Homeಮುಖಪುಟ'ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ' - ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

‘ಆನ್‌ಲೈನ್ ತರಗತಿ ಮತ್ತು ಆನ್‌ಲೈನ್ ಶಿಕ್ಷಣ ಬೇಡ’ – ಸಾಮಾನ್ಯ ಖಾಸಗಿ ಶಾಲೆಗಳ ಮನವಿ!

ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ

- Advertisement -
- Advertisement -

ಕೊರೊನ ಸೋಂಕಿನಿಂದ ಮಕ್ಕಳನ್ನು ದೂರವಿಡಲು ರಾಜ್ಯ ಸರ್ಕಾರ ಆನ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡಿದೆ. ಹಲವು ತಿಂಗಳುಗಳಿಂದಲೂ ಎಲ್ಲಾ ಹಂತದ ಮಕ್ಕಳಿಗೂ ಆನ್‌ಲೈನ್‌ನಲ್ಲಿ ಪಾಠ ಪ್ರವಚನ ಮಾಡಲಾಗುತ್ತಿದೆ. ಇದು ಪರಿಣಾಮಕಾರಿಯಾಗಿ ಮಕ್ಕಳಿಗೆ ತಲುಪುತ್ತಿದೆಯೇ? ಆನ್‌ಲೈನ್‌ ಪಾಠವನ್ನು ಮಕ್ಕಳು ಗ್ರಹಿಸುತ್ತಿದ್ದಾರೆಯೇ ಎಂಬ ಗೊಂದಲಕ್ಕೆ ಸರ್ಕಾರ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ನೇರ ಕಲಿಕೆಯ ಮಕ್ಕಳಿಗೇ ಪಾಠ ಅರ್ಥವಾಗುವುದಿಲ್ಲ. ಇನ್ನು ಆನ್‌ಲೈನ್‌ ಶಿಕ್ಷಣ ಹೇಗೆ ಅರ್ಥವಾದೀತು! ಹಾಗಾಗಿಯೇ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಬಿಇಒ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಹಲವು ಮನವಿಗಳನ್ನು ಸಲ್ಲಿಸಿ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಆಗ್ರಹಿಸಿವೆ.

ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಹಂತದವರೆಗೆ ಆನ್‌ಲೈನ್‌ನಲ್ಲಿ ಪಾಠ ಪ್ರವಚನಕ್ಕೆ ಅವಕಾಶ ನೀಡಿದೆ. ಆನ್‌ಲೈನ್‌ನಲ್ಲಿ ವಿದ್ಯಾರ್ಥಿಗಳು ಭಾಗಿಯಾದರೂ ಅವರ ಗೊಂದಲಗಳು ಮತ್ತು ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಆನ್‌ಲೈನ್‌ನಲ್ಲಿ ಪಾಠ ಹೇಗೆ ಮಾಡಬೇಕೆಂಬ ಬಗ್ಗೆ ತರಬೇತಿ ಪಡೆದಿಲ್ಲ. ಹಾಗಾಗಿ ಮಕ್ಕಳಿಗೆ ವಿಷಯ ಅರ್ಥ ಮಾಡಿಸುವುದು ಕಷ್ಟವೇ ಆಗಿದೆ.  ಶಿಕ್ಷಕ ವರ್ಗವೂ ಇದನ್ನು ಅಲ್ಲಗೆಳೆಯುತ್ತಿಲ್ಲ. ವಿದ್ಯಾರ್ಥಿಗಳಿಂದ “ಪಾಠ ಅರ್ಥವಾಗುತ್ತಿಲ್ಲ, ನಮಗೆ ಉದ್ಭವಿಸುವ ಸಮಸ್ಯೆಗಳಿಗೆ ಪರಿಹಾರವೂ ಸಿಗುತ್ತಿಲ್ಲ, ಹೆಚ್ಚು ಹೊತ್ತು ಕೇಳಲು ಆಗುತ್ತಿಲ್ಲ” ಎನ್ನುವ ದೂರು ಸಾಮಾನ್ಯ.

ಇದನ್ನೂ ಓದಿ: ‌ನೆಟ್‌ವರ್ಕ್ ಸಮಸ್ಯೆ: ಆನ್‌ಲೈನ್ ತರಗತಿಗಾಗಿ 5 ಕಿಮೀ ನಡೆಯುವ ವಿದ್ಯಾರ್ಥಿಗಳು!

