Homeಕರ್ನಾಟಕಸೂಕ್ತ ಪರಿಹಾರ ನೀಡದೆ ಯಾರ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ: ಸುಪ್ರೀಂ

ಸೂಕ್ತ ಪರಿಹಾರ ನೀಡದೆ ಯಾರ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ: ಸುಪ್ರೀಂ

- Advertisement -
- Advertisement -

ಹೊಸದಿಲ್ಲಿ: ಆಸ್ತಿಯ ಹಕ್ಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ಮಾನವ ಹಕ್ಕು ಮತ್ತು ಸಾಂವಿಧಾನಿಕ ಹಕ್ಕು ಆಗಿದೆ. ಸೂಕ್ತ ಪರಿಹಾರವನ್ನು ನೀಡದೆ ಯಾವುದೇ ವ್ಯಕ್ತಿಯ ಆಸ್ತಿಯನ್ನು ಕಿತ್ತುಕೊಳ್ಳುವಂತಿಲ್ಲ ಎಂದು ಸುಪ್ರಿಂ ಕೋರ್ಟ್ ಗುರುವಾರ ತನ್ನ ತೀರ್ಪು ನೀಡಿದೆ.

ಕೆಲವು ಸಂದರ್ಭಗಳಲ್ಲಿ ಪರಿಹಾರ ವಿತರಣೆಯಲ್ಲಿ ವಿಳಂಬವಾಗಿದ್ದು, ಆಗ ಪರಿಹಾರದ ಧನದ ಮೊತ್ತವನ್ನು ಇತ್ತೀಚಿನ ಭೂಮಿಯ ಮಾರಾಟದ ಮೊತ್ತಕ್ಕೆ ಬದಲಾಯಿಸಬಹುದು ಎಂದು ನ್ಯಾಯಾಲಯ ಹೇಳಿದೆ.

2003ರಲ್ಲಿ ಬೆಂಗಳೂರು-ಮೈಸೂರು ಮೂಲಭೂತ ಸೌಕರ್ಯ ಕಾರಿಡಾರ್ ಯೋಜನೆಗಾಗಿ ಭೂ ಸ್ವಾಧೀನ ಪ್ರಶ್ನೆ ಕುರಿತು ಕರ್ನಾಟಕ ಉಚ್ಚ ನ್ಯಾಯಾಲಯದ ಏಕ ನ್ಯಾಯಾಧೀಶ ಪೀಠದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ವಿಭಾಗೀಯ ಪೀಠದ ನ.22,2022ರ ಆದೇಶವನ್ನು ಪ್ರಶ್ನಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ಹೊರಬಿದ್ದಿದೆ.

“ಸಂವಿಧಾನ (44ನೇ ತಿದ್ದುಪಡಿ) ಕಾಯಿದೆ, 1978ರ ಪ್ರಕಾರ ಆಸ್ತಿಯ ಹಕ್ಕು ಎಂಬುದು ಮೂಲಭೂತ ಹಕ್ಕು ಎಂದು ಹೇಳಿದೆ.  ಆದಾಗ್ಯೂ, ಇದು ಸಂವಿಧಾನದ 300-ಎ ವಿಧಿಯ ಅಡಿಯಲ್ಲಿ ಸಾಂವಿಧಾನಿಕ ಹಕ್ಕಾಗಿದೆ.  ಸಂವಿಧಾನದ 300-ಎ ವಿಧಿಯು ಯಾವುದೇ ವ್ಯಕ್ತಿ ತನ್ನ ಆಸ್ತಿಯಿಂದ ವಂಚಿತರಾಗಬಾರದು ಎಂದು ಹೇಳುತ್ತದೆ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ಪೀಠವು ತನ್ನ ತೀರ್ಪಿನಲ್ಲಿ ಹೇಳಿದೆ.

