Homeಮುಖಪುಟಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳ ಶರಣಾಗತಿ ಬಗ್ಗೆ ಮಾಹಿತಿ ಇಲ್ಲ; ದಾಹೋದ್‌ ಎಸ್ಪಿ

ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳ ಶರಣಾಗತಿ ಬಗ್ಗೆ ಮಾಹಿತಿ ಇಲ್ಲ; ದಾಹೋದ್‌ ಎಸ್ಪಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ ನಂತರ ದಾಹೋದ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅಪರಾಧಿಗಳ ಶರಣಾಗತಿ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದ್ದಾರೆ.

ಅಪರಾಧಿಗಳಿಗೆ ಮತ್ತೆ ಜೈಲಿಗೆ ಹೋಗಲು ಆದೇಶಿಸಿದ ಬಳಿಕ ಶಾಂತಿ ಕಾಪಾಡಲು ಅಪರಾಧಿಗಳು ವಾಸಿಸುವ ಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಅಪರಾಧಿಗಳು  ತಲೆಮರೆಸಿಕೊಂಡಿಲ್ಲ ಮತ್ತು ಅವರಲ್ಲಿ ಕೆಲವರು ಸಂಬಂಧಿಕರನ್ನು ಭೇಟಿ ಮಾಡಲು ಹೋಗಿದ್ದಾರೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಹೇಳಿದ್ದಾರೆ.

2002ರಲ್ಲಿ ಗೋಧ್ರಾದಲ್ಲಿ ರೈಲು ಸುಟ್ಟ ಘಟನೆಯ ನಂತರ ನಡೆದಿದ್ದ ಕೋಮು ಗಲಭೆ ವೇಳೆ ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆದರೆ ಆಕೆಯ ಮೂರು ವರ್ಷದ ಮಗಳು ಮತ್ತು ಇತರ ಆರು ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು 11 ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಗೊಳಿಸಿದೆ. 2022ರ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ ಎಲ್ಲಾ ಅಪರಾಧಿಗಳನ್ನು ಎರಡು ವಾರಗಳಲ್ಲಿ ಶರಣಾಗುವಂತೆ ಹೇಳಿದೆ.

ಈ ಬಗ್ಗೆ ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಪ್ರತಿಕ್ರಿಯಿಸಿದ್ದು, ಶರಣಾಗತಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇಲ್ಲ. ಸುಪ್ರೀಂಕೋರ್ಟ್ ತೀರ್ಪಿನ ಪ್ರತಿ ನಮಗೆ ತಲುಪಿಲ್ಲ. ಶಿಕ್ಷೆಗೊಳಗಾದವರು ಸಿಂಗವಾಡ್ ತಾಲೂಕಿನ ನಿವಾಸಿಗಳಾಗಿದ್ದು, ಸೋಮವಾರ ಬೆಳಗ್ಗೆಯಿಂದಲೇ ತೀರ್ಪು ಹೊರಬೀಳುವ ಮುನ್ನ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕೋಮು ಸಂಘರ್ಷ ನಡೆಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಇಡೀ ರಂಧಿಕ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಗಳು?

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಲ್ಲಿ ಒಂಬತ್ತು ಮಂದಿ ವಾಸಿಸುತ್ತಿದ್ದ ಗುಜರಾತ್‌ನ ದೋಹದ್ ಜಿಲ್ಲೆಯ ರಣಧಿಕ್‌ಪುರ್ ಮತ್ತು ಸಿಂಗ್‌ವಾಡ್ ಅವಳಿ ಗ್ರಾಮಗಳಲ್ಲಿ ಮನೆಗಳಿಗೆ ಬೀಗ ಹಾಕಲಾಗಿದೆ. ಅಲ್ಲಿಗೆ ತೆರಳಿದರೆ ಅಪರಾಧಿಗಳ ಮನೆಗಳು ಬಾಗಿಲು ಮುಚ್ಚಿಕೊಂಡಿದೆ ಮತ್ತು ಭದ್ರತೆಗೆ ನಿಯೋಜಿಸಿರುವ ಪೊಲೀಸ್ ಸಿಬ್ಬಂದಿ ನಮ್ಮನ್ನು ಸ್ವಾಗತಿಸುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಸುಪ್ರೀಂಕೋರ್ಟ್‌ ತೀರ್ಪಿನ ಬೆನ್ನಲ್ಲೇ ನಾವು ಅಪರಾಧಿಗಳು ವಾಸಿಸುತ್ತಿದ್ದ ಗ್ರಾಮಕ್ಕೆ ತೆರಳಿದ್ದೆವು. ಆದರೆ, ಅಲ್ಲಿದ್ದ ಅವರ ಸಂಬಂಧಿಕರು 9 ಅಪರಾಧಿಗಳು ಎಲ್ಲಿದ್ದಾರೆ ಎಂಬ ಮಾಹಿತಿ ಬಿಟ್ಟುಕೊಡಲು ನಿರಾಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿತ್ತು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರದ ಅಪರಾಧಿ ರಾಧೇಶ್ಯಾಮ್ ಶಾ ಕಳೆದ 15 ತಿಂಗಳಿಂದ ಮನೆಗೆ ಬಂದಿಲ್ಲ ಎಂದು ಆತನ ತಂದೆ ಭಗವಾನ್‌ದಾಸ್ ಶಾ ಹೇಳಿದ್ದರು. ಆದರೆ ರಾಧೇಶ್ಯಾಮ್ ಸೇರಿದಂತೆ ಬಹುತೇಕ ಎಲ್ಲಾ ಅಪರಾಧಿಗಳು ಭಾನುವಾರದವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು ಎಂದು ಸ್ಥಳೀಯರು  ಹೇಳಿದ್ದರು.

ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆ ಮಾಧ್ಯಮದವರು ಮನೆ ಬಳಿ ಬರಬಹುದೆಂದು ಅವರು ಬೀಗ ಹಾಕಿ ಹೋಗಿರಬಹುದು. ಅಲ್ಲದೆ ತಲೆಮರೆಸಿಕೊಳ್ಳುವ ಉದ್ದೇಶ ಅವರಿಗೆ ಇರಲು ಸಾಧ್ಯವಿಲ್ಲ. ಏಕೆಂದರೆ ಕಳೆದ 20 ವರ್ಷಗಳಲ್ಲಿ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆಗೊಂಡಾಗಲೂ ಅವರು ಯಾರೂ ತಪ್ಪಿಸಿಕೊಂಡಿರಲಿಲ್ಲ ಎಂದು ಅಪರಾಧಿ ಗೋವಿಂದ್‌ನ ತಂದೆ ಅಖಂಭಾಯ್ ಹೇಳಿರುವ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...