Homeಮುಖಪುಟ12 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಇಲ್ಲ ಪ್ರಾತಿನಿಧ್ಯ: ಹಲವೆಡೆ ಬಂಡಾಯ ಆರಂಭ

12 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಇಲ್ಲ ಪ್ರಾತಿನಿಧ್ಯ: ಹಲವೆಡೆ ಬಂಡಾಯ ಆರಂಭ

- Advertisement -
- Advertisement -

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊನೆಗೂ ಸಚಿವ ಸಂಪುಟವನ್ನು ಅಂತಿಮಗೊಳಿಸಿದ್ದಾರೆ. ಒಟ್ಟು 29 ಶಾಸಕರಿಗೆ ಕರೆ ಮಾಡಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ನಡುವೆ ಪಟ್ಟಿಯಲ್ಲಿ ಹೆಸರಿಲ್ಲದ ಕೆಲ ಶಾಸಕರು ಬಂಡಾಯವೆದ್ದಿದ್ದಾರೆ. ಹಾವೇರಿಯಲ್ಲಿ ಶಾಸಕ ನೆಹರು ಓಲೇಕಾರ್ ಬೆಂಬಲಿಗರು ಪ್ರತಿಭಟನೆ ನಡೆಸಿದರೆ, ಯಡಿಯೂರಪ್ಪ ಆಪ್ತ ರೇಣುಕಾಚಾರ್ಯ ಕಣ್ಣೀರು ಹರಿಸಿದ್ದಾರೆ.

ಮೈಸೂರು, ಕಲಬುರಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ
ದಾವಣಗೆರೆ, ಕೋಲಾರ, ಯಾದಗಿರಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಆದರೆ ಆರು ಜಿಲ್ಲೆಗಳಿಂದ ತಲಾ ಇಬ್ಬರು ಮಂತ್ರಿಗಳ ಇದ್ದಾರೆ.

ಮಂತ್ರಿಗಿರಿ ಕೈತಪ್ಪಿದ್ದಕ್ಕೆ ಹಾವೇರಿಯಲ್ಲಿ ಶಾಸಕ ನೆಹರು ಓಲೇಕಾರ್ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಓಲೇಕಾರ್ ಬೆಂಬಲಿಗರು ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ನಮ್ಮ ಕ್ಷೇತ್ರದವರು ಎಂಬ ಕಾರಣಕ್ಕೆ ತನಗೆ ಸಚಿವ ಸ್ಥಾನ ನಿರಾಕರಿಸಿರುವುದು ಸರಿಯಲ್ಲ ಎಂದು ನೆಹರು ಓಲೇಕಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಬಿ.ಎಸ್ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಮತ್ತು ಆಪ್ತನಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯರವರಿಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಬೇಸರಗೊಂಡಿದ್ದಾರೆ. ದುಃಖ ತಡೆಯಲಾಗದೇ ಬಿಕ್ಕಿ ಬಿಕ್ಕಿ ಅತ್ತರು ಎಂದು ವರದಿಯಾಗಿದೆ.

ಸಚಿವ ಸ್ಥಾನ ಸಿಗದಿದ್ದರೆ ವಿಧಾನಸಭೆ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸವದತ್ತಿ ಎಲ್ಲಮ್ಮ ಕ್ಷೇತ್ರದ ಶಾಸಕ ಆನಂದ ಮಾಮನಿ ಎಚ್ಚರಿಕೆ ನೀಡಿದ್ದರು. ಅವರು ಹೆಸರು ಸಹ ಪಟ್ಟಿಯಲ್ಲಿಲ್ಲ. ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾದು ನೋಡಬೇಕಿದೆ.

ಮಾಜಿ ಸಿಎಂ ಬಿಎಸ್‌ವೈರವರ ಪುತ್ರ ಬಿ.ವೈ ವಿಜಯೇಂದ್ರರವರಿಗೆ ಸಚಿವ ಸ್ಥಾನ ನೀರಿಕ್ಷಿಸಲಾಗಿತ್ತು. ಆದರೆ ಅವರ ಹೆಸರು ಪಟ್ಟಿಯಲ್ಲಿಲ್ಲ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪನವರೊಂದಿಗೆ ಮಾತನಾಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಸಮಜಾಯಿಸಿ ನೀಡಿದ್ದಾರೆ. ಇದಕ್ಕೆ ಯಡಿಯೂರಪ್ಪ ಬೇಸರಗೊಂಡಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಬಿಎಸ್‌ವೈ ಸಂಪುಟದಲ್ಲಿದ್ದ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ತಪ್ಪಿದ್ದವರು ಯಾರು ಯಾರು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...