Homeಕರೋನಾ ತಲ್ಲಣತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ: ಆರೋಗ್ಯ ಸಚಿವ ಮಾ ಸುಬ್ರಮಣಿಯನ್

- Advertisement -
- Advertisement -

ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಮಂಗಳವಾರ ಹೇಳಿದ್ದಾರೆ. ದೇಶದ ಇತರ ರಾಜ್ಯಗಳಂತೆ ತಮಿಳುನಾಡಿನಲ್ಲೂ ಕೊರೊನಾ ಪ್ರಕರಣವು ಹೆಚ್ಚುತ್ತಿದೆ. ಮಂಗಳವಾರದಂದು ದೆಹಲಿ ಮುಖ್ಯಮಂತ್ರಿ ಕೂಡಾ ದೆಹಲಿಯಲ್ಲಿ ಲಾಕ್‌ಡೌನ್‌ ಮಾಡುವುದಿಲ್ಲ ಎಂದು ಹೇಳಿದ್ದಾರೆ.

“ಸದ್ಯಕ್ಕೆ ಸಂಪೂರ್ಣ ಲಾಕ್‌ಡೌನ್ ಅಗತ್ಯವಿಲ್ಲ. ಆರ್ಥಿಕತೆಯ ಮೇಲೆ ಪರಿಣಾಮ ಬೀರಬಾರದು ಎಂದು ಸಿಎಂ ಪ್ರತಿಪಾದಿಸಿದ್ದಾರೆ” ಎಂದು ಸುಬ್ರಮಣಿಯನ್ ಚೆನ್ನೈನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಕಳೆದ 24 ಗಂಟೆಗಳಲ್ಲಿ 13,990 ಹೊಸ ಕೋವಿಡ್ ಪ್ರಕರಣಗಳು ಮತ್ತು 11 ಸಾವುಗಳು ವರದಿಯಾಗಿವೆ.

ಇದನ್ನೂ ಓದಿ:ಕೊರೊನಾ: ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 12 ಸಾವಿರ ಕೇಸ್, ಬೆಂಗಳೂರಿನಲ್ಲಿ 9 ಸಾವಿರ ಪ್ರಕರಣ

ರಾಜ್ಯ ಆರೋಗ್ಯ ಇಲಾಖೆಯ ಪ್ರಕಾರ, ತಮಿಳುನಾಡಿನಲ್ಲಿ ಪ್ರಸ್ತುತ 62,767 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 2,547 ರೋಗಿಗಳು ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.

ವೈರಸ್ ಹರಡುವುದನ್ನು ತಡೆಗಟ್ಟುವ ಸಲುವಾಗಿ ತಮಿಳುನಾಡು ಸರ್ಕಾರ ಸೋಮವಾರ ಕೋವಿಡ್ ನಿರ್ಬಂಧಗಳನ್ನು ಜನವರಿ 31 ರವರೆಗೆ ವಿಸ್ತರಿಸಿತ್ತು.

ರಾಜ್ಯ ಸರ್ಕಾರದ ಸುತ್ತೋಲೆ ಪ್ರಕಾರ, “ಜನವರಿ 14 ಮತ್ತು ಜನವರಿ 18 ರ ನಡುವೆ ಯಾವುದೇ ಪೂಜಾ ಸ್ಥಳಗಳಲ್ಲಿ ಭಕ್ತರಿಗೆ ಪ್ರವೇಶವಿಲ್ಲ. ಪೊಂಗಲ್‌ಗಾಗಿ ವಿಶೇಷ ಅಂತರ ಜಿಲ್ಲಾ ಬಸ್‌ಗಳು 75% ದಷ್ಟು ಸಾಮರ್ಥ್ಯದಲ್ಲಿ ಚಲಿಸುತ್ತವೆ”

ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಅನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದ್ದು, ಸೋಮವಾರದಿಂದ ಶನಿವಾರದವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜನವರಿ 16 (ಭಾನುವಾರ) ರಂದು ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ:ಕೊರೊನಾ ಉಲ್ಭಣ: ಗುರುವಾರ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿರುವ ಮೋದಿ?

ಕರ್ನಾಟಕದಲ್ಲೂ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು ಇಂದು ಒಂದೇ ದಿನ ಬರೋಬ್ಬರಿ 12,000 ಹೊಸ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 9,020 ಕೇಸ್‌ಗಳು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ವರದಿಯಾಗಿವೆ.

ಕೊರೊನಾ ಪಾಸಿಟಿವಿಟ್ ದರ 6.33% ರಷ್ಟಿದ್ದು, ಕೊರೊನಾ ಸಂಬಂಧಿತ ಸಮಸ್ಯೆಗಳಿಂದ ಇಂದು ನಾಲ್ವರು ಸಾವನ್ನಪ್ಪಿದ್ದಾರೆ. ಅದರಲ್ಲಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ನಿನ್ನೆ ವರದಿಯಾಗಿದ್ದ ಪ್ರಕರಣಗಳಿಗಿಂತ ಇಂದು 27%ದಷ್ಟು ಏರಿಕೆಯಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಒಟ್ಟು 49,602 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿಯೇ 40 ಸಾವಿರ ಸಕ್ರಿಯ ಪ್ರಕರಣಗಳಿವೆ. ಇಂದು 901 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 1,89,499 ಮಂದಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಈ ಕುರಿತು ಆರೋಗ್ಯ ಸಚಿವ ಕೆ.ಸುಧಾಕರ್‌ ಟ್ವೀಟ್ ಮಾಡಿದ್ದಾರೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಳೆದ ವಾರದಿಂದ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿದೆ. ಜೊತೆಗೆ ಈ ಹಿಂದೆ ಜಾರಿಯಲ್ಲಿರುವ ನೈಟ್‌ ಕರ್ಫ್ಯೂ‌ ಅನ್ನು ಜನವರಿ 19 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯಾದ್ಯಂತ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಪ್ರಕರಣ: ’ಸಂತ್ರಸ್ತೆಯಾಗಿ ಬದುಕುವುದು ಸುಲಭವಲ್ಲ’ 5 ವರ್ಷಗಳ ಪ್ರಯಾಣ ನೆನಪಿಸಿಕೊಂಡ ನಟಿ ಭಾವನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...