ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಯ ರೇಸ್‌ನಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಶಶಿ ತರೂರ್ ಮುಂಚೂಣಿಯಲ್ಲಿದ್ದಾರೆ ಎಂಬ ಊಹಾಪೋಹಗಳ ನಡುವೆ ಪಕ್ಷದ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು,“ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು. ಯಾರಿಗೂ ಯಾರದೇ ಒಪ್ಪಿಗೆ, ಅದರಲ್ಲೂ ವಿಶೇಷವಾಗಿ ಪಕ್ಷದ ನಾಯಕತ್ವದ ಒಪ್ಪಿಗೆ ಅಗತ್ಯವಿಲ್ಲ” ಮಂಗಳವಾರ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷವು ತನ್ನ ಮುಂದಿನ ಅಧ್ಯಕ್ಷರನ್ನು ಅಕ್ಟೋಬರ್‌ನಲ್ಲಿ ಆಯ್ಕೆ ಮಾಡಲು ಸಿದ್ಧವಾಗಿದೆ.ಈ ಚುನಾವಣೆಯಲ್ಲಿ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಪರ್ಧಿಸಲಿದ್ದಾರೆ ಎಂದು ಊಹಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಸೋಮವಾರ ಶಶಿ ತರೂರ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು,‘ಚುನಾವಣೆಯು ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಯಲಿದೆ. ಸ್ಪರ್ಧಿಸಲು ಬಯಸುವ ಯಾರಾದರೂ ತಮ್ಮ ನಾಮಪತ್ರವನ್ನು ಸಲ್ಲಿಸಬಹುದು” ಎಂದು ಹೇಳಿದ್ದಾರೆ.
“ಇಡೀ ಪಕ್ಷ ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಗೊಳಿಸುವಲ್ಲಿ ತಲ್ಲೀನವಾಗಿದೆ. ಹಾಗಿದ್ದರೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಯಾವುದೇ ಸದಸ್ಯರಿಗೆ ಸ್ವಾಗತವಿದೆ ಎಂದು ಪುನರುಚ್ಚರಿಸುವುದು ಮುಖ್ಯವಾಗಿದೆ. ಇದು ಪ್ರಜಾಸತ್ತಾತ್ಮಕ ಮತ್ತು ಪಾರದರ್ಶಕ ಪ್ರಕ್ರಿಯೆ. ಸ್ಪರ್ಧಿಸಲು ಯಾರೊಬ್ಬರ, ಅದರಲ್ಲೂ ವಿಶೇಷವಾಗಿ ಪಕ್ಷದ ನಾಯಕತ್ವದ ಒಪ್ಪಿಗೆಯ ಅಗತ್ಯವಿಲ್ಲ” ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಂಗಾರಪೇಟೆ: ಕಾಂಗ್ರೆಸ್ ಒಳಜಗಳದ ಲಾಭ ಪಡೆಯಲು ಜೆಡಿಎಸ್-ಬಿಜೆಪಿ ಪೈಪೋಟಿ
ಈ ಮಧ್ಯೆ, ರಾಹುಲ್ ಗಾಂಧಿ ಅವರೇ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಲಿ ಎಂದು ಪಕ್ಷದ ಹಲವಾರು ರಾಜ್ಯ ಘಟಕಗಳು ಮನವಿ ಮಾಡಿದೆ. ಇದೇ ಸಮಯದಲ್ಲಿ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಅವರ ಹೆಸರುಗಳು ಹೊರಹೊಮ್ಮಿವೆ. ರಾಹುಲ್ ಗಾಂಧಿ ಅವರೇ ಅಧ್ಯಕ್ಷರಾಗಲಿ ಎಂಬ ನಿರ್ಣಯವನ್ನು ಅಶೋಕ್ ಗೆಹ್ಲೋಟ್ ಕೂಡ ರಾಜಸ್ಥಾನದಲ್ಲಿ ಬೆಂಬಲಿಸಿದ್ದಾರೆ. ಆದರೆ, ಈ ವಿಚಾರದಲ್ಲಿ ತಾನು ಸ್ಪಷ್ಟ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಮುಂದಿನ ಕಾಂಗ್ರೆಸ್ ಅಧ್ಯಕ್ಷರು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷದ ಹಿಡಿತವನ್ನು ಪುನರುಜ್ಜೀವನಗೊಳಿಸುವುದು ಸೇರಿದಂತೆ ಹಲವು ಸವಾಲುಗಳನ್ನು ಹೊಂದಿರುತ್ತಾರೆ. ಪಕ್ಷವು ತನ್ನ ಅಧ್ಯಕ್ಷೀಯ ಚುನಾವಣೆಗೆ ಗುರುವಾರದಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಲಿದೆ.



Thank you