Homeಮುಖಪುಟಭ್ರಷ್ಟರು ಎಷ್ಟೇ ಪ್ರಭಾವಿಗಳಾದರೂ ಸಿಬಿಐ ಕ್ರಮ ಜರುಗಿಸಬೇಕು: ಮೋದಿ

ಭ್ರಷ್ಟರು ಎಷ್ಟೇ ಪ್ರಭಾವಿಗಳಾದರೂ ಸಿಬಿಐ ಕ್ರಮ ಜರುಗಿಸಬೇಕು: ಮೋದಿ

- Advertisement -
- Advertisement -

ಎಷ್ಟೇ ಪ್ರಭಾವಿಗಳಾದರೂ ಭ್ರಷ್ಟರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.

ಕೇಂದ್ರೀಯ ತನಿಖಾ ದಳದ ವಜ್ರಮಹೋತ್ಸವ ಸಮಾರಂಭದಲ್ಲಿ ಮಾತನಾಡಿರುವ ಅವರು, “ಪ್ರಜಾಪ್ರಭುತ್ವ ಮತ್ತು ನ್ಯಾಯ ವ್ಯವಸ್ಥೆಗೆ ಭ್ರಷ್ಟಚಾರದಿಮದ ದೊಡ್ಡ ಅಡ್ಡಿಯಾಗಿದೆ” ಎಂದು ತಿಳಿಸಿದ್ದಾರೆ.

ಭಾರತವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವುದು ಕೇಂದ್ರೀಯ ತನಿಖಾ ದಳದ ಮುಖ್ಯ ಕಾರ್ಯವಾಗಿದೆ ಎಂದಿದ್ದಾರೆ.

“ಯಾವುದೇ ಭ್ರಷ್ಟರನ್ನು ಬಿಡಬಾರದು” ಎಂದು ಒತ್ತಿ ಹೇಳಿರುವ ಮೋದಿ, “ನಮ್ಮ ಪ್ರಯತ್ನಗಳಲ್ಲಿ ಯಾವುದೇ ಸಡಿಲಿಕೆ ಇರಬಾರದು. ಇದು ದೇಶದ ಜನತೆಯ ಆಶಯ. ದೇಶ, ಕಾನೂನು ಮತ್ತು ಸಂವಿಧಾನ ನಿಮ್ಮೊಂದಿಗಿದೆ. ಇಂದು ದೇಶದಲ್ಲಿ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ರಾಜಕೀಯ ಇಚ್ಛಾಶಕ್ತಿಯ ಕೊರತೆ ಇಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕೇಂದ್ರೀಯ ಸಂಸ್ಥೆ ನ್ಯಾಯದ ಬ್ರಾಂಡ್ ಅಂಬಾಸಿಡರ್ ಆಗಿದೆ. ಇಂದಿಗೂ ಪ್ರಕರಣ ಇತ್ಯರ್ಥವಾಗದೆ ಇದ್ದ ಸಂದರ್ಭದಲ್ಲಿ, ಅದನ್ನು ಸಿಬಿಐಗೆ ಹಸ್ತಾಂತರಿಸಬೇಕೆಂಬ ಬೇಡಿಕೆಗಳಿವೆ. ಎಲ್ಲರ ಬಾಯಲ್ಲೂ ಸಿಬಿಐ ಹೆಸರು ಇದೆ. ಯಾವುದೇ ಮಹತ್ವದ ಅಪರಾಧ ನಡೆದರೆ ಅದನ್ನು ಸಿಬಿಐಗೆ ಒಪ್ಪಿಸಬೇಕೆಂದುಪಂಚಾಯತಿ ಮಟ್ಟದಲ್ಲಿಯೂ ಜನರು ಬಯಸುತ್ತಾರೆ” ಎಂದಿದ್ದಾರೆ.

