Homeಮುಖಪುಟ‘ಆಂತರಿಕ ಗಾಯವಿಲ್ಲ’ | ದೆಹಲಿ ಮಹಿಳೆಯ ಸಾಮೂಹಿಕ ಅತ್ಯಾಚಾರ ಆರೋಪದ ಕುರಿತು ವೈದ್ಯರ ಸ್ಪಷ್ಟೀಕರಣ

‘ಆಂತರಿಕ ಗಾಯವಿಲ್ಲ’ | ದೆಹಲಿ ಮಹಿಳೆಯ ಸಾಮೂಹಿಕ ಅತ್ಯಾಚಾರ ಆರೋಪದ ಕುರಿತು ವೈದ್ಯರ ಸ್ಪಷ್ಟೀಕರಣ

- Advertisement -
- Advertisement -

ಗಾಜಿಯಾಬಾದ್‌ನಲ್ಲಿ ಐದು ಜನರಿಂದ ಎರಡು ದಿನಗಳ ಕಾಲ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿದ್ದಾರೆ ಎಂದು ಆರೋಪಿಸಲಾಗಿದ್ದ 36 ವರ್ಷದ ದೆಹಲಿಯ ಮಹಿಳೆಗೆ ಯಾವುದೇ ಆಂತರಿಕ ಗಾಯಗಳಾಗಿಲ್ಲ ಎಂದು ಗುರು ತೇಗ್ ಬಹದ್ದೂರ್ (ಜಿಟಿಬಿ) ಆಸ್ಪತ್ರೆ ಬುಧವಾರ ತಿಳಿಸಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಈ ಹಿಂದೆ ಟ್ವೀಟ್ ಮಾಡಿ, “ಆರೋಪಿಗಳು ಮಹಿಳೆಯ ದೇಹದ ಒಳಗಡೆ ಕಬ್ಬಿಣದ ರಾಡ್‌‌‌ ಹಾಕಿದ್ದು, ಇದರಿಂದಾಗಿ ಮಹಿಳೆ ತೀವ್ರ ಗಂಭೀರ ಸ್ಥಿತಿಯಲ್ಲಿದ್ದಾರೆ” ಎಂದು ಹೇಳಿದ್ದರು. ಆದರೆ, ಜಿಟಿಬಿ ಆಸ್ಪತ್ರೆಯು ‘‘ಮಹಿಳೆಯ ಸ್ಥಿತಿ ಸ್ಥಿರವಾಗಿದ್ದು, ವೀಕ್ಷಣೆಯಲ್ಲಿದ್ದಾರೆ. ಇಲ್ಲಿಯವರೆಗೆ ಯಾವುದೇ ಆಂತರಿಕ ಗಾಯ ಕಂಡುಬಂದಿಲ್ಲ” ಎಂದು ಅವರು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐವರು ಆರೋಪಿಗಳು ಸಂತ್ರಸ್ತ ಮಹಿಳೆಗೆ ಪರಿಚಿತರಾಗಿದ್ದಾರೆ ಎಂದು ಗಾಜಿಯಾಬಾದ್ ಪೊಲೀಸರು ತಿಳಿಸಿದ್ದಾರೆ. “ಸಂತ್ರಸ್ತ ಮಹಿಳೆ ಮತ್ತು ಆರೋಪಿಗಳ ನಡುವೆ ಆಸ್ತಿ ವಿವಾದವಿದೆ ಎಂದು ಹೇಳಲಾಗುತ್ತಿದ್ದು, ಅದರ ಪ್ರಕರಣದವು ಉಪ-ನ್ಯಾಯಾಲಯದಲ್ಲಿದೆ. ನಾವು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ” ಎಂದು ಘಾಜಿಯಾಬಾದ್ ಪೊಲೀಸ್ ವರಿಷ್ಠಾಧಿಕಾರಿ ನಿಪುನ್ ಅಗರ್ವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಬಿಲ್ಕಿಸ್ ಪ್ರಕರಣದ ಅಪರಾಧಿ ಪೆರೋಲ್‌ನಲ್ಲಿದ್ದಾಗ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಪ್ರಕರಣ ಎದುರಿಸುತ್ತಿದ್ದಾನೆ

