Homeರಾಷ್ಟ್ರೀಯಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಯುವಕರು ಸೈನ್ಯದಿಂದ ನಿವೃತ್ತಿ ಹೊಂದುವಾಗ ದೇಶ 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆ ಹೊಂದಿರುತ್ತದೆ, ಈ ವೇಳೆ ನಿರುದ್ಯೋಗದ ಸಮಸ್ಯೆ ಇರುವುದಿಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಯುವಕರು ಪಡೆಗಳಿಂದ ನಿವೃತ್ತರಾಗುವ ಹೊತ್ತಿಗೆ, ಭಾರತವು 5 ಟ್ರಿಲಿಯನ್ ಡಾಲರ್‌‌ ಆರ್ಥಿಕತೆಯನ್ನು ಹೊಂದುತ್ತದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೆ ಇಲ್ಲ. ಇದು ಸಶಸ್ತ್ರ ಪಡೆಗಳು ಮತ್ತು ಅದರ ಮೂಲಕ ತರಬೇತಿ ಪಡೆಯುವ ಯುವಕರ ಒಳಿತಿಗಾಗಿ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್‌ ದೋವಲ್ ಮಂಗಳವಾರ ಹೇಳಿದ್ದಾರೆ.

ಪಡೆಗಳಿಂದ ನಿವೃತ್ತರಾಗುವ ವೇಳೆ ಶಿಸ್ತುಬದ್ಧ, ತರಬೇತಿ ಪಡೆದ ಯುವಕರನ್ನು ನೇಮಿಸಿಕೊಳ್ಳಲು ಉದ್ಯಮಗಳು ಸ್ಪರ್ಧಿಸುತ್ತವೆ, ಹೀಗಾಗಿ ಅಗ್ನಿವೀರ್‌ಗಳಿಗೆ ಸಾಕಷ್ಟು ಉದ್ಯೋಗಾವಕಾಶಗಳನ್ನು ಹೊಂದಿರುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇದು ತಕ್ಷಣಕ್ಕೆ ತೆಗೆದುಕೊಂಡ ಪ್ರತಿಕ್ರಿಯೆಯೂ ಅಲ್ಲ. ಈ ಬಗ್ಗೆ ದಶಕಗಳಿಂದ ಚರ್ಚೆಯಾಗುತ್ತಿದೆ. 1970 ರ ದಶಕದಲ್ಲಿ, ನಾವು ಜನರಲ್ ಕೃಷ್ಣರಾವ್ ಸಮಿತಿ ರಚಿಸಿದ್ದೆವು. ಅದರಲ್ಲಿ ಜನರಲ್ ಚಿಬ್ಬರ್ ಮತ್ತು ಜನರಲ್ ಸುಂದರ್ ಸದಸ್ಯರಾಗಿದ್ದರು. ಮಾನವಶಕ್ತಿ ನೀತಿ ಸೇರಿದಂತೆ ಸೇನೆಯನ್ನು ಸುಧಾರಿಸುವ ಕುರಿತು ಅವರು ಮಾತನಾಡಿದ್ದರು” ಎಂದು ಅಜಿತ್ ದೋವಲ್ ಹೇಳಿದ್ದಾರೆ.

ಇದನ್ನೂ ಓದಿ: ‘ಅಗ್ನಿಪಥ್’ ವಿರೋಧಿಸಿ ಭಾರತ ಬಂದ್‌: ದೇಶಾದ್ಯಂತ 500 ರೈಲುಗಳು ರದ್ದು!