ತಮಗೆ ಪರಿಹಾರ ನೀಡಲಾಗಿಲ್ಲ ಎಂದು ರೈತರು ಸಲ್ಲಿಸಿದ್ದ ಅರ್ಜಿಯ ಕುರಿತು ವಿಶೇಷ ಭೂ ಸ್ವಾಧೀನಾಧಿಕಾರಿಗಳು ಎಪ್ರಿಲ್ 22, 2019ರ ಆದೇಶದ ಮೂಲಕ ಭೂಸ್ವಾಧೀನಕ್ಕೆ ಪೂರ್ವಭಾವಿ ಅಧಿಸೂಚನೆಯ ದಿನಾಂಕವನ್ನು ಜ.29,2003ರಿಂದ 2011ಕ್ಕೆ ಮುಂದೂಡಲು ನಿರ್ಧರಿಸಿದ್ದರು ಮತ್ತು ಆ ವರ್ಷದ ಭೂಮಿಯ ದರಗಳನ್ನು ಆದೇಶಿಸಿದ್ದರು. ಇದರಂತೆ 11 ಎಕರೆ 1.25 ಗುಂಟೆ ಜಮೀನಿಗೆ 32,69,45,789 ರೂ.ಮೌಲ್ಯವನ್ನು ನಿಗದಿಗೊಳಿಸಲಾಗಿತ್ತು.

ಯೋಜನೆಯ ಪ್ರತಿಪಾದಕರು ಇದನ್ನು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಮೌಲ್ಯ ನಿಗದಿಯನ್ನು ರದ್ದುಗೊಳಿಸಿದ್ದ ಏಕ ನ್ಯಾಯಾಧೀಶ ಪೀಠವು ಕಾನೂನಿಗೆ ಅನುಗುಣವಾಗಿ ಹೊಸದಾಗಿ ಮೌಲ್ಯವನ್ನು ನಿಗದಿಗೊಳಿಸುವಂತೆ ನಿರ್ದೇಶನ ನೀಡಿತ್ತು. ಇದರ ವಿರುದ್ಧ ಮೇಲ್ಮನವಿಯನ್ನು ವಿಭಾಗೀಯ ಪೀಠವು ವಜಾಗೊಳಿಸಿತ್ತು ಮತ್ತು ಭೂ ಮಾಲಿಕರು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು.

2003ರ ಮಾರುಕಟ್ಟೆ ದರದಲ್ಲಿ ಪರಿಹಾರವನ್ನು ಅನುಮತಿಸಿದರೆ ಅದು ನ್ಯಾಯದ ಅಪಹಾಸ್ಯಕ್ಕೆ ಅನುಮತಿ ನೀಡಿದಂತಾಗುತ್ತದೆ ಹಾಗೂ ವಿಧಿ 300-ಎ ಅಡಿ ಸಾಂವಿಧಾನಿಕ ನಿಬಂಧನೆಗಳ ಅಣಕವಾಗುತ್ತದೆ ಎಂದು ತನ್ನ ತೀರ್ಪಿನಲ್ಲಿ ಹೇಳಿರುವ ಸರ್ವೋಚ್ಚ ನ್ಯಾಯಾಲಯವು, ಮೇಲ್ಮನವಿದಾರರಿಗೆ ನೀಡಬೇಕಾದ ಪರಿಹಾರವನ್ನು ಎಪ್ರಿಲ್ 22,2019ರ ಮಾರುಕಟ್ಟೆ ದರದ ಆಧಾರದಲ್ಲಿ ನಿಗದಿಗೊಳಿಸುವಂತೆ ವಿಶೇಷ ಭೂಸ್ವಾಧೀನಾಧಿಕಾರಿಗೆ ಆದೇಶಿಸಿದೆ. ಮೇಲ್ಮನವಿದಾರರು 1894ರ ಭೂಸ್ವಾಧೀನ ಕಾಯ್ದೆಯಡಿ ತಮಗೆ ಲಭ್ಯವಿರುವ ಎಲ್ಲ ಶಾಸನಬದ್ಧ ಪ್ರಯೋಜನಗಳಿಗೂ ಅರ್ಹರಾಗಿರುತ್ತಾರೆ ಎಂದೂ ಅದು ಹೇಳಿದೆ.

ಸಂಚಾರ ನಿಯಂತ್ರಕರಾಗಿ 39 ಲಿಂಗತ್ವ ಅಲ್ಪಸಂಖ್ಯಾತರ ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...