Homeಕರ್ನಾಟಕಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಬೇಡ: ಸಿಎಂ ಹೇಳಿಕೆ

- Advertisement -
- Advertisement -

ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ಜನರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಹುಬ್ಭಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹಿಂದು, ಕ್ರಿಶ್ಚಿಯನ್, ಇಸ್ಲಾಂ ಹಾಗೂ ಸಿಖ್ ಧರ್ಮಗಳು ಸಂವಿಧಾನದಲ್ಲಿ ಗುರುತಿಸಲಾಗಿರುವ ಧರ್ಮಗಳಾಗಿದ್ದು, ಅವರ ಪ್ರಾರ್ಥನೆ, ಆಚರಣೆಗಳಿಗೆ ಯಾವುದೇ ತೊಂದರೆ ಇಲ್ಲ. ಬಡತನದ ದುರುಪಯೋಗ ಪಡೆದು, ಆಸೆ, ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಮತಾಂತರದ ವಿಷಯ ಇಂದಿನದಲ್ಲ. ಈ ಬಗ್ಗೆ ಸ್ವತಂತ್ರದ ನಂತರದಲ್ಲಿ ಬಹಳ ದೊಡ್ಡ ಚರ್ಚೆಯಾಗಿದೆ. ವಿವಿಧ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇವುಗಳನ್ನು ಅವಲೋಕಿಸಿ, ಕಾನೂನು ಜಾರಿಗೆ ತರಬೇಕೆನ್ನುವುದು ಕರ್ನಾಟಕದ ಬಹುತೇಕ ಜನರ ಅಪೇಕ್ಷೆಯೂ ಆಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಇಲಾಖೆ ಪರಿಶೀಲನೆ ಮಾಡುತ್ತಿದೆ. ಪರಿಶೀಲನೆಯ ನಂತರ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡನೆಯಾಗಲಿದೆ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಬಹುತೇಕವಾಗಿ ಕಾನೂನು ಇಲಾಖೆ ಕರಡು ಕಾಯ್ದೆಗೆ ಒಪ್ಪಿಗೆ ನೀಡಿದಲ್ಲಿ ಅಧಿವೇಶನದಲ್ಲಿ ವಿಷಯ ಚರ್ಚೆಗೆ ಬರಲಿದೆ ಎಂದು ಮಾಹಿತಿ ನೀಡಿದರು.

ಮತಾಂತರ ಒಳ್ಳೆಯದಲ್ಲ. ಮತಾಂತರ ಸಮಾಜಕ್ಕೆ ಒಳ್ಳೆಯದಲ್ಲ. ಬಡವರು, ದೀನದಲಿತರು ಅದಕ್ಕೆ ಒಳಗಾಗಬಾರದು. ಅವರ ಮನೆತನ, ಕುಟುಂಬದಲ್ಲಿ ಬಹಳಷ್ಟು ತೊಂದರೆಯಾಗುವುದರಿಂದ ಮತಾಂತರ ನಿಷೇಧ ಕಾಯ್ದೆಯನ್ನು ತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ತಿಳಿಸಿದರು.

ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆ

ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಅಧಿವೇಶನದಲ್ಲಿ ಅಭಿವೃದ್ಧಿಯ ಪರವಾದ ಹಾಗೂ ಜನರಿಗೆ ಉಪಯುಕ್ತವಾಗುವ ಚರ್ಚೆಯಾಗಬೇಕೆಂದು ಬಯಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದರು.

ಮಹತ್ವದ ಹಾಗೂ ಅರ್ಥಪೂರ್ಣ ಚರ್ಚೆಗಳಾಗಬೇಕೆನ್ನುವುದು ಉತ್ತರ ಕರ್ನಾಟಕ ಭಾಗದ ಜನರ ಅಪೇಕ್ಷೆಯೂ ಹೌದು. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ದಿಗೆ ಸಂಬಂಧಿಸಿದ ಚರ್ಚೆಗಳನ್ನು ಸ್ವಾಗತಿಸುತ್ತೇವೆ. ಕೆಲವು ವಿಚಾರಗಳಲ್ಲಿ ನಿರ್ಧಾರಕ್ಕೆ ಬರಬೇಕೆನ್ನುವ ಉದ್ದೇಶವಿದೆ ಎಂದರು.

