತ್ಯಕ್ಕೆ ಕಾರಣರಾದವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ರಾಹುಲ್ ಗಾಂಧಿ ಕೇಂದ್ರಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...