ದೆಹಲಿಗೆ ಉಪಗ್ರಹ ಪಟ್ಟಣವನ್ನು ಸಂಪರ್ಕಿಸುವ ಆಶ್ರಮ ರಸ್ತೆಯ ಬಳಿ ಮಹಿಳೆಯೊಬ್ಬರು ಮಲಗಿರುವ ಬಗ್ಗೆ ಗಾಜಿಯಾಬಾದ್ ಪೊಲೀಸರು ಮಂಗಳವಾರ ಎಚ್ಚರಿಸಿದ್ದಾರೆ. ಮಹಿಳೆ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ನಿರಾಕರಿಸಿದ್ದರಿಂದ ಪೊಲೀಸರು ಆಕೆಯನ್ನು ಜಿಟಿಬಿ ಆಸ್ಪತ್ರೆಗೆ ಕರೆದೊಯ್ದು ದೂರು ದಾಖಲಿಸಿಕೊಂಡಿದ್ದಾರೆ.

ದೆಹಲಿಯ ಸ್ಯಾಟಲೈಟ್‌‌‌‌‌ ಪಟ್ಟಣವನ್ನು ಸಂಪರ್ಕಿಸುವ ಆಶ್ರಮ ರಸ್ತೆಯ ಬಳಿ ಮಹಿಳೆಯೊಬ್ಬರು ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ ಗಾಜಿಯಾಬಾದ್ ಪೊಲೀಸರು ಮಂಗಳವಾರ ತಿಳಿಸಿದ್ದರು. ಮಹಿಳೆ ಸರ್ಕಾರಿ ಆಸ್ಪತ್ರೆಯಲ್ಲಿ ತಪಾಸಣೆಗೆ ನಿರಾಕರಿಸಿದ್ದರಿಂದ ಪೊಲೀಸರು ಅವರನ್ನು ಜಿಟಿಬಿ ಆಸ್ಪತ್ರೆಗೆ ಕರೆದೊಯ್ದು ದೂರು ದಾಖಲಿಸಿಕೊಂಡಿದ್ದಾರೆ.

“ಮಹಿಳೆ ಭಾನುವಾರ ಘಾಜಿಯಾಬಾದ್‌ನಲ್ಲಿ ಹುಟ್ಟುಹಬ್ಬದ ಪಾರ್ಟಿ ಮುಗಿಸಿ ದೆಹಲಿಗೆ ಮರಳುತ್ತಿದ್ದರು. ಮಹಿಳೆಯ ಸಹೋದರ ಅವರನ್ನು ಬಸ್ ನಿಲ್ದಾಣಕ್ಕೆ ಕರೆದುಕೊಂಡು ಬಂದು ಬಿಟ್ಟು ಹೋಗಿದ್ದರು. ಅವರು ಬಸ್‌ಗಾಗಿ ಕಾಯುತ್ತಿದ್ದಾಗ, ಕಾರೊಂದು ಮಹಿಳೆಯ ಬಳಿಗೆ ಬಂದಿದ್ದು, ಅದರಲ್ಲಿದ್ದ ಐವರು ದುಷ್ಕರ್ಮಗಳು ಅವರನ್ನು ಎಳೆದೊಯ್ದಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

ಮಹಿಳೆಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಲಾಗಿದೆ ಎಂದು ಸಂಶಯಿಸಲಾಗಿದೆ. ಈ ಬಗ್ಗೆ ದೆಹಲಿ ಮಹಿಳಾ ಆಯೋಗವು ಗಾಜಿಯಾಬಾದ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ ಆರೋಪಿಯ ವಿವರಗಳನ್ನು ಕೇಳಲು ನೋಟಿಸ್ ನೀಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...