- Advertisement -
- Advertisement -
ಧರ್ಮದ ಆಧಾರದಲ್ಲಿ ಮೀಸಲಾತಿ ನೀಡಬೇಕೆಂದು ಸಂವಿಧಾನದಲ್ಲಿ ಹೇಳಿಲ್ಲ. ಅದರೆ ಮುಸ್ಲಿಮರ ಒಲೈಕೆಗೆ ಕಾಂಗ್ರೆಸ್ ಮೀಸಲಾತಿ ನೀಡಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಬೀದರ್ ಜಿಲ್ಲೆಯ ಗೊರಟದಲ್ಲಿ ‘ಗೊರಟ ಶಹೀದ್ ಸ್ಮಾರಕ’ ಮತ್ತು ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಸ್ಮಾರಕ ಉದ್ಘಾಟಿಸಿ ಮಾತನಾಡಿದ ಅವರು, “ಬಿಜೆಪಿಯು ಮುಸ್ಲಿಂ ಮೀಸಲಾತಿಯನ್ನು ಕಿತ್ತು ಹಾಕಿ ಅದನ್ನು ಲಿಂಗಾಯಿತರಿಗೆ ಮತ್ತು ಒಕ್ಕಲಿಗರಿಗೆ ಹಂಚುತ್ತೇವೆ” ಎಂದಿದ್ದಾರೆ.
ಕಾಂಗ್ರೆಸ್‌ನ ಧ್ರುವೀಕರಣದ ರಾಜಕಾರಣ, ಮತ ಬ್ಯಾಂಕ್‌ನ ದುರಾಸೆಯಿಂದ ಅದು ಸ್ವಾತಂತ್ರ್ಯ ಹೋರಾಟಗಾರರು ಮತ್ತು ಹೈದರಾಬಾದ್ ವಿಮೋಚನೆಯ ಹುತಾತ್ಮರನ್ನು ಎಂದಿಗೂ ಸ್ಮರಿಸಲಿಲ್ಲ ಎಂದು ಟೀಕಿಸಿದರು.
ಸರ್ದಾರ್ ಪಟೇಲ್ ಇಲ್ಲದಿದ್ದರೆ ಹೈದರಾಬಾದ್‌ಗೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ. ಬೀದರ್‌ಗೂ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ ಎಂದು ಅಮಿತ್ ಶಾ ಹೇಳಿದರು.
ಇದನ್ನೂ ಓದಿ: ಚನ್ನಪಟ್ಟಣದಿಂದಲೂ ಡಿಕೆಶಿ ಸ್ಪರ್ಧೆ?: ಜೆಡಿಎಸ್ ಸೇರಿದ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪ್ರಸನ್ನಗೌಡ