ಆದರೆ ಆನ್‌ಲೈನ್‌ ಶಿಕ್ಷಣ ನೀಡಬೇಕೇ ಅಥವಾ ಆಫ್‌ಲೈನ್ ಶಿಕ್ಷಣ ಕೊಡಬೇಕೇ ಎಂಬ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ. ಆ ಗೊಂದಲವನ್ನು ಮಕ್ಕಳ ಮೇಲೆ ಮತ್ತು ಶಿಕ್ಷಕ ವೃಂದದ ಮೇಲೆಯೂ ವರ್ಗಾಯಿಸಿದೆ. ಆದ್ದರಿಂದ ಗೊಂದಲದ ಸನ್ನಿವೇಶವೇ ಮುಂದುವರಿದಿದೆ. ಉನ್ನತ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಿಬ್ಬರೂ ಕೂಡ ಸ್ಪಷ್ಟ ತೀರ್ಮಾನಗಳನ್ನು ಕೈಗೊಳ್ಳಲು ಇದುವರೆಗೆ ಸಾಧ್ಯವಾಗಿಲ್ಲ. ದೊಡ್ಡದೊಡ್ಡ ಶಿಕ್ಷಣ ಸಂಸ್ಥೆಗಳ ಮಾಲಿಕರು ಮನೆಪಾಠವನ್ನು ಬೆಂಬಲಿಸುವ ಶಿಕ್ಷಣ ತಜ್ಞರಿಂದ ಸಲಹೆಗಳನ್ನು ಕೇಳುತ್ತಿದ್ದು, ಬಹುತ್ವವನ್ನು ಪ್ರತಿಪಾದಿಸುವ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳನ್ನು ನಿರ್ಲಕ್ಷಿಸಿರುವುದೇ ಈ ಗೊಂದಲಕ್ಕೆ ಕಾರಣ ಎನ್ನಲಾಗುತ್ತಿದೆ.

ಗೊಂದಲ ಸನ್ನಿವೇಶವನ್ನೇ ಬಂಡವಾಳ ಮಾಡಿಕೊಂಡಿರುವ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಮಕ್ಕಳಿಂದ ಮೊದಲ ಕಂತಿನ ಹಣವನ್ನು ಕಟ್ಟಿಸಿಕೊಂಡಿವೆ. ಈಗ ಎರಡನೇ ಕಂತಿನ ಹಣವನ್ನು ನೀಡುವಂತೆ ಮಕ್ಕಳ ಪೋಷಕರ ಮೇಲೆ ಒತ್ತಡ ಹೇರುತ್ತಿವೆ. ಎರಡನೇ ಕಂತಿನ ಹಣ ನೀಡಿಲ್ಲದ ಮಕ್ಕಳಿಗೆ (ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢಶಾಲೆ ಹಂತದ) ಆನ್‌ಲೈನ್‌ ಪಾಠದ ವಿಡಿಯೋಗಳನ್ನು ಹಾಕುವುದನ್ನು ನಿಲ್ಲಿಸಿದೆ. “ಹಣ ಕಟ್ಟಿ, ಪಾಠದ ವಿಡಿಯೋಗಳನ್ನು ಹಾಕುತ್ತೇವೆ” ಎಂದು ಮುಖ್ಯಶಿಕ್ಷಕರು ಮಕ್ಕಳ ಪೋಷಕರ ಮೊಬೈಲ್‌ಗಳಿಗೆ ಮೆಸೇಜ್ ಹಾಕಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪವೂ ವ್ಯಾಪಕವಾಗಿ ಕೇಳಿಬರುತ್ತಿದೆ.

ಇದನ್ನೂ ಓದಿ: 3 ತಿಂಗಳಲ್ಲಿ 350 ಆನ್‌ಲೈನ್ ಕೋರ್ಸ್; ವಿಶ್ವದಾಖಲೆ ಮಾಡಿದ ಆರತಿ ರಂಗನಾಥ್!

ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರ ಮೇಲೆ ಶುಲ್ಕದ ಹಣಕ್ಕಾಗಿ ಒತ್ತಡ ಹೇರುತ್ತಿದ್ದರೆ, ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ ಶಿಕ್ಷಣವನ್ನೇ ನಿಲ್ಲಿಸಿಬಿಡುವಂತೆ ಬಿಇಒ ಮತ್ತು ಡಿಡಿಪಿಐಗಳನ್ನು ಆಗ್ರಹಿಸಿವೆ. ಆನ್‌ಲೈನ್‌ ಶಿಕ್ಷಣ ಮಕ್ಕಳಿಗೆ ಅರ್ಥವಾಗುವುದಿಲ್ಲ. ಹಾಗಾಗಿ ಅದು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ. ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಆನ್‌ಲೈನ್‌ ಪಾಠ ಮಾಡುವುದರಿಂದ ಅನುಕೂಲ ಇಲ್ಲ. ಮಕ್ಕಳು ಹೆಚ್ಚು ಹೊತ್ತು ಮೊಬೈಲ್ ಹಿಡಿದು ಪಾಠ ಕೇಳಲು ಆಗುವುದಿಲ್ಲ. ವಿದ್ಯಾರ್ಥಿಗಳ ಮಿದುಳಿನ ಮೇಲೆ ಗಾಢ ಪರಿಣಾಮ ಬೀರುತ್ತದೆ. ಕಣ್ಣಿನ ಮೇಲೆ ಪರಿಣಾಮ ಬೀರಿ ನೋವು ಬರುತ್ತದೆ. ಫಲಿತಾಂಶದಲ್ಲಿ ಕಡಿಮೆಯಾದರೆ ಯಾರು ಹೊಣೆ? ಕಡಿಮೆ ಫಲಿತಾಂಶ ಬಂದರೆ ಅಂತಹ ಶಾಲೆಗಳನ್ನು ಮುಚ್ಚುವ ಭೀತಿಯೂ ಇದೆ.

