Homeಮುಖಪುಟಮೋದಿ ಪದವಿ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ: ಕೇಜ್ರಿವಾಲ್‌ಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

ಮೋದಿ ಪದವಿ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ: ಕೇಜ್ರಿವಾಲ್‌ಗೆ 25,000 ದಂಡ ವಿಧಿಸಿದ ಗುಜರಾತ್ ಹೈಕೋರ್ಟ್

- Advertisement -
- Advertisement -

ಪ್ರಧಾನಿ ಮೋದಿ ಅವರ ಪದವಿಗಳಿಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ “ಮಾಹಿತಿ ಹುಡುಕಲು” ನಿರ್ದೇಶಿಸಿದ್ದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶವನ್ನು ಗುಜರಾತ್ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ನ್ಯಾಯಾಲಯ ಕೇಜ್ರಿವಾಲ್ ಅವರಿಗೆ 25,000 ರೂಪಾಯಿ ದಂಡ ವಿಧಿಸಿದ್ದು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಾಲ್ಕು ವಾರದೊಳಗೆ ಪಾವತಿಸಬೇಕು ಎಂದು ಸೂಚಿಸಿದೆ.

”ಪ್ರಜಾಪ್ರಭುತ್ವದಲ್ಲಿ, ಅಧಿಕಾರಕ್ಕೇರಿದ ಮೇಲೆ ಆ ವ್ಯಕ್ತಿ ಡಾಕ್ಟರೇಟ್ ಅಥವಾ ಅನಕ್ಷರಸ್ಥ ಎಂಬುದು ಮುಖ್ಯವಾಗುವುದಿಲ್ಲ. ಅಲ್ಲದೆ, ಈ ವಿಷಯದಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಒಳಗೊಂಡಿಲ್ಲ. ಅವರ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಕಾನೂನು ವೆಬ್‌ಸೈಟ್ ಬಾರ್ ಮತ್ತು ಬೆಂಚ್ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿಯವರ ಪ್ರಕಾರ, ಅವರು 1978ರಲ್ಲಿ ಗುಜರಾತ್ ವಿಶ್ವವಿದ್ಯಾಲಯದಿಂದ ಪದವಿ ಮತ್ತು 1983ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದರು ಎಂದು ಹೇಳಿಕೊಂಡಿದ್ದಾರೆ.

”ನೀವು ನಾಮನಿರ್ದೇಶನವನ್ನು (ಚುನಾವಣೆಯಲ್ಲಿ ಸಲ್ಲಿಸಿದ) ನೋಡಿದರೆ ಅದು ಅವರ ಶೈಕ್ಷಣಿಕ ಅರ್ಹತೆಯನ್ನು ಉಲ್ಲೇಖಿಸುತ್ತದೆ. ಹೀಗಾಗಿ, ನಾವು ಪದವಿ ಪ್ರಮಾಣಪತ್ರವನ್ನು ಕೇಳುತ್ತಿದ್ದೇವೆಯೇ ಹೊರತು ಅವರ ಅಂಕಪಟ್ಟಿಯನ್ನಲ್ಲ” ಎಂದು ಕೇಜ್ರಿವಾಲ್ ಪರ ವಕೀಲ ಪರ್ಸಿ ಕವೀನಾ ವಾದಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ಕಸ್ಟಡಿಗೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಕೋರ್ಟ್...