Homeಕರ್ನಾಟಕಜಾಮೀನು ಮೇಲೆ ಹೊರಗಿರುವವರಿಂದ ನೈತಿಕತೆಯ ಪಾಠ ಕಲಿಯಬೇಕಿಲ್ಲ: ಬೊಮ್ಮಾಯಿ

ಜಾಮೀನು ಮೇಲೆ ಹೊರಗಿರುವವರಿಂದ ನೈತಿಕತೆಯ ಪಾಠ ಕಲಿಯಬೇಕಿಲ್ಲ: ಬೊಮ್ಮಾಯಿ

- Advertisement -
- Advertisement -

ಜಾಮೀನು ಮೇಲೆ ಹೊರಗಿರುವವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿ ಬಸಬರಾಜ ಬೊಮ್ಮಾಯಿಯವರು ರೇಸ್ ಕೋರ್ಸ್ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ರಾಜ್ಯದ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್‌‌ನವರು ಮಾತನಾಡುತ್ತಾರೆ. ರಾಹುಲ್ ಗಾಂಧಿ, ಅವರ ರಾಷ್ಟ್ರೀಯ ಅಧ್ಯಕ್ಷರು ಸೋನಿಯಾ ಗಾಂಧಿಯವರು ಬೇಲ್ ಮೇಲೆ ಹೊರಗಿದ್ದಾರೆ. ಇಲ್ಲಿನ ಅಧ್ಯಕ್ಷರು ಕೂಡ ಬೇಲ್ ಮೇಲೆ ಹೊರಗಿದ್ದಾರೆ. ಇಂತಹವರಿಂದ ನಾವು ನೈತಿಕತೆಯ ಪಾಠ ಕಲಿಯುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕರ್ನಾಟಕ ಮತ್ತು ಭಾರತದ ಜನತೆ ಈಗಾಗಲೇ ತಿರಸ್ಕಾರ ಮಾಡಿದ್ದಾರೆ. ಮುಂಬರುವ 2023ರ ಚುನಾವಣೆಯಲ್ಲಿಯೂ ಕೂಡ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ನಿನ್ನೆ ಸಿದ್ದರಾಮಯ್ಯ ಅವರು ಆರು ತಿಂಗಳಾದ ಮೇಲೆ ನಮ್ಮ ಸರ್ಕಾರ ಬರುತ್ತದೆ ಅಂತ ಹೇಳಿರುವುದು ಕನಸು. ಅವರ ಕನಸಾಗಿಯೇ ಉಳಿಯುತ್ತದೆ. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಅನ್ನುವುದು ಕನಸಿನ ಮಾತು ಎಂದು ತಿಳಿಸಿದ್ದಾರೆ.

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಜತೆ ಜತೆಯಾಗಿಯೇ ಪಾದಯಾತ್ರೆ ಮಾಡಬೇಕು. ನಾವು ಅದಕ್ಕೆ ಬೇಡ ಅಂದಿಲ್ಲ‌. ಅವರು ಜೊತೆ ಜೊತೆಯಾಗಿ ಬಂದಾಗಲೇ ರಾಜಕಾರಣ ಸರಿ ಅಗುತ್ತದೆ. ಒಬ್ಬರು ಮುಂದೆ ಹೋಗಿ ಇನ್ನೊಬ್ಬರು ಹಿಂದೆ ಇರಬಾರದು. ಅವರಿಬ್ಬರೂ ಒಟ್ಟಿಗೆ ಇದ್ದಷ್ಟು ನಮಗೆ ಒಳ್ಳೆಯದ್ದು ಎಂದು ಹೇಳಿದ್ದಾರೆ.

