Homeಕರ್ನಾಟಕಹೊಸ ವರ್ಷ ಆಚರಣೆ ಮಾಡುವಂತಿಲ್ಲ - ಇಂದು ಮಾರ್ಗಸೂಚಿ ಬಿಡುಗಡೆ

ಹೊಸ ವರ್ಷ ಆಚರಣೆ ಮಾಡುವಂತಿಲ್ಲ – ಇಂದು ಮಾರ್ಗಸೂಚಿ ಬಿಡುಗಡೆ

- Advertisement -
- Advertisement -

ಹೊಸ ರೂಪಾಂತರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಈ ಬಾರಿ ಹೊಸ ವರ್ಷ ಆಚರಣೆಗೆ ನಿಷೇಧ ಹೇರಲಾಗುವುದು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ನಿಷೇಧವು ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ ಮತ್ತು ನಗರಕ್ಕೆ ಸೀಮಿತವಾಗಿರುವುದಿಲ್ಲ. ರಾಜ್ಯದ ಯಾವುದೇ ಭಾಗದ ಸಾರ್ವಜನಿಕ ಸ್ಥಳಗಳಲ್ಲಿಯೂ ಹೊಸ ವರ್ಷಾಚರಣೆಯ ನೆಪದಲ್ಲಿ ಪಾರ್ಟಿಗಳನ್ನು ಆಯೋಜಿಸಲು, ಜನಜಂಗುಳಿ ಸೇರಲು ಅವಕಾಶ ನೀಡುವುದಿಲ್ಲ” ಎಂದರು.

“ಕ್ಲಬ್‌, ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಾರ್ಗಸೂಚಿಯ ಪ್ರಕಾರ ನಿಗದಿತ ಸಂಖ್ಯೆಯ ಜನರು ಮಾತ್ರ ಸೇರಲು ಅವಕಾಶ ನೀಡಲಾಗುವುದು. ಡಿ.ಜೆ. ಬಳಕೆ ಮತ್ತು ಗುಂಪು ನರ್ತನಕ್ಕೆ ಅವಕಾಶ ಇರುವುದಿಲ್ಲ. ಕೊರೊನಾ‌ ನಿಯಂತ್ರಣದ ದೃಷ್ಟಿಯಲ್ಲಿ ಗೃಹ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಚರ್ಚಿಸಿ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಲಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ:ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

“ಹೊಸ ವರ್ಷಾಚರಣೆಗೆ ಮುಕ್ತ ಅವಕಾಶ ನೀಡಿದರೆ ಕೊರೊನಾ ವೈರಸ್‌ ಸೋಂಕು ವ್ಯಾಪಕವಾಗಿ ಹರಡುವ ಭೀತಿ ಇದೆ. ಬ್ರಿಟನ್‌ನಿಂದ ಆರಂಭಿಕ ಹಂತದಲ್ಲಿ ರಾಜ್ಯಕ್ಕೆ ಬಂದಿರುವ ವ್ಯಕ್ತಿಗಳು ಹಲವೆಡೆ ಓಡಾಡಿರುವ ಸಾಧ್ಯತೆ ಇದೆ. ಈ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕೊರೊನಾ‌ ನಿಯಂತ್ರಣ ಮಾರ್ಗಸೂಚಿಯ ಪ್ರಕಾರ ಎಲ್ಲರೂ ಮುನ್ನೆಚ್ಚರಿಕೆ ವಹಿಸುವುದು ಕಡ್ಡಾಯ” ಎಂದರು.

ಈ ಹಿಂದೆ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ವಿಧಿಸಿತ್ತು. ಬಳಿಕ ಯಡಿಯೂರಪ್ಪನವರು ಅದನ್ನು ಮುಂದೂಡಿದ್ದೇವೆ ಎಂದು ಟ್ವೀಟ್ ಮಾಡಿದ್ದರು. ಆದರೆ ಅತಿ ಶೀಘ್ರದಲ್ಲೇ ರಾತ್ರಿ ಕರ್ಫ್ಯೂ ಅನ್ನು ಸಂಪೂರ್ಣ ಹಿಂತೆಗೆದುಕೊಂಡಿದ್ದೇವೆ ಎಂದೂ ಘೋಷಿಸಿದರು. ಯಡಿಯೂರಪ್ಪನವರ ಈ ನಡೆಯ ವಿರುದ್ಧ ರಾಜ್ಯದಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.


ಇದನ್ನೂ ಓದಿ:ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...