ಅದರ ನಂತರ 1989 ರಲ್ಲಿ ಅರುಣ್ ಸಿಂಗ್ ವರದಿ ಇತ್ತು. ನಂತರ ಒಂದು ಗುಂಪಿನ ಮಂತ್ರಿಗಳ ವರದಿ ಇತ್ತು .. ಸುಬ್ರಮಣ್ಯಂ ಸಮಿತಿಯ ವರದಿ, ಕಾರ್ಗಿಲ್ ಸಮಿತಿಯ ವರದಿ…ಇವೆಲ್ಲವೂ ಇದೇ ರೀತಿಯ ಮಾದರಿಯ ವರದಿಯಾಗಿತ್ತು. ಆದರೆ ಆಗ ಇದ್ದ ಒಂದು ಸಮಸ್ಯೆ ಏನೆಂದರೆ, ಇದು ಅಗತ್ಯ ಎಂದು ಎಲ್ಲರಿಗೂ ತಿಳಿದಿದ್ದರೂ, ಅಪಾಯವನ್ನು ತೆಗೆದುಕೊಳ್ಳುವ ಸಾಮರ್ಥ್ಯ ಮತ್ತು ಇಚ್ಛೆ ಯಾರಿಗೂ ಇರಲಿಲ್ಲ ಎಂದು ದೋವಲ್ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಬಿಜೆಪಿ ಸರ್ಕಾರ ಜಾರಿ ಮಾಡಿರುವ ಹೊಸ ಯೋಜನೆಯಾದ ಅಗ್ನಿಪಥ್‌ ವಿರೋಧಿಸಿ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿರುವ ಮಧ್ಯೆ, ಅಜಿತ್ ದೋವಲ್ ಈ ಹೇಳಿಕೆಯನ್ನು ನೀಡಿದ್ದಾರೆ. ಈ ಯೋಜನೆಯಲ್ಲಿ ಯುವಕರನ್ನು 15 ವರ್ಷಗಳ  ಬದಲಾಗಿ ನಾಲ್ಕು ವರ್ಷಗಳ ಅವಧಿಗೆ ಜವಾನ್ ಮಟ್ಟದಲ್ಲಿ ಮಾತ್ರ ನೇಮಕ ಮಾಡಲಾಗುತ್ತದೆ.

ಸೇನೆಯಲ್ಲಿ ನಾಲ್ಕು ವರ್ಷಗಳು ಸೇವೆ ಮಾಡಿದ ನಂತರ ನಿರುದ್ಯೋಗಿಗಲಾಗುತ್ತಾರೆ ಎಂಬ ವಾದವನ್ನು ಅವರು ನಿರಾಕರಿಸಿದ್ದು, ‘ತಪ್ಪು ತಿಳುವಳಿಕೆಯನ್ನು ಸೃಷ್ಟಿಸಲಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

“ನಾವು 22 ಅಥವಾ 23 ವರ್ಷ ವಯಸ್ಸಿನ ಯುವಕನ ಬಗ್ಗೆ ಮಾತನಾಡುತ್ತಿದ್ದೇವೆ. ನಾಲ್ಕು ವರ್ಷಗಳ ಸೇವೆ ಮಾಡಿ ಶಿಸ್ತುಬದ್ಧವಾಗಿ, ತಂಡದಲ್ಲಿ ಕೆಲಸ ಮಾಡುವ ಸಾಮರ್ಥ್ಯವನ್ನು ಪಡೆಯುತ್ತಾನೆ. ಕೌಶಲ್ಯಗಳನ್ನು ಕಲಿಯುತ್ತಾನೆ, ಆತ್ಮವಿಶ್ವಾಸವನ್ನು ಬೆಳೆಸಿಕೊಂಳ್ಳುತ್ತಾನೆ, ತರಬೇತಿ ಹೊಂದುತ್ತಾನೆ ಮತ್ತು ಅಖಿಲ ಭಾರತ ದೃಷ್ಟಿಕೋನವನ್ನು ಪಡೆಯುತ್ತಾನೆ. ಸಮಾಜವನ್ನು ಎದುರಿಸಲು ಹೆಚ್ಚು ಸಜ್ಜಾಗುತ್ತಾರೆ. ಇಷ್ಟೇ ಅಲ್ಲದೆ, ಅವರಿಗೆ ಪ್ಲಸ್ ಟುಗೆ ಸಮಾನವಾದ ಅರ್ಹತೆಯನ್ನು ನೀಡಲಾಗುತ್ತದೆ. ಜೊತೆಗೆ ಅವರ ಬಳಿ 11 ಲಕ್ಷ ರೂಪಾಯಿ ಇರುತ್ತದೆ ಅದನ್ನು ಅವರು ಹೆಚ್ಚಿನ ಅಧ್ಯಯನಕ್ಕೆ ಬಳಸಬಹುದು” ಎಂದು ಅಜಿತ್‌ ದೋವಲ್ ಹೇಳಿದ್ದಾರೆ.

