Homeಮುಖಪುಟಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

ಪಿಪಿಇಗಳು ಸಾಲುತ್ತಿಲ್ಲ ಎನ್ನುತ್ತಿದೆ ಸರ್ವೇ: ಹಲವು ವೈದ್ಯರಿಗೆ ಪಿಪಿಇ ಮರುಬಳಕೆ ಅನಿವಾರ್ಯ!

- Advertisement -
- Advertisement -

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ವಯಕ್ತಿಕ ಸುರಕ್ಷತಾ ಸಾಧನ (ಪಿಪಿಇ) ಕಿಟ್‌ಗಳು ಸಾಕಾಗುತ್ತಿಲ್ಲ ಮತ್ತು ಸಿಗುತ್ತಿಲ್ಲ ಎಂದು ಮೂವರು ವೈದ್ಯರು ನಡೆಸಿದ ಆನ್‌ಲೈನ್ ಸಮೀಕ್ಷೆಯು ಒತ್ತಿ ಹೇಳಿದೆ.

ದೇಶದೆಲ್ಲೆಡೆ ನೂರಾರು ವೈದ್ಯರು ಸಹ ಕೊರೊನಾಗೆ ತುತ್ತಾಗುತ್ತಿರುವ ಈ ಸಂದರ್ಭದಲ್ಲಿ ಈ ಸಮೀಕ್ಷೆ ಮಹತ್ವವಿದ್ದು, ಸರ್ಕಾರ ಕೂಡಲೇ ವೈದ್ಯರ ನೆರವಿಗೆ ಧಾವಿಸಬೇಕು. ಅಗತ್ಯ ಪಿಪಿಇಗಳನ್ನು ಒದಗಿಸಬೇಕು ಎಂಬ ಒತ್ತಾಯ ಜೋರಾಗಿದೆ.

ವೈಧ್ಯಕೀಯ ವೃತ್ತಿಪರರಾದ ಡಾ.ಸಾವಿತ್ರಿ ದೇವಿ, ಡಾ.ಶ್ರೀನಿಧಿ ದತ್ತಾರ್ ಮತ್ತು ಡಾ.ಸುಭಾಶ್ರಿ ಬಿಯವರು ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 392 ಮಂದಿ ಪ್ರತಿಕ್ರಿಯಿಸಿದ್ದಾರೆ. ಇವರಲ್ಲಿ 155 ವೈದ್ಯರು, 103 ಸ್ನಾತಕೋತ್ತರ ನಿವಾಸಿಗಳು ಮತ್ತು ಇಂಟರ್ನಿಗಳು, 34 ದಾದಿಯರು ಮತ್ತು 27 ಸಮುದಾಯ ಆರೋಗ್ಯ ಕಾರ್ಯಕರ್ತರು ಸೇರಿದ್ದಾರೆ. ಅರ್ಧಕ್ಕಿಂತ ಹೆಚ್ಚು (58.4%) ಜನರು ಸಾರ್ವಜನಿಕ ವಲಯದ ಸೌಲಭ್ಯಗಳಲ್ಲಿ ಕೆಲಸ ಮಾಡಿದ್ದಾರೆ. ಒಪಿಡಿ (31.9%) ನಲ್ಲಿ ಕೆಲಸ ಮಾಡುವವರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಎನ್ 95 ಮಾಸ್ಕ್‌ಗಳು ಲಭ್ಯವಿಲ್ಲ ಎಂದು ತಿಳಿಸಿದ್ದಾರೆ. ಕೇವಲ 20% ಜನರು ಮಾತ್ರ ತಮಗೆ ಸಾಕಷ್ಟು ಸಂಖ್ಯೆಯ ಮಾಸ್ಕ್‌ಗಳು ಸಿಗುತ್ತಿವೆ ಎಂದರೆ ಉಳಿದ 80% ಜನ ಮಾಸ್ಕ್ ಲಭ್ಯತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ವೇಯಲ್ಲಿ ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (392 ರಲ್ಲಿ 147, 37.5%) ಜನರು ತಮ್ಮ ಪಿಪಿಇ ಅನ್ನು ಮರುಬಳಕೆ ಮಾಡಿದ್ದಾರೆಂಬ ಆಘಾತಕಾರಿ ವರದಿ ಹೊರಬಿದ್ದಿದೆ. ಪಿಪಿಇ ಇಲ್ಲದೆ ಆಸ್ಪತ್ರೆಗೆ ಹೋಗುವುದಕ್ಕಿಂತ ಹಳೆಯದನ್ನೇ ಧರಿಸಿ ಹೋಗುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ. ಕೆಲವರು ಬಿಸಿಲು ಮತ್ತು ಗಾಳಿಯಲ್ಲಿ ಒಣಗಿಸಿದ ಮರುಬಳಕೆ ಮಾಡಲಾಗುತ್ತದೆ ಎಂದಿದ್ದಾರೆ.”

