Homeಮುಖಪುಟಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

ಕಚ್ಚತೀವು ವಿವಾದ 50 ವರ್ಷಗಳ ಹಿಂದೆಯೇ ಪರಿಹರಿಸಲಾಗಿದೆ, ಈಗ ಚರ್ಚಿಸುವ ಅಗತ್ಯವಿಲ್ಲ: ಶ್ರೀಲಂಕಾ

- Advertisement -
- Advertisement -

ಕಚ್ಚತೀವು ದ್ವೀಪವನ್ನು ಬಿಟ್ಟುಕೊಟ್ಟಿದ್ದಕ್ಕಾಗಿ ಪ್ರತಿಪಕ್ಷಗಳ ವಿರುದ್ಧ ಭಾರತದ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿದ ಮೂರು ದಿನಗಳ ನಂತರ, ಶ್ರೀಲಂಕಾ ಏಪ್ರಿಲ್ 4ರಂದು ಈ ವಿಷಯದ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ಈ ವಿವಾದ 50 ವರ್ಷಗಳ ಹಿಂದೆ ಪರಿಹರಿಸಿರುವುದರಿಂದ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ಹೇಳಿದೆ.

ಮಾರ್ಚ್ 31ರಿಂದ ಮೋದಿ ಅವರು ದೇಶಾದ್ಯಂತ ವಿವಿಧ ಪ್ರಚಾರ ಕಾರ್ಯಕ್ರಮಗಳಲ್ಲಿ ಪದೇ ಪದೇ ಕಚ್ಚತೀವು ದ್ವೀಪದ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಕಚ್ಚತೀವು ಭಾರತದ ಭೂಪ್ರದೇಶವಾಗಿದ್ದು, 1974ರಲ್ಲಿ ಶ್ರೀಲಂಕಾದೊಂದಿಗೆ ಮಾಡಿಕೊಂಡಿದ್ದ ಕಡಲ ಗಡಿ ಒಪ್ಪಂದದ ವೇಳೆ ಇಂದಿರಾಗಾಂಧಿ ಅವರು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟಿದ್ದಾರೆ. ತಮಿಳುನಾಡಿನ ಡಿಎಂಕೆ ಇದಕ್ಕೆ ಸಮ್ಮತಿಸಿತ್ತು ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು. ತಮಿಳುನಾಡು ದಿವಂಗತ ಮುಖ್ಯಮಂತ್ರಿ ಕರುಣಾನಿಧಿ ಅವರ ಒಪ್ಪಿಗೆಯ ಮೇರೆಗೆ ಶ್ರೀಲಂಕಾಕ್ಕೆ ಕಚ್ಚತೀವು ನೀಡಲಾಗಿದೆ. ಈಗ ಬಿಜೆಪಿಯು ಕಚ್ಚತೀವು ವಾಪಸ್ ಪಡೆಯುವಂತೆ ಬಿಜೆಪಿ ವಿದೇಶಾಂಗ ಸಚಿವ ಜೈಶಂಕರ್‌ಗೆ ಪತ್ರ ನೀಡಿದೆ. ಅದನ್ನು ಭಾರತಕ್ಕೆ ವಾಪಸ್ ತರಬೇಕು, ಇದು ನಮ್ಮ ನಿಲುವು. ಕೇಂದ್ರ ಮೀನುಗಾರರ ರಕ್ಷಣೆಗಾಗಿ ಕಚ್ಚತೀವು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ನಾವು ಮಾಡುತ್ತಿದ್ದೇವೆ ಎಂದು ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದರು.

ಇದರ ಬೆನ್ನಲ್ಲಿ ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅಧಿಕೃತ ಹೇಳಿಕೆಯನ್ನು ಹೊರಡಿಸಿದ್ದು, ಇದು 50 ವರ್ಷಗಳ ಹಿಂದೆ ಪರಿಹರಿಸಲ್ಪಟ್ಟ ಸಮಸ್ಯೆಯಾಗಿರುವುದರಿಂದ ಈ ಬಗ್ಗೆ ಈಗ ಚರ್ಚಿಸುವ ಅಗತ್ಯವಿಲ್ಲ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ಅಂತಹ ಸಮಸ್ಯೆಗಳು ಮತ್ತೆ ಉದ್ಭವಿಸುತ್ತವೆ ಎಂದು ನಾನು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಇಫ್ತಾರ್ ಕಾರ್ಯಕ್ರಮವೊಂದರಲ್ಲಿ ಶ್ರೀಲಂಕಾದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದ್ವೀಪದ ಬಗ್ಗೆ ಯಾವುದೇ ವಿವಾದವಿಲ್ಲ. ಇದಕ್ಕೆ ಯಾರು ಹೊಣೆ ಎಂದು ಅವರು ಆಂತರಿಕ ರಾಜಕೀಯ ಚರ್ಚೆ ನಡೆಸುತ್ತಿದ್ದಾರೆ. ಅದನ್ನು ಬಿಟ್ಟರೆ ಕಚ್ಚತ್ತೀವು ವಾಪಸು ಪಡೆಯುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ.

