Homeಮುಖಪುಟಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ: ಶರದ್ ಪವಾರ್ ಸ್ಪಷ್ಟನೆ

ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ: ಶರದ್ ಪವಾರ್ ಸ್ಪಷ್ಟನೆ

- Advertisement -
- Advertisement -

”ಮಹಾರಾಷ್ಟ್ರದಲ್ಲಿ ನಮ್ಮ ಪಕ್ಷ ಬಿಜೆಪಿ ಜೊತೆ ಕೈಜೋಡಿಸುವ ಪ್ರಶ್ನೆಯೇ ಇಲ್ಲ” ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ.

”2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ನಂತರ ಶರದ್ ಪವಾರ್ ಬಿಜೆಪಿಯನ್ನು ಸಂಪರ್ಕ ಮಾಡಿದ್ದರು. ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಎನ್​ಸಿಪಿ ಮತ್ತು ಬಿಜೆಪಿ ನಡುವೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಮಾತನಾಡಿದ್ದರು. ಆ ವೇಳೆ 2019ರಲ್ಲಿ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಶರದ್ ಪವಾರ್ ಸಲಹೆ ನೀಡಿದ್ದರು. ಆದರೆ, ಕೊನೆಗೆ ಅವರೇ ಆ ಮೈತ್ರಿಯ ನಿರ್ಧಾರದಿಂದ ಹಿಂದೆ ಸರಿದರು” ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿಕೆ ನೀಡಿದ್ದರು.

”ದೇವೇಂದ್ರ ಫಡ್ನವಿಸ್ ಅವರ ಹೇಳಿಕೆಯಿಂದ ನಮ್ಮ ಪಕ್ಷದ ಕಾರ್ಯಕರ್ತರು ಗೊಂದಲಕ್ಕೊಳಗಾಗಿದ್ದಾರೆ ಎಂದು ನನಗೆ ಅನಿಸುವುದಿಲ್ಲ” ಎಂದು ಶರದ್ ಪವಾರ್ ಹೇಳಿದ್ದಾರೆ.

ನಮ್ಮ INDIA ಮೈತ್ರಿಕೂಟ ಮತ್ತು 2024ರ ಚುನಾವಣೆಯಲ್ಲಿ ಬಿಜೆಪಿ ವಿರುದ್ಧದ ಹೋರಾಟದ ಬಗ್ಗೆ ಮಾತನಾಡಿದ ಶರದ್ ಪವಾರ್, ”ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಾರದು” ಎಂದು ಹೇಳಿದ್ದಾರೆ.

”ಮಹಾರಾಷ್ಟ್ರದಲ್ಲಿ ಇಂದೇ ವಿಧಾನಸಭೆ ಚುನಾವಣೆ ನಡೆದರೂ ಎನ್‌ಸಿಪಿ, ಕಾಂಗ್ರೆಸ್, ಉದ್ಧವ್ ಠಾಕ್ರೆ ಅವರ ಶಿವಸೇನೆಯನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ಸರ್ಕಾರವು ರಾಜ್ಯ ಸರ್ಕಾರವನ್ನು ರಚಿಸಲಿದೆ” ಎಂದು ಶರದ್ ಪವಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಎಪಿ ಸಂಸದರ ವಿರುದ್ಧ ಇಡಿ ಕ್ರಮದ ಕುರಿತು ಮಾತನಾಡಿದ ಶರದ್ ಪವಾರ್, ”ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಇದು ಅವರ ವಿರುದ್ಧ ಮತ್ತು ಪರೋಕ್ಷವಾಗಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಸೇಡಿನ ರಾಜಕೀಯವಾಗಿದೆ” ಎಂದು ಆರೋಪಿಸಿದರು.

ಇದನ್ನೂ ಓದಿ: ಶಿವಮೊಗ್ಗ ಕೋಮು ಗಲಭೆಗೆ ಟ್ವಿಸ್ಟ್: ಬಜರಂಗದಳದ ರೋಹನ್ ಕಲ್ಲೆಸೆತವೇ ಸಂಘರ್ಷಕ್ಕೆ ಕಾರಣವಾಯ್ತಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...