Homeಮುಖಪುಟಜೆಡಿಎಸ್ ಜೊತೆ ಹೊಂದಾಣಿಕೆಯ ಪ್ರಸ್ತಾಪವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಜೆಡಿಎಸ್ ಜೊತೆ ಹೊಂದಾಣಿಕೆಯ ಪ್ರಸ್ತಾಪವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

- Advertisement -
- Advertisement -

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಯಾವುದೇ ಪ್ರಸ್ತಾಪ ನಮ್ಮ ಪಕ್ಷದ ಮುಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ನಾವು ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ ಅಷ್ಟೇ. ಆದರೆ ಯಾವುದೇ ಪಕ್ಷದೊಂದಿಗೆ ಮೈತ್ರಿ ವಿಚಾರ ಇನ್ನೂ ನಿರ್ಧಾರವಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಮಂಗಳೂರಿನ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ ಎನ್ನುವ ಊಹಾಪೋಹಗಳು ಕುರಿತು ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಆ ವಿಚಾರದ ಕುರಿತು ರಾಷ್ಟ್ರೀಯ ನಾಯಕರ ಜತೆ ಚರ್ಚೆಗಳಾಗಿವೆ. ಚರ್ಚೆಯ ತೀರ್ಮಾನಗಳನ್ನು ರಾಷ್ಟ್ರೀಯ ನಾಯಕರೇ ನೀಡಲಿದ್ದಾರೆ. ಬಿಜೆಪಿ ಪಕ್ಷದ ಒಳಗಿನ ಯಾವುದೇ ವೈಯಕ್ತಿಕ ವಿಚಾರಗಳನ್ನು ಬಹಿರಂಗವಾಗಿ ಮಾತನಾಡಲು ಬಯಸುವುದಿಲ್ಲ” ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಯಾವುದೇ ಗೊಂದಲ ಇರಲಿಲ್ಲ, ಎಲ್ಲ ನಾಯಕರು ಒಟ್ಟಾಗಿಯೇ ಕೆಲಸ ಮಾಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧಿಸಿದ ಕಾರಣದಿಂದ ಫಲಿತಾಂಶದಲ್ಲಿ ವ್ಯತ್ಯಾಸಗಳಾಗಿವೆ. ಅವರು ಬಿಜೆಪಿಯ ಹೆಸರಿನಲ್ಲಿ ಸ್ಪರ್ಧಿಸಲಿಲ್ಲ. ಪಕ್ಷದಲ್ಲಿ ಯಾರು ಇರಬೇಕು, ಯಾರು ಬರಬೇಕು ಎನ್ನುವುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಿ ಪಕ್ಷದ ಗೆಲುವಿಗಾಗಿ ಒಗ್ಗಟ್ಟಾಗಿ ಶ್ರಮಿಸಲಾಗುವುದು ಎಂದರು.

ಇದನ್ನೂ ಓದಿ;

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯುವತಿಯರ ಮೇಲಿನ ಪುನರಾವರ್ತಿತ ದಾಳಿಗೆ ಕಾರಣವೇನು ಎಂಬುದನ್ನು ಕಂಡುಹಿಡಿಯಬೇಕು: ಗೃಹ ಸಚಿವ

0
ಹುಬ್ಬಳ್ಳಿಯಲ್ಲಿ ನಡೆದ ಯುವತಿಯರ ಹತ್ಯೆ ಪ್ರಕರಣದ ನಂತರ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪ್ರತಿಪಕ್ಷ ಬಿಜೆಪಿ ಗುರಿಯಾಗಿಸಿದ್ದು, ಗೃಹ ಸಚಿವ ಜಿ ಪರಮೇಶ್ವರ ಅವರು, 'ಇಂತಹ ಪುನರಾವರ್ತಿತ...