“ಅಗ್ನಿವೀರ್ ನಿವೃತ್ತಿಯಾಗುವ ಹೊತ್ತಿಗೆ ಭಾರತವು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ. ಖಾಸಗಿ ವಲಯದಲ್ಲಿ ಸಾಕಷ್ಟು ಅವಕಾಶಗಳು ದೊರೆಯಲಿವೆ. ಕೈಗಾರಿಕೆಗಳು ಶಿಸ್ತುಬದ್ಧ ಮತ್ತು ತರಬೇತಿ ಪಡೆಯುವ ಜನರನ್ನು ನೇಮಿಸಿಕೊಳ್ಳಲು ಬಯಸುತ್ತವೆ. ಅವರ ಚಿಕ್ಕ ವಯಸ್ಸು ಅವರ ದೊಡ್ಡ ಆಸ್ತಿ. ಅವರ ಭವಿಷ್ಯವು ಸಂಪೂರ್ಣವಾಗಿ ಸುರಕ್ಷಿತವಾಗಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.

ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ದೋವಲ್, “ಇದರಲ್ಲಿ ಎರಡು ಗುಂಪಿನ ಜನರ ವಿರೋಧವಿದೆ. ಮೊದಲನೆಯದಾಗಿ ಸೇನಾ ಯೋಧರು ಇದ್ದು, ಅವರು ಸಂಪೂರ್ಣ ಮಾಹಿತಿಯ ಕೊರತೆಯಿಂದ ವಿರೋಧಿಸುತ್ತಿದ್ದಾರೆ. ಎರಡನೆಯದ್ದು ಪಟ್ಟಭದ್ರ ಹಿತಾಸಕ್ತಿ ಹೊಂದಿರುವವರು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌: ಬೆಳಗಾವಿಯಲ್ಲಿ ಆಂದೋಲನ ತಡೆಯಲು ಬಿಗಿ ಭದ್ರತೆ; ವಿದ್ಯಾರ್ಥಿ ನಾಯಕರು ವಶಕ್ಕೆ

“ಇವರು ರಾಷ್ಟ್ರದ ಭದ್ರತೆಯ ಬಗ್ಗೆ ಯಾವುದೇ ಕಾಳಜಿಯನ್ನು ಹೊಂದಿಲ್ಲ ಅಥವಾ ಅವರು ರಾಷ್ಟ್ರಕ್ಕೆ ಸಮರ್ಪಿತರಾಗಿಲ್ಲ. ಅವರು ಸಂಘರ್ಷದ ಉದ್ಯಮಿಗಳು. ಇವರು ಕಲ್ಲು ತೂರಾಟ, ಪ್ರತಿಭಟನೆಗಳು ಮತ್ತು ರೈಲುಗಳನ್ನು ಸುಡುವ ಜನರು. ಇದರಲ್ಲಿ ಅಗ್ನಿವೀರ್ ಎಂದಿಗೂ ದಾರಿ ತಪ್ಪುವುದಿಲ್ಲ. ಪ್ರತಿಭಟಿಸುವವರಲ್ಲಿ ಯಾರೊಬ್ಬರೂ ಪಡೆಗಳನ್ನು ಸೇರಲು ಆಸಕ್ತಿ ಹೊಂದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...