ಕೊಲಂಬೊದ ಪ್ರತಿಕ್ರಿಯೆ ತುಲನಾತ್ಮಕವಾಗಿ ತಡವಾಗಿ ಬಂದಿದ್ದರೂ, ಶ್ರೀಲಂಕಾದ ಮಾಧ್ಯಮಗಳು ಕಚ್ಚತೀವು ಕುರಿತ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸಿದೆ. ಹಲವಾರು ಶ್ರೀಲಂಕಾದ ಪತ್ರಿಕೆಗಳು ಸಂಪಾದಕೀಯಗಳನ್ನು ಪ್ರಕಟಿಸಿದವು, ಇದು ಚುನಾವಣಾ ಲಾಭಕ್ಕಾಗಿ ವಿಷಯವನ್ನು ಎತ್ತಿ ಹಿಡಿದಿದ್ದಕ್ಕಾಗಿ ಭಾರತೀಯ ಪ್ರಧಾನ ಮಂತ್ರಿಯನ್ನು ಟೀಕಿಸಿದೆ ಮತ್ತು ಇದು ದ್ವೀಪ ರಾಷ್ಟ್ರ ಮತ್ತು ಭಾರತದ ನಡುವಿನ ಸೌಹಾರ್ದತೆಗೆ ಹಾನಿ ಮಾಡುತ್ತದೆ ಎಂದು ಎಚ್ಚರಿಸಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಮೀನುಗಾರರ ಸಮಸ್ಯೆಯನ್ನು ಮುಂದಿಟ್ಟು, ಬಿಜೆಪಿ ತಮಿಳುನಾಡಿನಲ್ಲಿ ರಾಜಕೀಯಕ್ಕೆ ಮುಂದಾಗಿದೆ. ಕಚ್ಚತೀವು ದ್ವೀಪದ ಕುರಿತ ಭಾರತದಲ್ಲಿ ಚರ್ಚೆ ಉದ್ಭವಿಸಿದಾಗ, ಶ್ರೀಲಂಕಾದ ಸಚಿವ ಜೀವನ್ ಥೋಂಡಮನ್ ಮಾತನಾಡಿ, ಕಚ್ಚತೀವು ಬಗ್ಗೆ ಭಾರತ ಅಧಿಕೃತ ಸಂವಹನ ನಡೆಸಿರುವ ಬಗ್ಗೆ ನಿರಾಕರಿಸಿದ್ದಾರೆ. ಕಚ್ಚತೀವು ದ್ವೀಪವು ಶ್ರೀಲಂಕಾದ ಭಾಗವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಶ್ರೀಲಂಕಾಕ್ಕೆ ಸಂಬಂಧಿಸಿದಂತೆ ಕಚ್ಚತೀವು ದ್ವೀಪವು ಶ್ರೀಲಂಕಾದ ನಿಯಂತ್ರಣ ರೇಖೆಯೊಳಗೆ ಬರುತ್ತದೆ. ಇಲ್ಲಿಯವರೆಗೆ ಕಚ್ಚತೀವು ದ್ವೀಪದ ಅಧಿಕಾರವನ್ನು ಹಿಂದಿರುಗಿಸಲು ಭಾರತದಿಂದ ಅಧಿಕೃತ ಸಂವಹನ ನಡೆದಿಲ್ಲ. ಅಂತಹ ಸಂವಹನವಿದ್ದರೆ, ವಿದೇಶಾಂಗ ಸಚಿವಾಲಯ ಅದಕ್ಕೆ ಉತ್ತರ ನೀಡಲಿದೆ ಎಂದು ಜೀವನ್ ಥೋಂಡಮಾನ್ ಹೇಳಿದ್ದರು.

ಇದನ್ನು ಓದಿ: ಸಂಘಪರಿವಾರ, ಬಿಜೆಪಿ ನಾಯಕರ ಅಂಗಸಂಸ್ಥೆಗಳಿಗೆ 62% ಸೈನಿಕ ಶಾಲೆಗಳನ್ನು ಹಸ್ತಾಂತರಿಸಿದ ಕೇಂದ್ರ ಸರಕಾರ: ವರದಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....