Homeಮುಖಪುಟಕಾಂಗ್ರೆಸ್ ಸರಕಾರದ ಯಾವ ಸಚಿವರು ಕೂಡ  ಕಮಿಷನ್ ಕೇಳಲಿಲ್ಲ: ಕೆಂಪಣ್ಣ ಸ್ಪಷ್ಟನೆ

ಕಾಂಗ್ರೆಸ್ ಸರಕಾರದ ಯಾವ ಸಚಿವರು ಕೂಡ  ಕಮಿಷನ್ ಕೇಳಲಿಲ್ಲ: ಕೆಂಪಣ್ಣ ಸ್ಪಷ್ಟನೆ

- Advertisement -
- Advertisement -

ನಮ್ಮ ಸಂಘದ ಗುತ್ತಿಗೆದಾರರ ಬಳಿ ಕಾಂಗ್ರೆಸ್ ಸರಕಾರದ ಯಾವ ಸಚಿವರು ಕೂಡ  ಕಮಿಷನ್ ಹಣವನ್ನು ಕೇಳಲಿಲ್ಲ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸ್ಪಷ್ಟಪಡಿಸಿದ್ದಾರೆ.

ಇಂದು ನಗರದಲ್ಲಿ ಗುತ್ತಿಗೆದಾರರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಂಪಣ್ಣ, ಹೊಸ ಸರಕಾರದ ಯಾವ ಸಚಿವರೂ ನಮ್ಮ ಬಳಿ ಕಮಿಷನ್ ಕೇಳಿಲ್ಲ. ಗುತ್ತಿಗೆದಾರರ ಬಾಕಿ ಇರುವ ಬಿಲ್ ನ್ನು ವಾಪಾಸ್ಸು ಮಾಡುವಂತೆ ಆಗ್ರಹಿಸಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಶೇ.15 ಕಮಿಷನ್ ಆರೋಪ ಮಾಡುತ್ತಿದ್ದಾರೆ. ಆದರೆ ರಾಜ್ಯ ಗುತ್ತಿಗೆದಾರರ ಸಂಘದವರು ಯಾವುದೇ ಆರೋಪ ಮಾಡುತ್ತಿಲ್ಲ.ನೂತನ ಸರಕಾರ ಬಂದ ನಂತರ ಯಾವುದೇ ಕಾಮಗಾರಿ ನಡೆದಿಲ್ಲ. ಹೀಗಿರುವಾಗ ಸಚಿವರಿಗೆ ಕಮಿಷನ್ ಕೊಡುವ ಪ್ರಶ್ನೆ ಉದ್ಬವಿಸುವುದಿಲ್ಲ ಎಂದು  ಹೇಳಿದ್ದಾರೆ.

ರಾಜ್ಯದ ಗುತ್ತಿಗೆದಾರರ 25ಸಾವಿರ ಕೋಟಿ ರೂ.ಬಿಲ್ ಬಾಕಿ ಇದೆ. 7 ತಿಂಗಳಿನಿಂದ ಗುತ್ತಿಗೆದಾರರ ಬಾಕಿ ಬಿಡುಗಡೆಯಾಗಿರುವುದಿಲ್ಲ.ಚುನಾವಣೆಯಿಂದ ಬಾಕಿ ಹಣ ಬಿಡುಗಡೆಯಾಗಿಲ್ಲ.ರಾಜ್ಯ ಸರಕಾರವು ಆ.31ರೊಳಗೆ ಗುತ್ತಿಗೆದಾರರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸರಕಾರ ಜು.30 ರಂದು ಗುತ್ತಿಗೆದಾರರ ಬಾಕಿ ಮೊತ್ತವನ್ನು ಹಣ ಬಿಡುಗಡೆ ಮಾಡುವುದು ಎಂದು ಸುತ್ತೋಲೆ ಹೊರಡಿಸಿದೆಯಾದರೂ ಈವರೆಗೆ ಬಿಲ್ ಬಿಡುಗಡೆಯಾಗಿಲ್ಲ.ಗುತ್ತಿಗೆದಾರರಿಗೆ ಬಿಡುಗಡೆ ಮಾಡಲು ಸರಕಾರ ಬಿಬಿಎಂಪಿಗೆ 675 ಕೋಟಿ ರೂ.ಹಣವನ್ನು ಬಿಡುಗಡೆ ಮಾಡಿದೆ. ಆದರೆ ಸರಕಾರ ಬಿಬಿಎಂಪಿ ಆಯುಕ್ತರು ಮೇಲಿನಿಂದ ಆದೇಶ ಬಂದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಸರಕಾರ ಮತ್ತು ಗುತ್ತಿಗೆದಾರರ ಮಧ್ಯೆ ಕಳೆದ ಒಂದು ವಾರದಿಂದ ಹಣಾಹಣಿ ನಡೆದಿತ್ತು.ಈ ಮಧ್ಯೆ ಇಂದಿನ ಪತ್ರಿಕಾಗೋಷ್ಠಿಯತ್ತ ಎಲ್ಲರ ಗಮನ ಸೆಳೆದಿತ್ತು.ಆದರೆ ಕೆಂಪಣ್ಣ ಸ್ಪಷ್ಟನೆ ಕೊಡುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಇದನ್ನು ಓದಿ: ಗುತ್ತಿಗೆದಾರ ಆತ್ಮಹತ್ಯೆ ಎಂದು ಸುಳ್ಳು ಸುದ್ದಿ ಬಿತ್ತರಿಸಿದ ಮಾಧ್ಯಮಗಳು: ವೈಯಕ್ತಿಕ ಕಾರಣಗಳಿಂದ ಆತ್ಮಹತ್ಯೆ- ತಂದೆ ಸ್ಪಷ್ಟನೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...