Homeಚಳವಳಿಆರೇ ಮರಗಳನ್ನು ಸದ್ಯ ಕಡಿಯುವಂತಿಲ್ಲ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು..

ಆರೇ ಮರಗಳನ್ನು ಸದ್ಯ ಕಡಿಯುವಂತಿಲ್ಲ: ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು..

- Advertisement -
- Advertisement -

ಅಕ್ಟೋಬರ್ 21 ರಂದು ಮುಂದಿನ ವಿಚಾರಣೆಯವರೆಗೆ ಮುಂಬೈನ ಆರೆಯಲ್ಲಿ ಮರಗಳನ್ನು ಕತ್ತರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ..

ನಾಲ್ಕು ದಿನಗಳ ಹಿಂದಷ್ಟೇ ಮುಂಬೈ ಹೈಕೋರ್ಟ್‌ ಪರಿಸರವಾದಿಗಳು ಹಾಕಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಮಾಡಿ ಮರಗಳನ್ನು ಕಡಿಯಲು ಅನುಮತಿ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್‌ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ವಿಚಾರಣೆ ಬಾಕಿ ಇತ್ತು.

ಕಾನೂನು ವಿದ್ಯಾರ್ಥಿಗಳ ಗುಂಪೊಂದು ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರಿಗೆ ಪತ್ರ ಬರೆದ ನಂತರ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಇಂದು ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌ ವಾದವನ್ನು ಆಲಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ ೨೧ಕ್ಕೆ ಮುಂದೂಡಿದೆ. ಅಲ್ಲಿಯವರೆಗೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬೇಕೆಂದು ಹೇಳಿದ್ದು ಮರಗಳ ಕಡಿಯುವಿಕೆಗೆ ತಡೆಯೊಡ್ಡಿದೆ.

ಮಹಾರಾಷ್ಟ್ರ ಸರ್ಕಾರವನ್ನು ಪ್ರತಿನಿಧಿಸಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕಾಮಗಾರಿಗೆ ಅಗತ್ಯವಿರುವಷ್ಟು ಮರಗಳನ್ನು ಈಗಾಗಲೇ ಕಡಿಯಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆನಂತರ ನ್ಯಾಯಾಲಯವು ಪ್ರಕರಣವನ್ನು ಹಸಿರು ಪೀಠಕ್ಕೆ ವರ್ಗಾಯಿಸಿದೆ.

ಇದು ಪರಿಸರ ಪ್ರೇಮಿನಗಳು ನಡೆಸಿದ ಹೋರಾಟಕ್ಕೆ ದೊಡ್ಡ ಜಯವಾಗಿದೆ. ಮೊನ್ನೆಯಷ್ಟೇ ಆರೇ ಮರಗಳನ್ನು ಕಡಿಯಬಾರದೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಹಲವರನ್ನು ಬಂಧಿಸಿ ನಿನ್ನೆ ಬಿಡುಗಡೆ ಮಾಡಲಾಗಿತ್ತು. ಇಂದಿನ ಸುಪ್ರೀಂ ಕೋರ್ಟ್‌ ತೀರ್ಪು ಪರಿಸರ ಪ್ರೇಮಿಗಳಲ್ಲಿ ನೆಮ್ಮದಿ ಮೂಡಿಸಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಾಂಡೆಲ್ ಬಂಧನ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಏಪ್ರಿಲ್ 13) ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿಯ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ...

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...