“ಶಕ್ತಿ ಯೋಜನೆಯನ್ನು ಮರುಪರಿಶೀಲನೆಗೆ ಒಳಪಡಿಸುವಂತೆ ಹಲವು ಮಹಿಳೆಯರು ಸಾಮಾಜಿಕ ಜಾಲತಾಣ ಎಕ್ಸ್ ಮತ್ತು ಇ-ಮೇಲ್ ಮೂಲಕ ಮನವಿ ಮಾಡಿದ್ದಾರೆ” ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಿನ್ನೆ (ಅ.30) ಹೇಳಿದ್ದರು.
ಆ ಬಳಿಕ ‘ಶಕ್ತಿ’ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸುತ್ತದೆ ಎಂಬ ಚರ್ಚೆಗಳು ಗರಿಗೆದರಿದೆ. ರಾಜ್ಯ, ರಾಷ್ಟ್ರ ಮಟ್ಟದ ಮಾಧ್ಯಗಳು ಈ ವಿಷಯದ ಮೇಲೆ ನಿನ್ನೆಯಿಂದ ನಿರಂತರ ಸುದ್ದಿ ಪ್ರಕಟಿಸುತ್ತಿದೆ. ಬಿಜೆಪಿ-ಜೆಡಿಎಸ್ ನಾಯಕರು ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ವಿರುದ್ದ ವಾಗ್ದಾಳಿ ನಡೆಸುತ್ತಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, “ಶಕ್ತಿ ಯೋಜನೆಯನ್ನು ಪರಿಷ್ಕರಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ. ಕೆಲ ಮಹಿಳೆಯರು ಮನವಿ ಮಾಡಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನನಗೆ ಆ ಬಗ್ಗೆ ಗೊತ್ತಿಲ್ಲ. ಆದರೆ, ಸರ್ಕಾರದ ಮುಂದೆ ಶಕ್ತಿ ಯೋಜನೆಯನ್ನು ಪರಿಷ್ಕರಿಸುವ ಯಾವುದೇ ಪ್ರಸ್ತಾವ ಇಲ್ಲ. ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ” ಎಂದು ಸ್ಪಷ್ಟಪಡಿಸಿದ್ದಾರೆ.
"ಶಕ್ತಿ ಯೋಜನೆ ಪರಿಷ್ಕರಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ". ಎಲ್ಲಾ ಗ್ಯಾರಂಟಿ ಯೋಜನೆಗಳು ನೂರಕ್ಕೆ ನೂರರಷ್ಟು ಮುಂದುವರೆಯಲಿವೆ.
ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ಬಿಜೆಪಿ ಪ್ರತಿಭಟನೆ ಮಾಡುತ್ತಿರುವುದು ವಿಪರ್ಯಾಸ. ತಮ್ಮ ಸರ್ಕಾರದ ಅವಧಿಯಲ್ಲಿಯೇ ಸುಮಾರು 200ಕ್ಕೂ ಹೆಚ್ಚು…
— Siddaramaiah (@siddaramaiah) October 31, 2024
ಇದನ್ನೂ ಓದಿ : ಶಕ್ತಿ ಯೋಜನೆ ಮರುಪರಿಶೀಲನೆ : ಡಿ.ಕೆ ಶಿವಕುಮಾರ್ ಸುಳಿವು