ಕೋವಿಡ್ ಅವಧಿಯಲ್ಲಿ ಆನ್‌ಲೈನ್‌ ಶಿಕ್ಷಣ ಪಡೆಯುವ ಮಕ್ಕಳು ಸರಿಯಾಗಿ ಗ್ರಹಿಸಲು ಸಾಧ್ಯವಾಗದೆ ಕಡಿಮೆ ಅಂಕಗಳನ್ನು ಪಡೆಯುವ ಸಾಧ್ಯತೆ ಇದೆ. ಪಿಯುಸಿ ನಂತರದ ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್‌ನಂತಹ ಕೋರ್ಸ್‌ಗಳಿಗೆ ಹೋಗಲು ತಡೆದಂತೆ ಆಗುತ್ತದೆ. ಕಡಿಮೆ ಅಂಕ ಗಳಿಸಿದವರ ಮುಂದಿನ ಭವಿಷ್ಯ ಮಂಕಾಗಲಿದೆ. ವಿದ್ಯಾರ್ಥಿಗೆ ಮುಂದಿನ ಆಯ್ಕೆ ಇಲ್ಲದಂತಾಗಿ ಶಿಕ್ಷಣವನ್ನು ಮೊಟುಕುಗೊಳಿಸಬೇಕಾದಂತಹ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ಕೇವಲ ಪ್ರತಿಷ್ಠಗಾಗಿ ಆನ್‌ಲೈನ್‌ ಶಿಕ್ಷಣದ ಮೂಲಕ ಪಾಠ ಮಾಡಿದರೆ ಅದು ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿಸಿದಂತೆಯೇ ಆಗುತ್ತದೆ. ಹಾಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಾಮಾನ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಶಿಕ್ಷಣ ಅಧಿಕಾರಿಗಳಿಗೆ ಆನ್‌ಲೈನ್‌ ಶಿಕ್ಷಣ ನಿಲ್ಲಿಸುವಂತೆ ಮನವಿ ಮಾಡಿದ್ದೇವೆ ಎನ್ನುತ್ತಾರೆ ಹನುಮಂತರಾಯಪ್ಪ.

ಇದನ್ನೂ ಓದಿ: ಶಾಲೆಗಳ ಆನ್‌ಲೈನ್‌ ತರಗತಿ ಹ್ಯಾಕ್‌ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್‌‌ ಮಾಡಿದ ದುಷ್ಕರ್ಮಿಗಳು

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದ ಮಾತು ದೂರವೇ ಉಳಿದಿದೆ. ನೆಟ್‌ವರ್ಕ್ ಮತ್ತು ಸಿಗ್ನಲ್ ಸಿಗದೇ ಇರುವ ಸಮಸ್ಯೆಯಿಂದ ಪಾಠ ಕೇಳಲು ಆಗುವುದಿಲ್ಲ. ನಗರ ಪ್ರದೇಶದ ಕೆಲವೇ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಅನುಕೂಲವಾಗಬಹುದು. ಆದರೆ ಆ ಪಾಠವನ್ನು ಅರ್ಥ ಮಾಡಿಕೊಳ್ಳುವ ಮಂದಿ ಕಡಿಮೆ. ಗ್ರಾಮೀಣ ಬಡ ವಿದ್ಯಾರ್ಥಿಗಳು ನೇರ ತರಗತಿಗಳಿಗೆ ಬರಬೇಕೆಂದರೆ ಬಸ್ ವ್ಯವಸ್ಥೆಯೂ ಇಲ್ಲ. ಇದು ಆ ವಿದ್ಯಾರ್ಥಿಗಳು ಉಭಯ ಸಂಕಟಕ್ಕೆ ಸಿಲುಕುವಂತೆ ಮಾಡಿದೆ. ಆನ್‌ಲೈನ್‌ ವ್ಯವಸ್ಥೆ ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳಿಗೆ ಲಭ್ಯವಾದರೆ ಬಡ ಖಾಸಗಿ ಶಿಕ್ಷಣ ಸಂಸ್ಥೆಗಳ ಮಕ್ಕಳು ಶಿಕ್ಷಣದಿಂದ ದೂರವೇ ಉಳಿಯುವಂತೆ ಮಾಡಿದೆ.

