Homeಕರ್ನಾಟಕಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ: ಇಂದು ಸಂಜೆ 6 ರಿಂದ ಬೆಂಗಳೂರಿನಲ್ಲಿ ಕರ್ಫ್ಯೂ ಜಾರಿ

ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧ: ಇಂದು ಸಂಜೆ 6 ರಿಂದ ಬೆಂಗಳೂರಿನಲ್ಲಿ ಕರ್ಫ್ಯೂ ಜಾರಿ

- Advertisement -
- Advertisement -

ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡ ಬೆನ್ನಲ್ಲೇ ಹೊಸ ವರ್ಷದ ಸಂಭ್ರಮಾಚರಣೆಗೆ ವಿಧಿಸಿದ್ದ ನಿಬಂಧಗಳನ್ನು ಮತ್ತಷ್ಟು ಬಿಗಿಗೊಳಿಸಿ ಆದೇಶ ಹೊರಡಿಸಲಾಗಿದೆ. ಓಮಿಕ್ರಾನ್ ರೂಪಾಂತರದ ಜೊತೆಗೆ ಕೋವಿಡ್ ಪ್ರಕರಣಗಳು ಗುರುವಾರ ಹೆಚ್ಚು ವರದಿಯಾಗಿದ್ದು, ಸರ್ಕಾರ ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಸಮಯವನ್ನು ಪರಿಷ್ಕರಿಸಿದೆ.

ಬೆಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸೆಂಬರ್‌ 31 ರ ಸಂಜೆ 6 ರಿಂದ ಜನವರಿ 1ರ ಬೆಳಗ್ಗೆ 5 ಗಂಟೆಯವರಗೆ ನಿಷೇಧಾಜ್ಞೆ ಜಾರಿ ಮಾಡಿ ಪರಿಷ್ಕೃತ ಆದೇಶ ಹೊರಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ನಗರದಲ್ಲಿ ಯಾವುದೇ ರೂಪದಲ್ಲಿಯೂ ಹೊಸ ವರ್ಷದ ಆಚರಣೆಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಬೀದಿಬದಿ ವ್ಯಾಪಾರಿಗಳ ಹೋರಾಟಕ್ಕೆ ಮಂಡಿಯೂರಿದ BJP ಆಡಳಿತದ ಮಂಗಳೂರು ಮಹಾನಗರ ಪಾಲಿಕೆ

“ಹೋಟೆಲ್‌ಗಳು, ಮಾಲ್‌ಗಳು, ರೆಸ್ಟೋರೆಂಟ್‌ಗಳು, ಕ್ಲಬ್‌ಗಳು ಅಥವಾ ಯಾವುದೇ ರೀತಿಯ ಸಂಸ್ಥೆಗಳು ನಗರದಲ್ಲಿ ಯಾವುದೇ ವಿಶೇಷ ಡಿಜೆ, ಕಾರ್ಯಕ್ರಮಗಳು ಅಥವಾ ನೃತ್ಯ ಪ್ರದರ್ಶನಗಳನ್ನು ಆಯೋಜಿಸಬಾರದು. ಆದರೆ, ರಾತ್ರಿ 10 ಗಂಟೆಯವರೆಗೆ ತಮ್ಮ ನಿಯಮಿತ ವ್ಯಾಪಾರ ಚಟುವಟಿಕೆಗಳನ್ನು ಕೊರೊನಾ ಪ್ರೋಟೋಕಾಲ್‌ಗಳನ್ನು ಅನುಸರಿಸಿ ನಡೆಸಬಹುದು” ಎಂದು ಆದೇಶಿಸಲಾಗಿದೆ.

ಆದೇಶ ಮೀರಿ ಹಾಗೂ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ್ದೇ ಆದರೆ, ವಿಪತ್ತು ನಿರ್ವಹಣೆ ಕಾಯ್ದೆ ಹಾಗೂ ಸಾಂಕ್ರಾಮಿ ರೋಗ ಕಾಯ್ದೆ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನೀಡಿದ್ದಾರೆ.

ಈ ಹಿಂದೆ ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ 10 ದಿನಗಳವರೆಗೆ ನೈಟ್ ಕರ್ಫ್ಯೂ ವಿಧಿಸಿ ಸರ್ಕಾರ ಆದೇಶ ಜಾರಿ ಮಾಡಿತ್ತು. ಕೊರೊನಾ ಪ್ರಕರಣಗಳಲ್ಲಿ ಏರಿಕೆ ಕಂಡ ಬಳಿಕ ಆದೇಶವನ್ನು ಪರಿಷ್ಕರಿಸಲಾಗಿದೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...