Homeಚಳವಳಿ‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

‘ಜಾಮೀನು ನಿರಾಕರಿಸಲು ಕಾರಣವೇ ಇಲ್ಲ’: ತೀಸ್ತಾ ಸೆಟಲ್ವಾಡ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್

ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ

- Advertisement -
- Advertisement -

ಖ್ಯಾತ ಪತ್ರಕರ್ತೆ, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್‌ನಲ್ಲಿ ಎರಡು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿ ಇರಿಸಿರುವ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಆರು ವಾರಗಳ ನಂತರ ಉತ್ತರ ನೀಡುವಂತೆ ಗುಜರಾತ್ ಹೈಕೋರ್ಟ್ ನೋಟಿಸ್ ನೀಡಿದ್ದು ಹೇಗೆ ಎಂದು ಪ್ರಶ್ನಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಪೀಠವು,“ಈ ಪ್ರಕರಣದಲ್ಲಿ ಅದೂ ಕೂಡಾ ಒಬ್ಬ ಮಹಿಳೆಗೆ ಜಾಮೀನು ನೀಡಲಾಗದಂತಹ ಯಾವುದೇ ಅಪರಾಧವಿಲ್ಲ” ಎಂದು ಹೇಳಿದೆ. ತೀಸ್ತಾ ಅವರು ಎರಡು ತಿಂಗಳಿಗೂ ಹೆಚ್ಚು ಕಾಲ ಜೈಲಿನಲ್ಲಿದ್ದರೂ ಯಾವುದೇ ಆರೋಪಪಟ್ಟಿ ಸಲ್ಲಿಸಿಲ್ಲ ಎಂದು ನ್ಯಾಯಮೂರ್ತಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರ್ಜಿದಾರರ ವಿರುದ್ಧ ಸಲ್ಲಿಸಲಾದ ಎಫ್‌ಐಆರ್‌ನಲ್ಲಿ ಸುಪ್ರೀಂ ಕೋರ್ಟ್‌ನ ಅವಲೋಕನಗಳ ಹೊರತಾಗಿ ಹೆಚ್ಚಿನದನ್ನು ಹೇಳಲಾಗಿಲ್ಲ ಎಂದು ಪೀಠ ಹೇಳಿದೆ. ಆಗಸ್ಟ್ 3 ರಂದು ತೀಸ್ತಾ ಅವರ ಜಾಮೀನು ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡುವಾಗ ಗುಜರಾತ್ ಹೈಕೋರ್ಟ್ ಪ್ರಕರಣವನ್ನು ದೀರ್ಘ ಮುಂದೂಡಿಕೆ ಮಾಡಿತ್ತು.

ಇದನ್ನೂ ಓದಿ: ತೀಸ್ತಾ, ಶ್ರೀಕುಮಾರ್ ಮತ್ತು ಜುಬೇರ್ ಬಂಧನ; ಭಾರತ ಇನ್ನೊಂದು ಸ್ವಾತಂತ್ರ್ಯ ಸಂಗ್ರಾಮದತ್ತ ಸಾಗುತ್ತಿದೆಯೇ?

ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಮತ್ತು ನ್ಯಾಯಮೂರ್ತಿ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ತೀಸ್ತಾ ಅವರ ಕಸ್ಟಡಿ ಬಂಧನಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಎತ್ತಿದೆ.

“ಅವರು ಮಹಿಳೆಯಾಗಿದ್ದು, ಆರು ವಾರಗಳ ನಂತರ ಉತ್ತರಿಸುವಂತೆ ಹೈಕೋರ್ಟ್‌ ಹೇಗೆ ನೋಟಿಸ್ ನೀಡಿತು? ಗುಜರಾತ್ ಹೈಕೋರ್ಟ್‌ನಲ್ಲಿ ಅದು ಪ್ರಮಾಣಿತ ಅಭ್ಯಾಸವೇ? ಅಂತಹ ಪ್ರಕರಣದಲ್ಲಿ ಮಹಿಳೆಯೊಬ್ಬರು ಭಾಗಿಯಾಗಿದ್ದು, ಈ ಹಿಂದೆ ಹೈಕೋರ್ಟ್ ಈ ರೀತಿ ಮಾಡಿದ ಉದಾಹರಣೆಗಳು ಇದ್ದರೆ ನಮಗೆ ನೀಡಿ” ಎಂದು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್‌ ಹೇಳಿದ್ದಾರೆ.

2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಜೂನ್ 25 ರಿಂದ ತೀಸ್ತಾ ಸೆಟಲ್ವಾಡ್ ಬಂಧನದಲ್ಲಿದ್ದಾರೆ.