ಮತಾಂತರ ನಿಷೇಧದ ಸುತ್ತ

ಮತಾಂತರ ನಿಷೇಧ ಕಾಯ್ದೆಯ ಚರ್ಚೆ ಮುನ್ನಲೆಗೆ ಬಂದ ಬಳಿಕ ಮತೀಯ ಶಕ್ತಿಗಳು ಗಲಭೆ ಸೃಷ್ಟಿಸಲು ಯತ್ನಿಸಿವೆ. ಹಿಂದೂಗಳನ್ನು ಮತಾಂತರ ಮಾಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕ್ರಿಶ್ಚಿಯನ್ನರ ಪ್ರಾರ್ಥನಾ ಮಂದಿರದ ಮೇಲೆ ದಾಳಿ ಮಾಡಿದ ಘಟನೆ ಇತ್ತೀಚೆಗೆ ನಡೆದಿತ್ತು. ಮತಾಂತರ ಮಾಡಲು ಯತ್ನಿಸಲಾಗಿದೆ ಎಂಬ ಆರೋಪವನ್ನು ಪ್ರಾರ್ಥನೆಯಲ್ಲಿ ತೊಡಗಿದ್ದ ಮಹಿಳೆಯರು ಅಲ್ಲಗಳೆದಿದ್ದರು. ಜೊತೆಗೆ ದಾಳಿ ನಡೆಸಿದವರಿಗೆ ಛೀ ಮಾರಿ ಹಾಕಿದ್ದರು. ಪ್ರಕರಣವೂ ದಾಖಲಾಗಿದೆ.

ಧಾರ್ಮಿಕತೆಯ ಆಯ್ಕೆಯು ವ್ಯಕ್ತಿಯ ವೈಯಕ್ತಿನ ನಿಲುವು. ಅದರಲ್ಲಿ ರಾಜಕೀಯ ಪ್ರೇರಿತ ಮತೀಯ ಶಕ್ತಿಗಳು ರಾಜಕಾರಣ ಮಾಡಲು ಹೊರಟಿವೆ ಎಂಬ ಆರೋಪಗಳು ಕೇಳಿಬಂದಿವೆ. ಮತಾಂತರ ನಿಷೇಧದ ಹೆಸರಲ್ಲಿ ಮತೀಯ ಸಂಘಟನೆಗಳು ಗಲಭೆಗಳನ್ನು ಸೃಷ್ಟಿಸುವ ಆತಂಕ ಪ್ರಜ್ಞಾವಂತರಲ್ಲಿ ಮನೆ ಮಾಡಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕತೆಯ ಹೆಸರಲ್ಲಿ ನಡೆಯುತ್ತಿರುವ ಮತೀಯ ಗೂಂಡಾಗಿರಿ ಪ್ರಕರಣಗಳು ಜನರನ್ನು ಆತಂಕಕ್ಕೆ ತಳ್ಳಿವೆ.


ಇದನ್ನೂ ಓದಿರಿ: ಬೇಲೂರು: ಚರ್ಚ್‌ ಮೇಲೆ ದಾಳಿ ಮಾಡಿದವರ ಬಂಧನ ಇನ್ನೂ ಆಗಿಲ್ಲ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

0
ಭಾರತಕ್ಕೆ ಚಿಕಿತ್ಸೆಗೆಂದು ಬಂದು ಕಳೆದ ವಾರ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಅವರನ್ನು ಬುಧವಾರ ಕೋಲ್ಕತ್ತಾದಲ್ಲಿ ಹತ್ಯೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಢಾಕಾದಲ್ಲಿ ಸುದ್ದಿಗೋಷ್ಠಿಯಲ್ಲಿ...