ಭಾರತ ಜೋಡೋ ಯಾತ್ರೆಗೆ ಜನಸಾಮಾನ್ಯರಿಂದ ಪ್ರತಿಕ್ರಿಯೆ ಬರುತ್ತಿಲ್ಲ. ಕಷ್ಟಪಟ್ಟು ಬೇರೆ ಬೇರೆ ತಾಲ್ಲೂಕಿನಿಂದ ಜನರನ್ನು ಕರೆದುಕೊಂಡು ಬಂದು ಪ್ರದರ್ಶನ ಮಾಡುತ್ತಿದ್ದಾರೆ. ಅವರ ಜೊತೆಗೆ ಪಾದೆಯಾತ್ರೆ ಮಾಡುವವರ ಜನಸಂಖ್ಯೆ ಕಡಿಮೆಯಿದೆ. ಅಲ್ಲಲ್ಲಿ ಅಷ್ಟೇ ಜನರಿದ್ದಾರೆ, ಇಂದೊಂದು ತರಹ ಶೋ. ಕಾಂಗ್ರೆಸ್ ನವರು, ರಾಹುಲ್ ಗಾಂಧಿ ತಮ್ಮ ರಾಜಕೀಯ ಆಸ್ತಿತ್ವ ಉಳಿಸಿಕೊಳ್ಳಲು ಈ ಶೋ ಮಾಡುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆ ಮತ್ತು ಇವತ್ತು ರಾಜ್ಯದ ಬಗ್ಗೆ ಮಾತನಾಡಿದ್ದಾರೆ. ನಾನು ಅದನ್ನು ಗಮನಿಸಿದ್ದು, ಇಷ್ಟು ಸಣ್ಣಮಟ್ಟದ ರಾಜಕಾರಣವನ್ನು ಮಾಡುವುದಕ್ಕೆ ನಾವು ಬಯಸುವುದಿಲ್ಲ. ಅವರು ಪಾದಯಾತ್ರೆ ಮಾಡಿಕೊಂಡು ಹೋಗಲಿ. ಜನರು ತೀರ್ಮಾನ ಮಾಡುತ್ತಾರೆ. ಕೀಳು ಮಟ್ಟದ ಮಾತುಗಳು, ಅಧಿಕಾರಿಗಳಿಗೆ ಹೆದರಿಸುವುದು ನಡೆಯುವುದಿಲ್ಲ. ಇದನ್ನು ನಾನು ಸ್ಪಷ್ಟಪಡಿಸುತ್ತೇನೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

‘ರಾಹುಲ್‌, ಭಾರತ್‌ ಜೋಡೋ’ ಕುರಿತು ನಿಂದನಾತ್ಮಕ ಜಾಹೀರಾತು ನೀಡಿದ ರಾಜ್ಯ ಬಿಜೆಪಿ; ಜನಾಕ್ರೋಶ

ದೇಶದ ಬಹುತ್ವವನ್ನು ಒಡೆದು ರಾಜಕೀಯ ಮಾಡುತ್ತಿರುವ ಕೋಮುಶಕ್ತಿಗಳ ವಿರುದ್ಧ ಜನರನ್ನು ಒಟ್ಟುಗೂಡಿಸಿ, ದೇಶದ ಏಕತೆಯನ್ನು ಸ್ಥಾಪಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೈಗೊಂಡಿರುವ ಭಾರತ್‌ ಜೋಡೋ ಯಾತ್ರೆ ಹಾಗೂ ರಾಹುಲ್‌ ಗಾಂಧಿ ಕುರಿತು ಕರ್ನಾಟಕ ಬಿಜೆಪಿ ಕೀಳು ಅಭಿರುಚಿಯ ಜಾಹೀರಾತು ನೀಡಿ ಜನರ ಆಕ್ರೋಶಕ್ಕೆ ಗುರಿಯಾಗಿದೆ.

‘ಕನ್ನಡಪ್ರಭ’ ಪತ್ರಿಕೆಯಲ್ಲಿ ಪ್ರಕಟವಾಗಿರುವ ಒಂದು ಪುಟದ ಜಾಹೀರಾತು ಅತ್ಯಂತ ಅಸಹನೀಯವಾಗಿದೆ ಎಂದು ಟೀಕೆಗಳು ವ್ಯಕ್ತವಾಗುತ್ತಿದೆ. ಇಂತಹ ಜಾಹೀರಾತನ್ನು ಪ್ರಕಟಿಸಿದ ಪತ್ರಿಕೆಯ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.

‘ತೋಡೋ ಪಿತಾಮಹನ ಮರಿಮಗನಿಂದ ಜೋಡಿಸಲು ಸಾಧ್ಯವೆ?’ ಎಂಬ ದೊಡ್ಡ ಶೀರ್ಷಿಕೆಯಲ್ಲಿ ಜಾಹೀತಾತು ಪ್ರಕಟಿಸಲಾಗಿದೆ. ಮಹಮ್ಮದ್‌ಅಲಿ ಜಿನ್ನಾ ಹಾಗೂ ಜವಹರಲಾಲ್‌ ನೆಹರೂ ಅವರ ಫೋಟೋಗಳನ್ನು ಇಲ್ಲಿ ಬಳಸಲಾಗಿದೆ. ಕಾಂಗ್ರೆಸ್‌ ಪಕ್ಷದ ಹಸ್ತದ ಗುರುತನ್ನು ಮುದ್ರಿಸಲಾಗಿದೆ.

