Homeಕರೋನಾ ತಲ್ಲಣಕೊರೊನಾ ಮೊದಲ ಅಲೆಯಿಂದ ಉತ್ತರ ಪ್ರದೇಶ ಪಾಠ ಕಲಿಯಲಿಲ್ಲ: ಆಡಳಿತ ಪಕ್ಷದ ನಾಯಕರಿಂದ ಟೀಕೆ

ಕೊರೊನಾ ಮೊದಲ ಅಲೆಯಿಂದ ಉತ್ತರ ಪ್ರದೇಶ ಪಾಠ ಕಲಿಯಲಿಲ್ಲ: ಆಡಳಿತ ಪಕ್ಷದ ನಾಯಕರಿಂದ ಟೀಕೆ

- Advertisement -
- Advertisement -

ಉತ್ತರಪ್ರದೇಶದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆಯನ್ನು ಆಡಳಿತರೂಢ ಬಿಜೆಪಿಯ ನಾಯಕರೆ ಖಂಡಿಸುತ್ತಿದ್ದಾರೆ. ಕೊರೊನಾ ಮೊದಲ ಅಲೆಯಿಂದ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ ಎಂದು ಬಿಜೆಪಿಯ ಕಾರ್ಯಕಾರಿ ಸಮಿತಿಯ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ಟೀಕಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯಲ್ಲಿ ಪ್ರತಿ ಹಳ್ಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎಂದು ರಾಮ್ ಇಕ್ಬಾಲ್ ಸಿಂಗ್ ಹೇಳಿದ್ದಾರೆ. ಕೊರೊನಾ ವೈರಸ್‌ ಬಿಕ್ಕಟ್ಟನ್ನು ಎದುರಿಸುವಲ್ಲಿ ರಾಜ್ಯ ಸರ್ಕಾರದ ನಿರ್ವಹಣೆಯನ್ನು ಪ್ರಶ್ನೆ ಮಾಡಿದ್ದಾರೆ.

ಬಲಿಯಾ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ರಾಮ್ ಇಕ್ಬಾಲ್ ಸಿಂಗ್, ’ ಕೊವೀಡ್ ಮೊದಲ ಅಲೆಯಿಂದ ಆರೋಗ್ಯ ಇಲಾಖೆಯು ಯಾವುದೇ ಪಾಠಗಳನ್ನು ಕಲಿಯಲಿಲ್ಲ, ಇದು ಎರಡನೇ ಅಲೆಯಲ್ಲಿ ಸೋಂಕಿನಿಂದಾ ರಾಜ್ಯದಲ್ಲಿ ಹೆಚ್ಚಿನ ಸಾವು ಸಂಭವಿಸಲು ಕಾರಣವಾಯಿತು’ ಎಂದಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

“ಕೊವೀಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ರಾಜ್ಯದ ಪ್ರತಿ ಹಳ್ಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ” ಎಂದು ರಾಮ್ ಇಕ್ಬಾಲ್ ಸಿಂಗ್ ಆರೋಪಿಸಿದರು. ಜೊತೆಗೆ ಸೋಂಕಿಗೆ ಬಲಿಯಾದವರ ರಕ್ತಸಂಬಂಧಿಗಳಿಗೆ ಕನಿಷ್ಠ 10 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರದ ವಿರುದ್ಧ ಕಿಡಿಕಾರಿರುವ ರಾಮ್ ಇಕ್ಬಾಲ್ ಸಿಂಗ್, 75 ವರ್ಷಗಳ ಸ್ವಾತಂತ್ರ್ಯದ ನಂತರವೂ, 34 ಲಕ್ಷ ಜನಸಂಖ್ಯೆ ಹೊಂದಿರುವ ಈ ಜಿಲ್ಲೆಯಲ್ಲಿ ವೈದ್ಯರು ಅಥವಾ ಔಷಧಿಗಳಿಲ್ಲ ಎಂದು ವಿಷಾದಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಲಿಯಾ ಜಿಲ್ಲೆಯ ಭೇಟಿ ಸಮಯದಲ್ಲಿ ಆರೋಗ್ಯ ಇಲಾಖೆ ಮಾಡಿದ ವ್ಯವಸ್ಥೆಗಳ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ ಎಂಬ ಹೇಳಿಕೆಗೆ, ’ಅಧಿಕಾರಿಗಳು ಮುಖ್ಯಮಂತ್ರಿಯನ್ನು ದಾರಿ ತಪ್ಪಿಸಿದ್ದಾರೆ. ಜೊತೆಗೆ ಜಿಲ್ಲೆಯ ಸತ್ಯ ಸತ್ಯತೆಯನ್ನು ತೋರಿಸಿಲ್ಲ’ ಎಂದು ರಾಮ್ ಇಕ್ಬಾಲ್ ಸಿಂಗ್ ಆರೋಪಿಸಿದ್ದಾರೆ.

ಉತ್ತರನ ಪ್ರದೇಶದಲ್ಲಿ ಕೊರೊನಾ ಉತ್ತಮವಾಗಿ ನಿರ್ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದರು. ಆದರೆ, ರಾಜ್ಯದ ವಾಸ್ತವ ಬೇರೆಯದೇ ಇದೆ. ಗಂಗೆಯಲ್ಲಿ ಶವಗಳು ತೇಲಿದ ಪ್ರಕರಣ, ಆಕ್ಸಿಜನ್ ಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳಿದವರ ವಿರುದ್ಧ ಪ್ರಕರಣಗಳು, ಬೆದರಿಕೆಗಳಿಂದ ರಾಜ್ಯವು ಭಾರಿ ಸುದ್ದಿಯಲ್ಲಿದೆ.


ಇದನ್ನೂ  ಓದಿ: ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

0
ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು 'ಇಂಡಿಯಾ...