Homeಅಂತರಾಷ್ಟ್ರೀಯNo Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

No Kings : ಅಮೆರಿಕದಾದ್ಯಂತ ಟ್ರಂಪ್ ವಿರುದ್ಧ ಬೃಹತ್ ಪ್ರತಿಭಟನೆ; ಬೀದಿಗಿಳಿದ ಲಕ್ಷಾಂತರ ಜನರು

- Advertisement -
- Advertisement -

ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಅಮೆರಿಕದಾದ್ಯಂತ ಶನಿವಾರ (ಮಾ. 28) ದೊಡ್ಡ ಮಟ್ಟದ ‘ನೋ ಕಿಂಗ್ಸ್’ ಪ್ರತಿಭಟನೆಗಳು ನಡೆದಿವೆ.

ಟ್ರಂಪ್ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರಿ, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಜನರು ಲಕ್ಷಾಂತರ ಸಂಖ್ಯೆಯಲ್ಲಿ ಬೀದಿಗಿಳಿದಿದ್ದರು.

ವರದಿಗಳ ಪ್ರಕಾರ, ಅಮೆರಿಕದ ಎಲ್ಲಾ 50 ರಾಜ್ಯಗಳ ಸುಮಾರು 3,100ಕ್ಕೂ ಹೆಚ್ಚು ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿದ್ದು, ಅಂದಾಜು 90 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.

ನ್ಯೂಯಾರ್ಕ್, ವಾಷಿಂಗ್ಟನ್ ಡಿಸಿ, ಚಿಕಾಗೋ, ಲಾಸ್ ಏಂಜಲೀಸ್, ಸಿಯಾಟಲ್ ಮತ್ತು ಮಿನ್ನಿಯಾಪೋಲಿಸ್ ಸೇರಿದಂತೆ ಪ್ರಮುಖ ನಗರಗಳಲ್ಲಿ ಬೃಹತ್ ರ‍್ಯಾಲಿಗಳು ನಡೆದಿವೆ.

ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್‌ನ ಮಿಲಿಟರಿ ದಾಳಿ ಹಾಗೂ ಯುದ್ಧದ ನೀತಿಗಳ ವಿರುದ್ಧ ಪ್ರತಿಭಟನೆಯಲ್ಲಿ ಪಾಲ್ಗೊಂಡ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ರಂಪ್ ಆಡಳಿತ ಸರ್ವಾಧಿಕಾರದ ಹಾದಿ ಹಿಡಿದಿದೆ ಮತ್ತು ನಾಗರಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದ್ದಾರೆ.

‘50501 ಮೂವ್‌ಮೆಂಟ್’, ‘ಇಂಡಿವಿಸಿಬಲ್’ ಮತ್ತು ‘ಮೂವ್ ಆನ್’ ನಂತಹ ನಾಗರಿಕ ಸಂಘಟನೆಗಳು ಪ್ರತಿಭಟನೆಗಳನ್ನು ಆಯೋಜಿಸಿದ್ದವು. ಡೆಮೋಕ್ರಾಟಿಕ್ ಪಕ್ಷದ ಪ್ರಮುಖ ನಾಯಕರಾದ ಬರ್ನಿ ಸ್ಯಾಂಡರ್ಸ್ ಮತ್ತು ಅಲೆಕ್ಸಾಂಡ್ರಿಯಾ ಒಕಾಸಿಯೊ-ಕಾರ್ಟೆಜ್ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.

ಅಮೆರಿಕ ಮಾತ್ರವಲ್ಲದೆ, ಲಂಡನ್ ಮತ್ತು ಪ್ಯಾರಿಸ್ ಸೇರಿದಂತೆ ಯುರೋಪಿನ ಹಲವು ಪ್ರಮುಖ ನಗರಗಳಲ್ಲೂ ಈ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ರ‍್ಯಾಲಿಗಳನ್ನು ನಡೆಸಲಾಗಿದೆ ಎಂದು ವರದಿಯಾಗಿದೆ.