ಇದನ್ನೂ ಓದಿ: ಅಧಿಕಾರಕ್ಕೆ ಸತ್ಯ ನುಡಿದ ತೀಸ್ತಾ ಬಂಧನ; ಸುಪ್ರೀಂ ಕೋರ್ಟ್ ತನ್ನ ಜವಾಬ್ದಾರಿಯನ್ನು ಮರೆಯಿತೇ?

“ಈ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯಿದೆ ಮತ್ತು ಭಯೋತ್ಪಾದನೆ ತಡೆ ಕಾಯ್ದೆಯಂತಹ ಜಾಮೀನು ನೀಡಲಾಗದ ಯಾವುದೇ ಅಪರಾಧವಿಲ್ಲ. ಇವು ಸಾಮಾನ್ಯ ಅಪರಾಧಗಳಾಗಿದ್ದು, ಮಹಿಳೆಯು ಅನುಕೂಲಕರವಾದ ನಡೆಗೆ ಅರ್ಹಳು” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನಿನ್ನೆಯ ವಿಚಾರಣೆಯನ್ನು ಮುಂದೂಡುವಂತೆ ಕೋರಿದರು. “ಈ ಎಲ್ಲಾ ವಾದಗಳನ್ನು ಹೈಕೋರ್ಟ್‌ನಲ್ಲಿ ಮಾಡಬೇಕೇ ಹೊರತು ಸುಪ್ರೀಂ ಕೋರ್ಟ್‌ನಲ್ಲಿ ಅಲ್ಲ. ಅದು ನನ್ನ ಪ್ರಾಥಮಿಕ ಆಕ್ಷೇಪಣೆ” ಎಂದು ಅವರು ಹೇಳಿದ್ದಾರೆ.

ತೀಸ್ತಾ ಪರ ವಕೀಲರಾದ ಹಿರಿಯ ವಕೀಲ ಕಪಿಲ್ ಸಿಬಲ್, “ನಾನು ಎಫ್‌ಐಆರ್ ಅನ್ನೇ ಸವಾಲು ಮಾಡುತ್ತಿದ್ದೇನೆ. ಇಲ್ಲಿ ಎಫ್‌ಐಆರ್ ಇರುವಂತಿಲ್ಲ. ನಾನು ಯಾವ ನಕಲಿ ದಾಖಲೆ ಮಾಡಿದ್ದೇನೆ ಎಂಬುದನ್ನು ಎಫ್‌ಐಆರ್ ಬಹಿರಂಗಪಡಿಸುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಂದ್ರ ಮೋದಿ ವಿರುದ್ಧ ದಿವಂಗತ ಅಹ್ಮದ್ ಪಟೇಲ್ ಸಂಚು – ತೀಸ್ತಾ ಅದರ ಭಾಗ: ಗುಜರಾತ್‌ ಪೊಲೀಸ್ ಆರೋಪ 

ಗುಜರಾತಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಗುಜರಾತ್ ಗಲಭೆಯ ಸಮಯದಲ್ಲಿ ದೊಡ್ಡ ಪಿತೂರಿಯಲ್ಲಿ ಯಾವುದೇ ತಪ್ಪು ಮಾಡಿಲ್ಲ ಎಂದು ವಿಶೇಷ ತನಿಖಾ ತಂಡವನ್ನು ಪ್ರಶ್ನಿಸಿ ತನ್ನ ಕಕ್ಷಿದಾರೆ ಝಕಿಯಾ ಜಾಫ್ರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಒಂದು ದಿನದ ನಂತರ, ಗುಜರಾತ್ ಪೋಲೀಸರ ಭಯೋತ್ಪಾದನಾ ನಿಗ್ರಹ ದಳವು ಮುಂಬೈನಲ್ಲಿ ತೀಸ್ತಾ ಅವರನ್ನು ಬಂಧಿಸಿತು.

ತೀಸ್ತಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ (ಇಂದು) ಮಧ್ಯಾಹ್ನ 2 ಗಂಟೆಗೆ ಮತ್ತೆ ಕೈಗೆತ್ತಿಕೊಳ್ಳಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳ ಪರೀಕ್ಷೆ, ಸಂತ್ರಸ್ತರಿಗೆ ಪರಿಹಾರ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

0
ಔಷಧೀಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಗಳನ್ನು ಉಂಟು ಮಾಡಬಹುದು ಎಂದು ಒಪ್ಪಿಕೊಂಡ ಹಿನ್ನೆಲೆ, ವಕೀಲರೊಬ್ಬರು ಈ ಲಸಿಕೆಯ ಅಡ್ಡ ಪರಿಣಾಮಗಳು ಮತ್ತು ಅಪಾಯದ ಅಂಶಗಳನ್ನು ಪರೀಕ್ಷಿಸಲು ವೈದ್ಯಕೀಯ...