Homeಮುಖಪುಟಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ನಾಯಕತ್ವ ಸೇರಿದಂತೆ ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕಾಂಗ್ರೆಸ್

ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ನಾಯಕತ್ವ ಸೇರಿದಂತೆ ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕಾಂಗ್ರೆಸ್

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌‌ನ ಅಧ್ಯಕ್ಷೀಯ ಚುನಾವಣೆಯ ರೇಸ್‌ನಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಶಶಿ ತರೂರ್ ಮುಂಚೂಣಿಯಲ್ಲಿದ್ದಾರೆ ಎಂಬ ಊಹಾಪೋಹಗಳ ನಡುವೆ ಪಕ್ಷದ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಅವರು,“ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು. ಯಾರಿಗೂ ಯಾರದೇ ಒಪ್ಪಿಗೆ, ಅದರಲ್ಲೂ ವಿಶೇಷವಾಗಿ ಪಕ್ಷದ ನಾಯಕತ್ವದ ಒಪ್ಪಿಗೆ ಅಗತ್ಯವಿಲ್ಲ” ಮಂಗಳವಾರ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್‌‌ ಪಕ್ಷವು ತನ್ನ ಮುಂದಿನ ಅಧ್ಯಕ್ಷರನ್ನು ಅಕ್ಟೋಬರ್‌ನಲ್ಲಿ ಆಯ್ಕೆ ಮಾಡಲು ಸಿದ್ಧವಾಗಿದೆ.ಈ ಚುನಾವಣೆಯಲ್ಲಿ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಮತ್ತು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ ಸ್ಪರ್ಧಿಸಲಿದ್ದಾರೆ ಎಂದು ಊಹಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸೋಮವಾರ ಶಶಿ ತರೂರ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದು,‘ಚುನಾವಣೆಯು ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಯಲಿದೆ. ಸ್ಪರ್ಧಿಸಲು ಬಯಸುವ ಯಾರಾದರೂ ತಮ್ಮ ನಾಮಪತ್ರವನ್ನು ಸಲ್ಲಿಸಬಹುದು” ಎಂದು ಹೇಳಿದ್ದಾರೆ.

“ಇಡೀ ಪಕ್ಷ ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಗೊಳಿಸುವಲ್ಲಿ ತಲ್ಲೀನವಾಗಿದೆ. ಹಾಗಿದ್ದರೂ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಯಾವುದೇ ಸದಸ್ಯರಿಗೆ ಸ್ವಾಗತವಿದೆ ಎಂದು ಪುನರುಚ್ಚರಿಸುವುದು ಮುಖ್ಯವಾಗಿದೆ. ಇದು ಪ್ರಜಾಸತ್ತಾತ್ಮಕ ಮತ್ತು ಪಾರದರ್ಶಕ ಪ್ರಕ್ರಿಯೆ. ಸ್ಪರ್ಧಿಸಲು ಯಾರೊಬ್ಬರ, ಅದರಲ್ಲೂ ವಿಶೇಷವಾಗಿ ಪಕ್ಷದ ನಾಯಕತ್ವದ ಒಪ್ಪಿಗೆಯ ಅಗತ್ಯವಿಲ್ಲ” ಎಂದು ಜೈರಾಮ್ ರಮೇಶ್‌ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಬಂಗಾರಪೇಟೆ: ಕಾಂಗ್ರೆಸ್ ಒಳಜಗಳದ ಲಾಭ ಪಡೆಯಲು ಜೆಡಿಎಸ್-ಬಿಜೆಪಿ ಪೈಪೋಟಿ

ಈ ಮಧ್ಯೆ, ರಾಹುಲ್ ಗಾಂಧಿ ಅವರೇ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಲಿ ಎಂದು ಪಕ್ಷದ ಹಲವಾರು ರಾಜ್ಯ ಘಟಕಗಳು ಮನವಿ ಮಾಡಿದೆ. ಇದೇ ಸಮಯದಲ್ಲಿ ಶಶಿ ತರೂರ್ ಮತ್ತು ಅಶೋಕ್‌ ಗೆಹ್ಲೋಟ್ ಅವರ ಹೆಸರುಗಳು ಹೊರಹೊಮ್ಮಿವೆ. ರಾಹುಲ್ ಗಾಂಧಿ ಅವರೇ ಅಧ್ಯಕ್ಷರಾಗಲಿ ಎಂಬ ನಿರ್ಣಯವನ್ನು ಅಶೋಕ್ ಗೆಹ್ಲೋಟ್‌ ಕೂಡ ರಾಜಸ್ಥಾನದಲ್ಲಿ ಬೆಂಬಲಿಸಿದ್ದಾರೆ. ಆದರೆ, ಈ ವಿಚಾರದಲ್ಲಿ ತಾನು ಸ್ಪಷ್ಟ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಮುಂದಿನ ಕಾಂಗ್ರೆಸ್ ಅಧ್ಯಕ್ಷರು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಕ್ಷದ ಹಿಡಿತವನ್ನು ಪುನರುಜ್ಜೀವನಗೊಳಿಸುವುದು ಸೇರಿದಂತೆ ಹಲವು ಸವಾಲುಗಳನ್ನು ಹೊಂದಿರುತ್ತಾರೆ. ಪಕ್ಷವು ತನ್ನ ಅಧ್ಯಕ್ಷೀಯ ಚುನಾವಣೆಗೆ ಗುರುವಾರದಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...