ಸರ್ಕಾರಿ ಶಾಲಾ ಕಾಲೇಜುಗಳ ಸ್ಥಿತಿ ಇದಕ್ಕಿಂತ ಭಿನ್ನವಾಗೇನೂ ಇಲ್ಲ. ಬಹುತೇಕ ಮಕ್ಕಳು ಬಡ-ಮಧ್ಯಮ ವರ್ಗದ ಕುಟುಂಬದವರಾಗಿದ್ದು 4ಜಿ ಯಂತಹ ಮೊಬೈಲ್ ಖರೀದಿ ಮಾಡಲು ಶಕ್ತವಾಗಿಲ್ಲ. ಮೊಬೈಲ್ ಇದ್ದವರು ನೆಟ್‌ವೆರ್ಕ್ ಸಿಗದೆ ಸಮಸ್ಯೆ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ರೀಮಂತ ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿ ಒಂದು ಕಡೆಯಾದರೆ ಮಧ್ಯಮ ವರ್ಗದ ಖಾಸಗಿ ಶಿಕ್ಷಣ ಸಂಸ್ಥೆಗಳು ಅಸಹಾಯಕತೆಯಿಂದ ಏನೂ ತೋಚದಂತಹ ಸ್ಥಿತಿಗೆ ತಲುಪಿವೆ. ಹೀಗಾಗಿ ವಿದ್ಯಾರ್ಥಿಗಳ ಕಲಿಕೆಯ ನಡುವೆ ಭಾರೀ ಕಂದಕ ನಿರ್ಮಾಣವಾಗಲಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ವೈಜ್ಞಾನಿಕ ಶಿಕ್ಷಣ ನೀಡುವತ್ತ ದಿಟ್ಟ ನಿರ್ಧಾರ ಕೈಗೊಳ್ಳಬೇಕಾಗಿದೆ.


ಇದನ್ನೂ ಓದಿ: ಮಕ್ಕಳ ಆನ್‌ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ: ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದಯವಿಟ್ಟು ಆನ್ಲೈನ್ ಶಿಕ್ಷಣವನ್ನು ನಿಲ್ಲಿಸಿ…!!!
    ಈ ಆನ್ಲೈನ್ ತರಗತಿಯಿಂದಾಗಿ ಅನೇಕ ಮಕ್ಕಳು ದುರಭ್ಯಾಸ ಗಳಿಗೆ ಬಲಿಯಾಗುತ್ತಿದ್ದಾರೆ.! ಹಾಗೂ ಆನ್ಲೈನ್ ನಲ್ಲಿ ಪಾಠ ಕೇಳುವುದಕ್ಕಿಂತ ಅನ್ಯರ ಜೊತೆಗೆ ಚಾಟಿಂಗ್ ಮಾಡುವುದೇ ಹೆಚ್ಚು…!
    ಆನ್ಲೈನ್ ಶಿಕ್ಷಣ ವ್ಯವಸ್ಥೆ ಯಿಂದಾಗಿ ಮಕ್ಕಳು ಹಾಳಾಗುತ್ತಿದ್ದಾರೆ, ಆನ್ಲೈನ್ ಶಿಕ್ಷಣ ದಿಂದ ಯಾವುದೇ ಪ್ರಯೋಜನ ಇಲ್ಲ, ನಿಜವಾಗಿಯೂ ನಮ್ಮ ರಾಜ್ಯದ ಈಗಿನ ಶಿಕ್ಷಣ ನೀತಿಯೇ ಮಕ್ಕಳನ್ನು ಹಾಳು ಮಾಡುತ್ತಿದೆ…!!!
    (ಆನ್ಲೈನ್ ಶಿಕ್ಷಣ ಸರಿ ಅನಿಸುವುದೇ ಆದರೆ ನನ್ನ ನಂಬರ್ ಗೆ ಕರೆ ಮಾಡಿ 8496092478)
    :- ಅನಿಲ್ ಕುಮಾರ್,
    ಹಂಗಳ ಗ್ರಾಮ, ಗುಂಡ್ಲುಪೇಟೆ ತಾಲೂಕು

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...