Homeಕರ್ನಾಟಕರಾಜ್ಯದ ಬೇಡಿಕೆಗಳಿಗೆ ಪ್ರಧಾನಿಗಳು ಸ್ಪಂದಿಸಿದ್ದಾರೆ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

ರಾಜ್ಯದ ಬೇಡಿಕೆಗಳಿಗೆ ಪ್ರಧಾನಿಗಳು ಸ್ಪಂದಿಸಿದ್ದಾರೆ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

- Advertisement -
- Advertisement -

ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಿಗೆ ಸತ್ಯಕ್ಕೆ ದೂರವಾಗಿವೆ ಎಂದಿರುವ ಅವರು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

“ಹೊಸವರ್ಷದ ಪ್ರಾರಂಭದಲ್ಲಿಯೇ ರಾಜ್ಯದ ಪ್ರಸಿದ್ದ ಕ್ಷೇತ್ರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಘನ ಉಪಸ್ಥಿತಿಯಲ್ಲಿ ನಡೆದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ನಮ್ಮ ಅಹವಾಲನ್ನು ದೇಶದ ಪ್ರಧಾನಮಂತ್ರಿಗಳಲ್ಲಿ ಪ್ರಾಮಾಣಿಕವಾಗಿ ಸಲ್ಲಿಸಿದ್ದೇನೆ. ಇದು ನಮ್ಮ ಪ್ರಜಾಪ್ರಭುತ್ವದಲ್ಲಿ ಸಹಜವಾಗಿ ನಡೆಯುವಂತಹ ವಿದ್ಯಮಾನವಾಗಿದೆ. ಆದರೆ ಕೆಲವು ಮಾಧ್ಯಮಗಳಲ್ಲಿ ವಿಷಯವನ್ನು ತಿರುಚಿ ಸನ್ಮಾನ್ಯ ಪ್ರಧಾನಮಂತ್ರಿಗಳು ನಮ್ಮ ಬೇಡಿಕೆಗೆ ಮೌನ ವಹಿಸಿದ್ದರು, ಅವರು ಮುನಿಸಿಕೊಂಡಿದ್ದಾರೆ, ಅವರಿಗೆ ಅಸಮಾಧಾನವಾಗಿದೆ ಎಂದು ವಾಸ್ತವ ಸಂಗತಿಗಳನ್ನು ತಿಳಿಯುವ ಗೋಜಿಗೂ ಹೋಗದೆ, ತಮ್ಮ ಕಪೋಲಕಲ್ಪಿತ ವ್ಯಾಖ್ಯಾನಗಳನ್ನು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಸತ್ಯಕ್ಕೆ ದೂರವಾದವುಗಳು ಎನ್ನುವುದನ್ನು ನಾನು ಅತ್ಯಂತ ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳು ನಮ್ಮ ರಾಜ್ಯದ ಬೇಡಿಕೆಗಳನ್ನು ಸ್ವೀಕರಿಸಿದ್ದಾರೆ. ನಮ್ಮ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು, ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ನೆರವು – ಇವೆಲ್ಲವುಗಳಿಗೆ 50 ಸಾವಿರ ಕೋಟಿ ವಿಶೇಷ ಅನುದಾನ ನೀಡಬೇಕು ಎಂದು ಮಾನ್ಯ ಪ್ರಧಾನಮಂತ್ರಿಗಳಲ್ಲಿ ನಮ್ಮ ಮನವಿಯನ್ನು ರೈತ ಸಮಾವೇಶದ ವೇದಿಕೆಯಿಂದ ಮತ್ತೊಮ್ಮೆ ಅರಿಕೆ ಮಾಡಿಕೊಳ್ಳುವುದು ಸಮಂಜಸ ಎನ್ನುವ ಕಾರಣಕ್ಕೆ ಅಲ್ಲಿ ಅದನ್ನು ಉಲ್ಲೇಖಿಸಿದ್ದೇನೆ ಎಂದಿದ್ದಾರೆ.

ಪ್ರಧಾನಮಂತ್ರಿಗಳ ದಕ್ಷ, ಪಾರದರ್ಶಕ, ಪ್ರಾಮಾಣಿಕ ಆಡಳಿತ ವೈಖರಿ ಇಡೀ ಜಗತ್ತಿಗೆ ಗೊತ್ತಿದೆ. ಇಡೀ ದೇಶಕ್ಕೆ ತಿಳಿದಿರುವಂತೆ, ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಸರ್ಕಾರ ರೈತರಿಗೆ ಅಭೂತಪೂರ್ವ ನೆರವು ನೀಡಿದೆ, ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿ ಹೆಜ್ಜೆಗಳನ್ನು ಇಡುತ್ತಿದೆ. ನಮ್ಮ ರಾಜ್ಯದ ಕೃಷಿಕರ, ನೀರಾವರಿ ಯೋಜನೆಗಳ ವಾಸ್ತವತೆಗಳೂ ಪ್ರಧಾನಿಗಳಿಗೆ ತಿಳಿದಿದೆ. ಅವರು ನಮ್ಮ ಅತ್ಯುನ್ನತ ನಾಯಕರು. ಕರ್ನಾಟಕಕ್ಕೆ ಅತಿ ಹೆಚ್ಚಿನ ನೆರವು, ಅನುದಾನ ನೀಡಿರುವುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಎನ್ನುವುದೂ ಕೂಡ ಎಲ್ಲರಿಗೂ ತಿಳಿದಿದೆ ಎಂದಿದ್ದಾರೆ.

ನಮ್ಮ ಎಲ್ಲ ಮನವಿಗೆ ಸನ್ಮಾನ್ಯ ಪ್ರಧಾನಮಂತ್ರಿಗಳು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಈ ಬಗ್ಗೆ ದೆಹಲಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲು ಮತ್ತು ಇಲಾಖಾವಾರು ಕೇಂದ್ರ ಸಚಿವರುಗಳಿಗೆ ಪ್ರಸ್ತಾವನೆ ಸಲ್ಲಿಸಲು ಮಾನ್ಯ ಪ್ರಧಾನಮಂತ್ರಿಗಳು ಸೂಚಿಸಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿಗಳು ಈ ವಿಷಯದ ಬಗ್ಗೆ ಖುದ್ದಾಗಿ ನನ್ನೊಂದಿಗೆ ಮಾತನಾಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

ವಾಸ್ತವ ಸಂಗತಿಗಳನ್ನು ಮರೆಮಾಚಿ, ಜನರಿಗೆ ತಪ್ಪು ಸಂದೇಶ ನೀಡುವ ಕೆಲವು ಮಾಧ್ಯಮಗಳ ಧೋರಣೆ ಸರಿಯಲ್ಲ ಎನ್ನುವುದನ್ನು ಮತ್ತೊಮ್ಮೆ ಇಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ. ರಾಜ್ಯದ ಹಿತದೃಷ್ಟಿಯಿಂದ ನಮ್ಮ ಪ್ರಯತ್ನಗಳನ್ನು ಬೆಂಬಲಿಸಿ ಮತ್ತು ವಿಷಯಗಳಿಗೆ ತಪ್ಪು ವಾಖ್ಯಾನ ಮಾಡದಿರಿ ಎಂದು ಎಲ್ಲ ವಿದ್ಯುನ್ಮಾನ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾನು ಕೋರಿಕೊಳ್ಳುತ್ತಿದ್ದೇನೆ” ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...