Homeಕರ್ನಾಟಕಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

ಭಾರತದಲ್ಲಿ ಯಾವುದೇ ಹೊಸ ಹೂಡಿಕೆ ಒಪ್ಪಂದವಾಗಿಲ್ಲ: ಬೊಮ್ಮಾಯಿ ಹೇಳಿಕೆ ತಳ್ಳಿಹಾಕಿದ ಫಾಕ್ಸ್‌ಕಾನ್

- Advertisement -
- Advertisement -

ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್‌ ಲಿಯು ಅವರು ಭಾರತಕ್ಕೆ ಭೇಟಿ ನೀಡಿರುವುದನ್ನು ಶನಿವಾರ ದೃಢಪಡಿಸಿದ್ದಾರೆ. ಆದರೆ ದೇಶದಲ್ಲಿ ಹೊಸ ಹೂಡಿಕೆಗೆ ಸಂಬಂಧಿಸಿದಂತೆ ”ಯಾವುದೇ ಖಚಿತ, ನಿರ್ಣಾಯಕ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ಹೇಳಿದ್ದಾರೆ.

ಈ ಮೂಲಕ ಯಂಗ್‌ ಲಿಯು ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ.

”ವಿಶ್ವದ ಮುಂಚೂಣಿ ಎಲೆಕ್ಟ್ರಾನಿಕ್ಸ್ ಕಂಪನಿ ಹಾನ್ ಹಾಯ್ ಟೆಕ್ನಾಲಜಿ ಗ್ರೂಪ್ ನ ಫಾಕ್ಸ್ ಕಾನ್ ಕಂಪನಿಯು ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಹೂಡಿಕೆಗೆ ಮುಂದಾಗಿದ್ದು, ಒಪ್ಪಂದಕ್ಕೆ ಸಹಿ ಮಾಡಲಾಯಿತು. ಕಂಪನಿಯ ಅಧ್ಯಕ್ಷ ಯಂಗ್ ಲಿಯವರೊಂದಿಗೆ ಈ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು. ಈ ಕಂಪನಿಯ ಉದ್ಯಮ ಸ್ಥಾಪನೆಗಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ದೇವನಹಳ್ಳಿ ಬಳಿ 300 ಎಕರೆ ಜಾಗ ಗುರುತಿಸಿದ್ದು, ಇದರಿಂದ ರಾಜ್ಯದಲ್ಲಿ 1 ಲಕ್ಷ ಉದ್ಯೋಗ ಸೃಜನೆಯಾಗುವ ನೀರಿಕ್ಷೆ ಇದೆ. ಫಾಕ್ಸ್ ಕಾನ್ ಕಂಪನಿಗೆ ಎಲ್ಲಾ ರೀತಿಯ ಅಗತ್ಯ ಸಹಕಾರ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಸಿಎಂ ಬೊಮ್ಮಾಯಿ ಅವರು ಮಾ.3ರಂದು ಟ್ವೀಟ್ ಮಾಡಿದ್ದರು.

ಬೊಮ್ಮಾಯಿ ಟ್ವೀಟ್ ಬೆನ್ನಲ್ಲೇ, ಫಾಕ್ಸ್‌ಕಾನ್ ಶನಿವಾರ ಪ್ರಕಟಣೆ ಹೊರಡಿಸಿದ್ದು, ”ಫೆಬ್ರುವರಿ 27 ರಿಂದ ಮಾರ್ಚ್ 4 ರವರೆಗೆ ತನ್ನ ಅಧ್ಯಕ್ಷ ಮತ್ತು ಸಿಇಒ ಯಂಗ್ ಲಿಯು ಭಾರತಕ್ಕೆ ಭೇಟಿ ನೀಡಿದಾಗ ಯಾವುದೇ ಖಚಿತ ಒಪ್ಪಂದಗಳನ್ನು ಮಾಡಿಕೊಂಡಿಲ್ಲ” ಎಂದು ತಿಳಿಸಿದೆ.

ಇದನ್ನೂ ಓದಿ: ಭ್ರಷ್ಟಾಚಾರದ ಹೊಣೆಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

”ಈ ಭೇಟಿ ಸಮಯದಲ್ಲಿ ಮಾತುಕತೆಗಳು ಮತ್ತು ಆಂತರಿಕ ಪರಿಶೀಲನೆಗಳು ನಡೆಯುತ್ತಿವೆ. ಮಾಧ್ಯಮಗಳಲ್ಲಿ ಚರ್ಚಿಸಲಾದ ಹಣಕಾಸು ಹೂಡಿಕೆ ಮೊತ್ತಗಳು ಫಾಕ್ಸ್‌ಕಾನ್ ಬಿಡುಗಡೆ ಮಾಡಿದ ಮಾಹಿತಿ ಅಲ್ಲ” ಎಂದು ಕಂಪನಿ ಸ್ಪಷ್ಟಪಡಿಸಿದೆ.

ಫಾಕ್ಸ್‌ಕಾನ್ ಕರ್ನಾಟಕದ ತನ್ನ ಹೊಸ ಘಟಕದಲ್ಲಿ700 ಮಿಲಿಯನ್ ಡಾಲರ್ ಹೂಡಿಕೆ ಮಾಡಲು ಯೋಜಿಸುತ್ತಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಬ್ಲೂಮ್‌ಬರ್ಗ್ ನ್ಯೂಸ್ ವರದಿ ಮಾಡಿತ್ತು.

ಪ್ರಸ್ತುತ ವರದಿಯಾಗುತ್ತಿರುವ ಉದ್ಯೋಗದ ಅಂಕಿಅಂಶಗಳು ಕಂಪನಿಯೊಂದಿಗೆ ”ನೇರ ಉದ್ಯೋಗಗಳನ್ನು ಹೊಂದಿರುವುದಿಲ್ಲ” ಎಂದು ಫಾಕ್ಸ್‌ಕಾನ್ ಹೇಳಿದೆ.

ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರ ಕಚೇರಿ ಕೂಡ, ಫಾಕ್ಸ್‌ಕಾನ್  ”ಎಲೆಕ್ಟ್ರಾನಿಕ್ಸ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು” ಗುರುವಾರ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಟ್ವೀಟ್ ಮಾಡಿತ್ತು.

ಇದೀಗ ಫಾಕ್ಸ್‌ಕಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...