Homeಕರ್ನಾಟಕಮಸೀದಿಯಿಂದ ಬಲವಂತವಾಗಿ ಧ್ವನಿವರ್ಧಕ ತೆಗೆಯುವುದಿಲ್ಲ: ಸಿಎಂ ಬೊಮ್ಮಾಯಿ

ಮಸೀದಿಯಿಂದ ಬಲವಂತವಾಗಿ ಧ್ವನಿವರ್ಧಕ ತೆಗೆಯುವುದಿಲ್ಲ: ಸಿಎಂ ಬೊಮ್ಮಾಯಿ

- Advertisement -
- Advertisement -

ಸರ್ಕಾರವು ಮಸೀದಿಯಲ್ಲಿನ ಧ್ವನಿವರ್ಧಕಗಳನ್ನು ಬಲವಂತವಾಗಿ ತೆಗೆದುಹಾಕುವುದಿಲ್ಲ ಮತ್ತು ಯಾವುದೇ ವ್ಯಕ್ತಿ ಅಥವಾ ಸಂಘಟನೆಗಳಿಗೆ ಕಾನೂನನ್ನು ಕೈಗೆ ತೆಗೆದುಕೊಳ್ಳಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ಧ್ವನಿವರ್ಧಕಗಳ ಮೂಲಕ ಅಜಾನ್ ಅನ್ನು ನಿಷೇಧಿಸುವ ಬಿಜೆಪಿ ಬೆಂಬಲಿತ ಬಲಪಂಥೀಯ ಗುಂಪಿನ ಹೊಸ ವಿವಾದಕ್ಕೆ ಅವರು ಪ್ರತಿಕ್ರಿಯಿಸುತ್ತಾ, “ಕೇವಲ ಹೇಳಿಕೆ ನೀಡುವ ಮೂಲಕ ಬಿಕ್ಕಟ್ಟು ಬಗೆಹರಿಸಲು ಸಾಧ್ಯವಿಲ್ಲ. ಈ ಬೆಳವಣಿಗೆಗಳ ಹಿಂದೆ ಹಲವು ಅಂಶಗಳಿವೆ. 2001, 2002ರಲ್ಲಿ ಆದೇಶ ಹೊರಡಿಸಲಾಗಿದೆ. ಆಡಳಿತಾರೂಢ ಬಿಜೆಪಿ ಯಾವುದೇ ಆದೇಶವನ್ನು ಹೊರಡಿಸಿಲ್ಲ. ನಾವು ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಜಾನ್‌ಗೆ ಧ್ವನಿವರ್ಧಕಗಳನ್ನು ಬಳಸುತ್ತಿರುವ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ, “ಈ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್‌ನಿಂದ ಆದೇಶವಿದೆ. ಆದೇಶಗಳನ್ನು ಏಕೆ ಜಾರಿಗೊಳಿಸುತ್ತಿಲ್ಲ ಎಂದು ಪ್ರಶ್ನಿಸುವ ಇನ್ನೊಂದು ಆದೇಶವೂ ಇದೆ. ಡೆಸಿಬಲ್ ಮಿತಿಯನ್ನು ನಿಗದಿಪಡಿಸಲಾಗಿದೆ ಮತ್ತು ಡೆಸಿಬಲ್ ಮೀಟರ್ ಖರೀದಿಸಲು ಆದೇಶವಿದೆ” ಎಂದು ಹೇಳಿದ್ದಾರೆ.

“ಇದು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಾಡಬೇಕಾದ ಕೆಲಸ. ಬಲವಂತವಾಗಿ ಮಾಡುವುದು ಸಾಧ್ಯವಿಲ್ಲ. ತಳಮಟ್ಟದಲ್ಲಿ ಪೊಲೀಸರು ಸಮುದಾಯದ ಮುಖಂಡರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ ಕುರಿತು ಚರ್ಚೆ ಸಾಧ್ಯತೆ: ಬೊಮ್ಮಾಯಿ

ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದಾಗ ಈ ವಿಷಯ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಚ್ಚಿದ ಕೋಮು ಉದ್ವಿಗ್ನತೆ ಹಿನ್ನಲೆ: ಕಂಪೆನಿಗಳನ್ನು ಕರ್ನಾಟಕದಿಂದ ತಮಿಳುನಾಡಿಗೆ ಸೆಳೆಯಲು ಪ್ರಯತ್ನಿಸುತ್ತಿರುವ ಡಿಎಂಕೆ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಂತೂ ನಮ್ಮ‌ ಮನೆ ಇಲಿ ತನ್ನ ವಾಸ್ತವತೆಯನ್ನ ತೋರಿಸಿದಂಗಾಯ್ತು….

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...