ಪಿಪಿಇ ಮರುಬಳಕೆಯನ್ನು ಡಬ್ಲ್ಯುಎಚ್‌ಒ “ಪಿಪಿಇಯ ಗಂಭೀರ ಕೊರತೆ ಇರುವಲ್ಲಿ ಅಥವಾ ಪಿಪಿಇ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಮಾತ್ರ ಅಳವಡಿಸಿಕೊಳ್ಳಬೇಕಾದ, ಬಿಕ್ಕಟ್ಟಿನ ಸಂದರ್ಭಗಳಲ್ಲಿ ಕೊನೆಯ ತಾತ್ಕಾಲಿಕ ಉಪಾಯ ಕ್ರಮಗಳು” ಎಂದು ಕರೆದಿದೆ. ಆದರೂ, “ಯಾವುದೇ ವಸ್ತುವಿನ ಮರುಬಳಕೆ ಮಾಡುವುದು ಅಸಮರ್ಪಕ ಮತ್ತು ಅಸುರಕ್ಷಿತವೆಂದು ಪರಿಗಣಿಸಲಾಗುತ್ತದೆ” ಎಂದು ಅದು ಎಚ್ಚರಿಕೆ ನೀಡಿದೆ.

ಹೆಚ್ಚಿನ ಪ್ರತಿಸ್ಪಂದಕರು (392 ರಲ್ಲಿ 345, 88%) ತಮ್ಮ ಕೆಲಸಕ್ಕೆ ಅನುಗುಣವಾಗಿ ಹೇಗೆ ಪಿಪಿಇ ಬಳಸಬೇಕೆಂಬ ತಿಳುವಳಿಕೆ ಇಲ್ಲ ಎಂದು ಅಧ್ಯಯನ ಎತ್ತಿ ತೋರಿಸಿದೆ. “ಅರ್ಧದಷ್ಟು ಜನರು ಪಿಪಿಇ ಬಳಕೆಯ ಬಗ್ಗೆ ಯಾವುದೇ ತರಬೇತಿಯನ್ನು ಪಡೆದಿಲ್ಲ ಎಂದು ವರದಿ ಮಾಡಿದ್ದಾರೆ, ಐದರಲ್ಲಿ ಒಬ್ಬರು ತಾವು ಸ್ವಯಂಕಲಿತಿದ್ದಾರೆ ಅಥವಾ ಗೆಳೆಯರು ಮತ್ತು ಸಹೋದ್ಯೋಗಿಗಳು ಅನೌಪಚಾರಿಕವಾಗಿ ಕಲಿಸಿದ್ದಾರೆ ಎಂದು ವರದಿ ಮಾಡಿದೆ.”

ತಾವು ಬಳಸಿದ ಪಿಪಿಈ ಸುರಕ್ಷಿತವಾಗಿತ್ತು ಎಂಬ ಬಗ್ಗೆ ನಿಮಗೆ ನಂಬಿಕೆಯಿದೆಯೇ ಎಂಬ ಪ್ರಶ್ನೆಗೆ ಅರ್ಧಕ್ಕಿಂತ ಹೆಚ್ಚು ಜನ ಸಂದೇಹ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪಿಪಿಇ ವಿತರಣೆಯ ಪ್ರಕ್ರಿಯೆಯಲ್ಲಿ ತಾರತಮ್ಯವಿದೆ ಎಂದು ಪ್ರತಿಕ್ರಿಯಿಸಿದವರಲ್ಲಿ ಮೂರನೇ ಒಂದು ಭಾಗದಷ್ಟು (37.24%) ಅಭಿಪ್ರಾಯಪಟ್ಟಿದ್ದಾರೆ.

ಹೀಗಾಗಿ ಸರ್ಕಾರ ಈ ವಿಚಾರದಲ್ಲಿ ಗಂಭೀರತೆಯನ್ನು ಪ್ರದರ್ಶಿಸಬೇಕಿದ್ದು, ಜೀವ ರಕ್ಷಿಸುವ ವೈದ್ಯರ, ಆರೋಗ್ಯ ಕಾರ್ಯಕರ್ತರ ಜೀವ ರಕ್ಷಣೆಗೆ ಮುಂದಾಗಬೇಕಿದೆ.


ಇದನ್ನೂ ಓದಿ: ಕೊರೊನಾಗೆ ಪತಂಜಲಿ ಔಷಧಿ: ಜಾಹೀರಾತು ನಿಲ್ಲಿಸುವಂತೆ ಬಾಬಾ ರಾಮ್‌ದೇವ್‌ಗೆ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...