Homeಮುಖಪುಟರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ರೈತ ಹೋರಾಟದಲ್ಲಿ ಮಾವೋವಾದಿಗಳಿಲ್ಲ ಎಂದ ಗೃಹ ಸಚಿವಾಲಯ: ಬಿಜೆಪಿ ನಾಯಕನಿಗೆ ಮುಖಭಂಗ

ಡಿಸೆಂಬರ್‌ ನಲ್ಲಿ ಪಿಯೂಶ್‌ ಗೋಯಲ್‌, ಸಿಂಘು ಬಾರ್ಡರ್‌ ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಮಾವೋವಾದಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಕುರಿತಾದಂತೆ ʼರೈತರ ಪ್ರತಿಭಟನೆಯಲ್ಲಿ ಮಾವೋವಾದಿಗಳ ಪಾತ್ರವಿದೆಯೇ ಎಂಬ ಪ್ರಶ್ನೆಯೊಂದಿಗೆ ನಾನು ಆರ್‌ಟಿಐನಲ್ಲಿ ಅರ್ಜಿ ಸಲ್ಲಿಸಿದ್ದೆ- ಸಾಕೇತ್ ಗೋಖಲೆ

- Advertisement -
- Advertisement -

ಕೇಂದ್ರ ಸರಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಕುರಿತು ಪ್ರತಿಕ್ರಿಯಿಸಿದ್ದ ಕೇಂದ್ರ ಸಚಿವ ಪಿಯೂಷ್‌ ಗೋಯಲ್,‌ “ಪ್ರತಿಭಟನೆಯಲ್ಲಿ ಮಾವೋವಾದಿಗಳ ಕೈವಾಡವಿದೆ” ಎಂದು ಹೇಳಿದ್ದರು. ಇದನ್ನು ಪರಿಶೀಲಿಸಲು ಆರ್‌ಟಿಐ ಕಾರ್ಯಕರ್ತ ಸಾಕೇತ್‌ ಗೋಖಲೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿದ ಗೃಹ ಸಚಿವಾಲಯ, “ಇದಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ. ಹಾಗಾಗಿ ಬಿಜೆಪಿ ನಾಯಕನಿಗೆ ಮುಖಭಂಗವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಾಕೇತ್ ಗೋಖಲೆ, “ಡಿಸೆಂಬರ್‌ ನಲ್ಲಿ ಪಿಯೂಶ್‌ ಗೋಯಲ್‌, ಸಿಂಘು ಬಾರ್ಡರ್‌ ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯನ್ನು ಮಾವೋವಾದಿಗಳು ನಿಯಂತ್ರಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಕುರಿತಾದಂತೆ ರೈತರ ಪ್ರತಿಭಟನೆಯಲ್ಲಿ ಮಾವೋವಾದಿಗಳ ಪಾತ್ರವಿದೆಯೇ ಎಂಬ ಪ್ರಶ್ನೆಯೊಂದಿಗೆ ನಾನು ಆರ್‌ಟಿಐನಲ್ಲಿ ಅರ್ಜಿ ಸಲ್ಲಿಸಿದ್ದೆ. ಈ ಪ್ರಶ್ನೆಗೆ ಉತ್ತರವಾಗಿ, ‘ಯಾವುದೇ ದಾಖಲೆಗಳಿಲ್ಲ’ ಎಂದು ಗೃಹ ಸಚಿವಾಲಯವು ಸ್ಪಷ್ಟಪಡಿಸಿದೆ. ಸಾರ್ವಜನಿಕವಾಗಿ ಸುಳ್ಳು ಹೇಳಲು ಡಿಟೆಕ್ಟಿವ್‌ ಗೋಯಲ್‌ಗೆ ನಾಚಿಕೆಯಾಗುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಇದನ್ನೂ ಓದಿ: ರೈತರ ವಿರುದ್ಧವೂ ಝಳಪಿಸಿದ ಹತಾರ: ’ದೇಶದ್ರೋಹ’ವೆಂಬ ಹಳೆಯ ಹುನ್ನಾರ

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಲಕ್ಷಾಂತರ ರೈತರು ಸುಮಾರು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿಯ ನಾಯಕರು ಮತ್ತು ಐಟಿ ಸೆಲ್‌ನವರು, ರೈತರನ್ನು ಖಾಲಿಸ್ತಾನಿಗಳು, ಭಯೋತ್ಪಾದಕರು, ಮಾವೋವಾದಿಗಳು, ನಕ್ಸಲರು ಎಂದೆಲ್ಲಾ ಬಿಂಬಿಸುತ್ತಿದ್ದರು.

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.


ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿ 25,000 ಸೇನಾ ಪದಕಗಳನ್ನು ಹಿಂದಿರುಗಿಸಲು ಮುಂದಾದ ಮಾಜಿ ಸೈನಿಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...