ಇದನ್ನೂ ಓದಿರಿ: ಭಗವದ್ಗೀತೆಯಲ್ಲಿ ಅದ್ಯಾವ ನೈತಿಕ ಶಿಕ್ಷಣವಿದೆ?

“ರಾಜಕೀಯ ಪಕ್ಷಗಳು ಸಹಜವಾಗಿ ತಮ್ಮ ಸಾಧನೆ ಹೇಳಲು, ಸಕಾರಾತ್ಮಕ ಸಂದೇಶ ನೀಡಲು ಪತ್ರಿಕೆಗಳ‘ ಮುಖಪುಟದ ಜಾಹೀರಾತು ನೀಡುವುದು ವಾಡಿಕೆ. ಆದರೆ ಕರ್ನಾಟಕ ಬಿಜೆಪಿ ಕೋಟಿ ಕೋಟಿ ಖರ್ಚು ಮಾಡಿ ನಕಾರಾತ್ಮಕ ಜಾಹೀರಾತು ನೀಡಿದೆ ಎಂದರೆ ಅವರಲ್ಲಿ ಅದೆಷ್ಟು ಭಯ, ಆತಂಕ, ಅಭದ್ರತೆಯನ್ನು ಭಾರತ್‌ ಜೋಡೋ ಯಾತ್ರೆ ಮೂಡಿಸಿರಬಹುದೆಂದು ಊಹಿಸಬಹುದು” ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.

“ಈ ಜಾಹೀರಾತಿನಲ್ಲಿ ಬರೆದದ್ದು ನಿಜವೇ ಆಗಿದ್ದರೆ, ನೆಹರೂ ಜಯಂತಿ ದಿನ ಪ್ರಧಾನಿ ಮೋದಿ ನೆಹರೂ ಭಾವಚಿತ್ರಕ್ಕೆ ಹಾರ ಹಾಕಿ ಗೌರವಿಸಿದ್ದೇಕೆ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನೆಹರೂ ಅವರ ಕೊಡುಗೆಯನ್ನು ಹಾಡಿ ಹೊಗಳಿದ್ದೇಕೆ? ಹೊಟ್ಟೆಗೆ ಅನ್ನ ತಿನ್ನುವವರು ಮಾಡುವ ಕೆಲಸ ಇದಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಈ ಜಾಹೀರಾತಿನ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಈ ಕುರಿತು ಕಾಯ್ದೆ ಪರಿಣಿತರನ್ನು ವಿಚಾರಿಸಬೇಕು. ಇದು ಕನ್ನಡಪ್ರಭ ಪತ್ರಿಕೆಯ ದುರಂತಕ್ಕೆ ಒಂದು ಉದಾಹರಣೆ ಕೂಡ. ದುಡ್ಡು ಹಾಕಿಕೊಂಡ ಮಾಲೀಕ ಪತ್ರಿಕೆಯನ್ನು ಕಾಲೊರೆಸುವ ಮ್ಯಾಟನ್ನಾಗಿ ಇದನ್ನು ಮಾಡಿಕೊಂಡಿದ್ದಾನೆ” ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ. (ವಿವರಗಳನ್ನು ‘ಇಲ್ಲಿ’ ಓದಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 40% ಕೇಸುಗಳು,ಖಾಸಾಗಿ ಶಾಲೆಗಳ ದೂರು, ಪಿಎಸ್ಐ ಕೇಸಲ್ಲಿ ಮುಕ್ಕಿದ್ದು,ಕೋವಿಡ್ ಟೈಮ್ ಅರ್ನಿಂಗ್, ಬಿಟ್ ಕಾಯಿನ್ ಹಗರಣಗಳೆಲ್ಲಾ ವಿಚಾರಣೆಗೊಳಪಡಿಸಿದ್ರೆ ನಿಮ್ಮ ಇಡೀ ಮಂತ್ರಿಮಂಡಲ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲೋಗ್ಯ bumಮಾಯಿಯವರೆ. ನಿಮ್ಮ ನೈ’ತಿಕ’
    ಮಟ್ಟ ಅತ್ಯಂತ ಶ್ರೇಷ್ಠವಾದುದು.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...