Homeಮುಖಪುಟಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಕೋವಿಡ್ ಸಂಬಂಧಿತ ನಿರ್ಬಂಧ ಹೇರುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಹೆಚ್ಚಿನ ಕೋವಿಡ್ ಸೋಂಕು ಹೊಂದಿರುವ ದೇಶಗಳ ವಿಮಾನಯಾನ ನಿಷೇಧ ಸೇರಿದಂತೆ ಕೋವಿಡ್-ಸಂಬಂಧಿತ ನಿರ್ಬಂಧಗಳನ್ನು ವಿಧಿಸಲು ಭಾರತ ಇನ್ನೂ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ಹೇಳಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

“ಯಾವುದೇ ರೀತಿಯ ಕಠಿಣ ಕ್ರಮಗಳನ್ನು ವಿಧಿಸುವಂತೆ ದೇಶದ ಪರಿಸ್ಥಿತಿ ಇಲ್ಲ” ಎಂದು ಸ್ಪಷ್ಟಪಡಿಸಿರುವ ಅವರು, “ನಾವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ. ಜನರು ಹೆಚ್ಚು ಜಾಗೃತರಾಗಿದ್ದಾರೆ. ತಮ್ಮದೇ ಆದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಇದು ಸಂಪೂರ್ಣವಾಗಿ ಅಗತ್ಯವಿಲ್ಲದಿದ್ದಾಗ ಭಯವನ್ನು ಉಂಟುಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದಿದ್ದಾರೆ.

ನೆರೆಯ ಚೀನಾ ದೇಶದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಾಗ ಕೇಂದ್ರ ಸಚಿವರ ಹೇಳಿಕೆ ಹೊರಬಿದ್ದಿದೆ.

ದೇಶದ ಎಲ್ಲಾ ಪ್ರಮುಖ ಆಸ್ಪತ್ರೆಗಳಲ್ಲಿ ಅಗತ್ಯ ಸಿಬ್ಬಂದಿ, ಆಮ್ಲಜನಕ ಪೂರೈಕೆ, ಹಾಸಿಗೆ ಲಭ್ಯತೆ, ವೆಂಟಿಲೇಟರ್‌ಗಳ ಪ್ರಮಾಣ ಮತ್ತು ಔಷಧಿಗಳ ಸಾಮರ್ಥ್ಯಗಳನ್ನು ಪರೀಕ್ಷಿಸಲು ಆರೋಗ್ಯ ಸಚಿವಾಲಯವು ಮಂಗಳವಾರ ಡ್ರಿಲ್ ನಡೆಸಲಿದೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ.

“ಇದು ಯುದ್ಧದ ತಯಾರಿಯಂತೆ. ಅದಕ್ಕಾಗಿ ನಾವು ಚೆನ್ನಾಗಿ ಸಿದ್ಧರಾಗಿರಬೇಕು” ಎಂದಿದ್ದಾರೆ ಮಾಂಡವಿಯಾ. “ಪೂರ್ವ ಸಿದ್ಧತೆಯನ್ನು ಪರೀಕ್ಷಿಸಲು ಡ್ರಿಲ್ ಹಮ್ಮಿಕೊಂಡಿರುವುದು ಪರಿಣಾಮಕಾರಿ ಮಾರ್ಗವಾಗಿದೆ. ಗಮನಿಸಬೇಕಾದ ಅಂಶವೆಂದರೆ ಭಯಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ರಾಜ್ಯದಲ್ಲಿ ಮೀಸಲಾತಿ ಹೋರಾಟ ಪರ್ವ: ವಿವಿಧ ಸಮುದಾಯಗಳ ಬೇಡಿಕೆಗಳೇನು?

‌ಇದರ ನಡುವೆ ಕೋವಿಡ್ -19ರ ಅಲೆಯನ್ನು ತಡೆಗಟ್ಟಲು ‘ಟೆಸ್ಟ್-ಟ್ರ್ಯಾಕ್-ಟ್ರೀಟ್-ವ್ಯಾಕ್ಸಿನೇಷನ್’ ವಿಧಾನದ ಮೇಲೆ ಕೇಂದ್ರೀಕರಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆರೋಗ್ಯ ಸಚಿವಾಲಯ ತಿಳಿಸಿದೆ ಎಂದು ‘ಎಎನ್‌ಐ’ ವರದಿ ಮಾಡಿದೆ.

ಜೀನೋಮ್ ಸೀಕ್ವೆನ್ಸಿಂಗ್‌ (ಒಂದು ನಿರ್ದಿಷ್ಟ ಜೀವಿ ಅಥವಾ ಜೀವಕೋಶದ ಪ್ರಕಾರದ ಸಂಪೂರ್ಣ ಆನುವಂಶಿಕ ರಚನೆಯನ್ನು ನಿರ್ಧರಿಸಲು ಬಳಸಲಾಗುವ ಪ್ರಯೋಗಾಲಯ ವಿಧಾನ) ಪರೀಕ್ಷೆಗಾಗಿ ಪಾಸಿಟಿವ್‌ ಬಂದ ಮಾದರಿಗಳನ್ನು ಕಳುಹಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೋರಿದೆ. ಇದರಿಂದಾಗಿ ಹೊಸ ರೂಪಾಂತರ ತಳಿಗಳನ್ನು ಸಮಯಕ್ಕೆ ಸರಿಯಾಗಿ ಟ್ರ್ಯಾಕ್ ಮಾಡಲು ಸಾಧ್ಯವಾಗುತ್ತದೆ.

“ಮುಂಬರುವ ಹಬ್ಬಗಳಲ್ಲಿ ಮುಂಜಾಗ್ರತೆ ವಹಿಸಬೇಕು. ಕಾರ್ಯಕ್ರಮ ಆಯೋಜಕರು, ವ್ಯಾಪಾರಿ ವರ್ಗ, ಮಾರುಕಟ್ಟೆ ಸಂಘಗಳು- ಜನಸಂದಣಿಯನ್ನು ತಪ್ಪಿಸಲು ಕ್ರಮ ಜರುಗಿಸಬೇಕು. ವಿಶೇಷವಾಗಿ ಒಳಾಂಗಣ ವ್ಯವಸ್ಥೆಯಲ್ಲಿ ಮಾಸ್ಕ್‌ಗಳನ್ನು ಧರಿಸುವುದು ಅತ್ಯಗತ್ಯ” ಎಂದು ಸಚಿವಾಲಯ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...