ಅಮೆರಿಕದ ಹೊರತಾಗಿಯೂ, ಸುಮಾರು 15ಕ್ಕೂ ಹೆಚ್ಚು ದೇಶಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಸಾಂಪ್ರದಾಯಿಕ ರಾಜಪ್ರಭುತ್ವವಿರುವ ದೇಶಗಳಲ್ಲಿ ಈ ಚಳವಳಿಯನ್ನು “ನೋ ಟೈರಂಟ್ಸ್” ಎಂಬ ಹೆಸರಿನಡಿ ಆಯೋಜಿಸಲಾಗಿತ್ತು. 

ಅಮೆರಿಕದ ಕೇವಲ ದೊಡ್ಡ ನಗರಗಳಲ್ಲದೆ, ಇಡಾಹೊ ಮತ್ತು ವ್ಯೋಮಿಂಗ್‌ನಂತಹ ಸಂಪ್ರದಾಯವಾದಿ ರಾಜ್ಯಗಳ ಸಣ್ಣ ಗ್ರಾಮಗಳಲ್ಲೂ ‘ನೋ ಕಿಂಗ್ಸ್’ ರ‍್ಯಾಲಿಗಳು ನಡೆದಿವೆ ಎಂದು ವರದಿಗಳು ಹೇಳಿವೆ.

ಶ್ವೇತಭವನ ಈ ಪ್ರತಿಭಟನೆಗಳನ್ನು ‘ಎಡಪಂಥೀಯ ನಿಧಿ ಜಾಲಗಳ ಉತ್ಪನ್ನ’ ಎಂದು ವ್ಯಗ್ಯಂವಾಡಿದೆ. ಟ್ರಂಪ್ ಬೆಂಬಲಿಗರು ಪ್ರತಿಭಟನೆಯಲ್ಲಿ ಪಾಲ್ಗೊಂಡವರನ್ನು ಮತ್ತು ಬೆಂಬಲಿಸಿದವರನ್ನು ಟೀಕಿಸಿದ್ದಾರೆ.

ಶ್ವೇತಭವನದ ವಕ್ತಾರರು ಈ ಪ್ರತಿಭಟನೆಗಳನ್ನು “ಟ್ರಂಪ್ ಡರೇಂಜ್‌ಮೆಂಟ್ ಥೆರಪಿ ಸೆಷನ್ಸ್” ಎಂದು ಕರೆದು ಲೇವಡಿ ಮಾಡಿದ್ದಾರೆ.

ಡಲ್ಲಾಸ್‌ನಂತಹ ಕೆಲವು ನಗರಗಳಲ್ಲಿ ಪ್ರತಿಭಟನಾಕಾರರು ಮತ್ತು ಟ್ರಂಪ್ ಬೆಂಬಲಿಗರ (Proud Boys ನಂತಹ ಸಂಘಟನೆಗಳು) ನಡುವೆ ಸಣ್ಣ ಮಟ್ಟದ ಘರ್ಷಣೆಗಳು ನಡೆದು, ಹಲವರನ್ನು ಬಂಧಿಸಲಾಗಿದೆ.

ಪ್ರತಿಭಟನೆಗೆ ಕಾರಣವೇನು?

ಅಮೆರಿಕ ಮತ್ತು ಇಸ್ರೇಲ್‌ನ ಇರಾನ್ ಮೇಲಿನ ಮಿಲಿಟರಿ ಕ್ರಮ ಪ್ರತಿಭಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಸಿಕ್ಕ ಸಿಕ್ಕ ರಾಷ್ಟ್ರಗಳ ಮೇಲೆ ದಾಳಿ ಮಾಡುವ ಟ್ರಂಪ್‌ನ ಯುದ್ಧ ನೀತಿಯ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ.

ಇದರ ಜೊತೆಗೆ, ಇತ್ತೀಚೆಗೆ ಮಿನ್ನಿಯಾಪೋಲಿಸ್‌ನಲ್ಲಿ ನಡೆದ ಐಸಿಇ ಏಜೆಂಟ್‌ಗಳ ಗುಂಡಿನ ದಾಳಿಯಲ್ಲಿ ಅಲೆಕ್ಸ್ ಪ್ರೆಟ್ಟಿ ಸೇರಿದಂತೆ ಮೂವರು ನಾಗರಿಕರ ಸಾವಿನ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಹಾಗೂ, ಅಮೆರಿಕದಲ್ಲಿ ಏರುತ್ತಿರುವ ಹಣದುಬ್ಬರ ಮತ್ತು ಮೂಲಭೂತ ವಸ್ತುಗಳ ಬೆಲೆ ಏರಿಕೆಯನ್ನು ಪ್ರತಿಭಟನಾಕಾರರು ವಿರೋಧಿಸಿದ್ದಾರೆ.

