HomeUncategorizedವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಯಾವುದೇ ಪ್ರಸ್ತಾವನೆ ಇಲ್ಲ : ಸಂಸತ್ತಿಗೆ ತಿಳಿಸಿದ ಕೇಂದ್ರ

ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಯಾವುದೇ ಪ್ರಸ್ತಾವನೆ ಇಲ್ಲ : ಸಂಸತ್ತಿಗೆ ತಿಳಿಸಿದ ಕೇಂದ್ರ

- Advertisement -
- Advertisement -

ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಯಾವುದೇ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದೆ ಇಲ್ಲ ಎಂದು ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಬುಧವಾರ(11) ರಾಜ್ಯಸಭೆಗೆ ತಿಳಿಸಿದ್ದಾರೆ.

ತೃಣಮೂಲ ಕಾಂಗ್ರೆಸ್ ಸಂಸದೆ ಸಾಗರಿಕಾ ಘೋಷ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2005ರ ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ರಕ್ಷಣೆ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74, 75, 76 ಮತ್ತು 85ರ ಅಡಿಯಲ್ಲಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕಾನೂನು ಪರಿಹಾರಗಳನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 375 ರ ವಿನಾಯಿತಿ 2 ರ ಪ್ರಕಾರ ಪುರುಷನು ತನ್ನ ಹೆಂಡತಿಯೊಂದಿಗೆ ಬಲವಂತದ ಲೈಂಗಿಕ ಸಂಭೋಗ ನಡೆಸುವಾಗ,ಆಕೆ 15 ವರ್ಷಕ್ಕಿಂತ ಕಡಿಮೆ ವಯಸ್ಸಿನವಳಾಗಿರದಿದ್ದರೆ ಅದು ಅತ್ಯಾಚಾರವಲ್ಲ. ಸೆಕ್ಷನ್ 375 ಅತ್ಯಾಚಾರದ ಅಪರಾಧವನ್ನು ವ್ಯಾಖ್ಯಾನಿಸುತ್ತದೆ. ಈ ನಿಬಂಧನೆಯು ಈಗ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 63 ರ ಅಡಿಯಲ್ಲಿ ಬರುತ್ತದೆ. ಜುಲೈ 1,2024ರಿಂದ ಭಾರತೀಯ ದಂಡ ಸಂಹಿತೆಯ ಬದಲಾಗಿ ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬಂದಿದೆ.

ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ 2013ರಲ್ಲಿ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವೈವಾಹಿಕ ಲೈಂಗಿಕ ಸಂಬಂಧದ ಒಪ್ಪಿಗೆಯ ವಯಸ್ಸನ್ನು 18 ಕ್ಕೆ ಹೆಚ್ಚಿಸಿದೆ. ಮಕ್ಕಳ ಹಕ್ಕುಗಳ ಸಂಸ್ಥೆ ಇಂಡಿಪೆಂಡೆಂಟ್ ಥಾಟ್ ವಿನಾಯಿತಿ 2 ರ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿತ್ತು. ಈ ನಿಬಂಧನೆಯು 15 ರಿಂದ 18 ವರ್ಷ ವಯಸ್ಸಿನ ವಿವಾಹಿತ ಹುಡುಗಿಯರ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ಅರ್ಜಿಯಲ್ಲಿ ಆರೋಪಿಸಿತ್ತು.

ಕ್ರಿಮಿನಲ್ ಕೋಡ್‌ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 74 ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಶಿಕ್ಷೆಯ ಬಗ್ಗೆ ವಿವರಿಸುತ್ತದೆ. ಸೆಕ್ಷನ್ 75 ಲೈಂಗಿಕ ಕಿರುಕುಳದ ಬಗ್ಗೆ ತಿಳಿಸುತ್ತದೆ. ಸೆಕ್ಷನ್ 76 ಆಕ್ರಮಣಕ್ಕಾಗಿ ಶಿಕ್ಷೆ ಮತ್ತು ವಸ್ತ್ರಾಪಹರಣ ಮಾಡುವ ಉದ್ದೇಶದಿಂದ ಕ್ರಿಮಿನಲ್ ಬಲವನ್ನು ಬಳಸುವುದಕ್ಕೆ ಸಂಬಂಧಿಸಿದೆ ಮತ್ತು ಸೆಕ್ಷನ್ 85 ಮಹಿಳೆಯ ಮೇಲೆ ಆಕೆಯ ಪತಿ ಅಥವಾ ಅವನ ಸಂಬಂಧಿಯಿಂದ ನಡೆದ ಕ್ರೌರ್ಯಕ್ಕಾಗಿ ಶಿಕ್ಷೆಯ ಬಗ್ಗೆ ವಿವರಿಸುತ್ತದೆ.

ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸಬೇಕೆಂಬ ಅರ್ಜಿಗೆ ಸಂಬಂಧಿಸಿದಂತೆ ಅಕ್ಟೋಬರ್ 2ರಂದು ಸುಪ್ರೀಂ ಕೋರ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸರ್ಕಾರ ಮದುವೆಯೆಂಬ ಸಾಂಸ್ಥಿಕ ವ್ಯವಸ್ಥೆಯಲ್ಲಿ ಒಪ್ಪಿತವಲ್ಲದ ಲೈಂಗಿಕ ಸಂಬಂಧವನ್ನು ಅತ್ಯಾಚಾರದ ಅಪರಾಧವಾಗಿ ಪರಿಗಣಿಸುವುದು ‘ಅತಿ ಕಠಿಣ’ನಿಲುವು ಎಂದಿತ್ತು. ಬಲವಂತದ ಲೈಂಗಿಕ ಕ್ರಿಯೆಯನ್ನು ವೈವಾಹಿಕ ಜೀವನದ ಒಳಗೆ ಮತ್ತು ಹೊರಗೆ ಭಿನ್ನವಾಗಿ ಪರಿಗಣಿಸಲಾಗುತ್ತದೆ ಎಂದು ಹೇಳಿತ್ತು.

ಇದನ್ನೂ ಓದಿ :

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...