“ದಶಕಗಳ ಕಾಲ ಭ್ರಷ್ಟಾಚಾರದಿಂದ ಲಾಭ ಪಡೆದವರು ಕೇಂದ್ರ ತನಿಖಾ ಸಂಸ್ಥೆಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಮೋದಿ ಆರೋಪಿಸಿದ್ದಾರೆ.

“ನೀವು ಯಾರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೀರೋ ಅವರು ತುಂಬಾ ಪ್ರಭಾವಿಗಳು ಎಂದು ನನಗೆ ತಿಳಿದಿದೆ, ಅವರು ಹಲವು ವರ್ಷಗಳಿಂದ ಸರ್ಕಾರ ಮತ್ತು ವ್ಯವಸ್ಥೆಯ ಭಾಗವಾಗಿದ್ದಾರೆ. ಆದರೆ ಭ್ರಷ್ಟರ ಪ್ರಭಾವ ನೋಡಿ ಏಜೆನ್ಸಿಗಳು ಹಿಂಜರಿಯಬಾರದು” ಎಂದು ಸಲಹೆ ನೀಡಿದ್ದಾರೆ.

ಸಿಬಿಐ ದುರ್ಬಳಕೆ; ಪ್ರತಿಪಕ್ಷಗಳ ಆರೋಪ

ಕೇಂದ್ರೀಯ ತನಿಖಾ ದಳವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

ಮಾರ್ಚ್ 5ರಂದು ಎಂಟು ವಿರೋಧ ಪಕ್ಷಗಳ ನಾಯಕರು ಮೋದಿಯವರಿಗೆ ಪತ್ರ ಬರೆದು, “ತನಿಖಾ ಸಂಸ್ಥೆಗಳ ದುರುಪಯೋಗವು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಾಧಿಕಾರಕ್ಕೆ ಹೋಗುತ್ತಿದ್ದೇವೆ ಎಂದು ಸೂಚಿಸುತ್ತದೆ” ಎಂದಿದ್ದವು.

ದೆಹಲಿಯಲ್ಲಿ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಬಂಧಿಸಿದ ನಂತರ ಪ್ರತಿಪಕ್ಷಗಳು ಟೀಕಿಸಿದ್ದವು.

ಇದನ್ನೂ ಓದಿರಿ: ಮೋದಿ ಪದವಿ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ: ಕೇಜ್ರಿವಾಲ್‌ಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

‘ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಸೇಡಿನ ರಾಜಕೀಯ ವಿರುದ್ಧ ವಿರೋಧ ಪಕ್ಷಗಳು ಒಟ್ಟಾಗಿ ರ್‍ಯಾಲಿ ನಡೆಸಿವೆ.

ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿಗಳು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹರಾಗುತ್ತಾರೆ ಎಂದು ಪ್ರಜಾಪ್ರತಿನಿಧಿ ಕಾಯಿದೆ, 1951 ಹೇಳುತ್ತದೆ.

ಪ್ರತಿಪಕ್ಷಗಳ ಒಗ್ಗಟ್ಟಿನ ನಿಟ್ಟಿನಲ್ಲಿ, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ, ಭಾರತ್ ರಾಷ್ಟ್ರ ಸಮಿತಿ ಮತ್ತು ಆಮ್ ಆದ್ಮಿಯಂತಹ ಪಕ್ಷಗಳ ನಾಯಕರು ರಾಹುಲ್ ಗಾಂಧಿಯವರ ಅನರ್ಹತೆಯ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸೋಮವಾರ ಪಾಲ್ಗೊಂಡಿದ್ದರು. ಬಿಜೆಪಿಯ ಪ್ರಬಲ ವಿರೋಧಿ ಪಕ್ಷವೆಂದರೆ ಕಾಂಗ್ರೆಸ್ ಎಂಬ ವಾದವನ್ನು ಇಲ್ಲಿನ ಕೆಲವು ಪ್ರತಿಪಕ್ಷಗಳು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂಬುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...