ಈ ಪ್ರತಿಭಟನೆಯು ಮುಂದಿನ ಅಮೆರಿಕದ ಮಧ್ಯಂತರ ಚುನಾವಣೆಗಳ ಮೇಲೆ ಭಾರಿ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CNN ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರಿಂದ ದಾಳಿ : ಮಾಧ್ಯಮ ಒಕ್ಕೂಟದಿಂದ ತೀವ್ರ ಖಂಡನೆ

ಆಕ್ರಮಿತ ಪಶ್ಚಿಮ ದಂಡೆಯಲ್ಲಿ ವರದಿ ಮಾಡುತ್ತಿದ್ದ ಸಿಎನ್‌ಎನ್‌ ಮಾಧ್ಯಮ ಸಂಸ್ಥೆಯ ಪತ್ರಕರ್ತರ ಮೇಲೆ ಇಸ್ರೇಲಿ ಸೈನಿಕರು ನಡೆಸಿದ ದೌರ್ಜನ್ಯವನ್ನು ಮಾಧ್ಯಮ ಒಕ್ಕೂಟ ಫಾರಿನ್ ಪ್ರೆಸ್ ಅಸೋಸಿಯೇಷನ್ (ಎಫ್‌ಪಿಎ) ತೀವ್ರವಾಗಿ ಖಂಡಿಸಿದೆ. ಪ್ಯಾಲೆಸ್ತೀನ್‌ನ ತಯಾಸಿರ್...

ಪಶ್ಚಿಮ ಏಷ್ಯಾ ಸಂಘರ್ಷ: ಮಧ್ಯಪ್ರಾಚ್ಯಕ್ಕೆ 3,500 ಅಮೆರಿಕ ಸೈನಿಕರ ನಿಯೋಜನೆ; ಇರಾನ್ ಮೇಲೆ ಭೂದಾಳಿ ನಡೆಸಲು ಪೆಂಟಗನ್ ಸಿದ್ಧತೆ

ಇರಾನ್ ಜೊತೆಗಿನ ಉದ್ವಿಗ್ನತೆ ಹೆಚ್ಚುತ್ತಿರುವಂತೆ, ಪೆಂಟಗನ್ ಸಂಭಾವ್ಯ ನೆಲದ ಕಾರ್ಯಾಚರಣೆಗಳಿಗೆ ಸಿದ್ಧತೆ ನಡೆಸುತ್ತಿದೆ ಎಂದು ವರದಿಗಳು ಸೂಚಿಸುತ್ತಿರುವಾಗಲೂ, ಅಮೆರಿಕವು ಮಧ್ಯಪ್ರಾಚ್ಯದಲ್ಲಿ ತನ್ನ ಮಿಲಿಟರಿ ಉಪಸ್ಥಿತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ, 3,500 ಕ್ಕೂ ಹೆಚ್ಚು ಸೈನಿಕರನ್ನು...

ಮುಂಬೈನಲ್ಲಿ ವಿತರಣಾ ಟೆಂಪೋದಿಂದ 27 ಎಲ್‌ಪಿಜಿ ಸಿಲಿಂಡರ್‌ಗಳು ಕಳವು; ತನಿಖೆ 

ಮುಂಬೈನಲ್ಲಿ ವಿತರಣಾ ವಾಹನದಿಂದ ಐದು ತುಂಬಿದ ಎಲ್‌ಪಿಜಿ ಸಿಲಿಂಡರ್‌ಗಳು ಸೇರಿದಂತೆ ಇಪ್ಪತ್ತೇಳು ಎಲ್‌ಪಿಜಿ ಸಿಲಿಂಡರ್‌ಗಳು ಕಳವಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಅನಿಲ ಪೂರೈಕೆಯ...

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...